ʼಉಪ ಚುನಾವಣೆಗೆ ಮೋದಿ ಹೆಸರು ಹೇಳಿ 1 ಸಾವಿರ ಕೋಟಿ ರೂ. ಹಣ ಸಂಗ್ರಹಿಸಿರುವ ಕುಮಾರಸ್ವಾಮಿʼ
ಬೆಂಗಳೂರು, ನವೆಂಬರ್ 11: ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ ಹಾಗೂ ಕರ್ನಾಟಕದ ಉಪ ಚುನಾವಣೆಗಳಿಗೆ ಮೋದಿ ಅವರ ಹೆಸರಿನಲ್ಲಿ ಉಕ್ಕು ಕಂಪನಿಗಳಿಂದ 1 ಸಾವಿರ ಕೋಟಿ ರೂಪಾಯಿಗಳನ್ನು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಸಂಗ್ರಹಿಸಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ .
ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಗಳನ್ನು ಶತಾಯಗತಾಯ ಗೆಲ್ಲಬೇಕು ಎಂದು ಬಿಜೆಪಿ ಮಿತ್ರ ಪಕ್ಷಗಳು ವಾಮ ಮಾರ್ಗ ಹಿಡಿದಿವೆ. ಅಲ್ಲಿ ಹಣದ ಹೊಳೆಯನ್ನೇ ಹರಿಸಲು ಎಲ್ಲ ತಯಾರಿ ನಡೆಸಿಕೊಂಡಿದೆ. ಮಾತ್ರವಲ್ಲ ಕರ್ನಾಟಕದ ಉಪ ಚುನಾವಣೆಯಲ್ಲಿ ಮುಖ್ಯವಾಗಿ ಚೆನ್ನಪಟ್ಟಣದಲ್ಲಿ ಸೋಲಿನ ಭೀತಿ ಹೊಂದಿರುವ ಬಿಜೆಪಿ ಇಲ್ಲಿಯೂ ದೊಡ್ಡ ಪ್ರಮಾಣದಲ್ಲಿ ಹಣ ಸುರಿಯಲು ಮುಂದಾಗಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು.

ಚುನಾವಣೆಗಳ ಜವಾಬ್ದಾರಿ ಹೊತ್ತಿರುವ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಭಾರತದ ವಿವಿಧೆಡೆ ಮತ್ತು ರಾಜ್ಯದ ಉಕ್ಕು ಕಂಪನಿಗಳಿಂದ 1 ಸಾವಿರ ಕೋಟಿ ರೂ.ಗೂ ಅಧಿಕ ಹಣವನ್ನು ಸಂಗ್ರಹ ಮಾಡಿದ್ದಾರೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ನೇರವಾಗಿ ಆರೋಪ ಮಾಡಿದ್ದಾರೆ.
ಉಕ್ಕಿನ ಕೈಗಾರಿಕೆಗಳಿಂದ ಹಣ ಸಂಗ್ರಹಿಸಿರುವ ಬಗ್ಗೆ ನಮಗೆ ಆಂತರಿಕ ಮಾಹಿತಿ ಬಂದಿದೆ. ಮಾತ್ರವಲ್ಲ ಉಕ್ಕಿನ ಕೈಗಾರಿಕೋದ್ಯಮಿಗಳೂ ಈ ಕುರಿತು ಮಾಹಿತಿ ನೀಡಿದ್ದಾರೆ. ಇದು ರಾಷ್ಟ್ರದ ಬಹು ದೊಡ್ಡ ಹಗರಣವಾಗಿದ್ದು, ಇ.ಡಿ., ಮುಂತಾದ ತನಿಖಾ ಸಂಸ್ಥೆಗಳು ಇಂಥ ವಿಷಯವನ್ನು ತನಿಖೆ ನಡೆಸಬೇಕು ಎಂದು ಚೆಲುವರಾಯಸ್ವಾಮಿ ಅವರು ಒತ್ತಾಯಿಸಿದರು.
ಮಹಾರಾಷ್ಟ್ರದಲ್ಲಿ, ಕರ್ನಾಟಕದಲ್ಲಿ, ಗೋವಾದಲ್ಲಿ ಆಪರೇಶನ್ ಮಾಡಿ ಎಕ್ಸ್‌ಪರ್ಟ್ ಆಗಿರುವ ಬಿಜೆಪಿ ಚುನಾವಣೆಯ ಪಾವಿತ್ರ್ಯತೆಯನ್ನು ಕೆಡಿಸಲು ಹೊರಟಿದೆ. ಹಣದ ಹೊಳೆ ಹರಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ನೆಲೆಘಟ್ಟನ್ನೇ ಅಲುಗಾಡಿಸಲು ಹೊರಟಿದೆ ಎಂದು ಚೆಲುವರಾಯಸ್ವಾಮಿ ಆರೋಪಿಸಿದ್ದಾರೆ.
ಚುನಾವಣಾ ಆಯೋಗ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎನ್.ಚೆಲುವರಾಯಸ್ವಾಮಿ ಮನವಿ ಮಾಡಿದ್ದಾರೆ. ತಮಗೆ ದೇಣಿಕೆ ನೀಡದ ಕಂಪನಿಗಳ ವಿರುದ್ಧ ಇ.ಡಿ., ಐಟಿ ಮುಂತಾದ ತನಿಖಾ ಸಂಸ್ಥೆಗಳಿಂದ ದಾಳಿ ಮಾಡಿಸುವ ತಂತ್ರವನ್ನು ಬಿಜೆಪಿ ಎಂದಿನಿಂದ ನಡೆಸಿಕೊಂಡು ಬಂದಿದೆ. ಈ ಹಿಂದೆ ಬಿಜೆಪಿ ವಿವಿಧ ಕಂಪನಿಗಳಿಂದ ಚುನಾವಣಾ ಬಾಂಡ್ ಹೆಸರಲ್ಲಿ 1,751 ಕೋಟಿ ರೂ.ಗಳನ್ನು ಪಡೆದುಕೊಂಡಿತ್ತು.
ಇದು ರಾಷ್ಟ್ರದ ಅತಿ ದೊಡ್ಡ ಹಗರಣವಾಗಿದೆ. ಕುಮಾರಸ್ವಾಮಿ ಅವರ ವಿರುದ್ಧ ಅಕ್ರಮ ಗಣಿಗಾರಿಕೆ ಕಿಕ್ ಬ್ಯಾಕ್ ಆರೋಪವೂ ಕೇಳಿ ಬಂದಿತ್ತು. ಅವುಗಳನ್ನೆಲ್ಲ ವ್ಯವಸ್ಥಿತವಾಗಿ ಮುಚ್ಚಿ ಹಾಕಿರುವ ಬಿಜೆಪಿ ಈಗ ಕಂಪನಿಗಳಿಂದ ಮತ್ತೆ ದೊಡ್ಡ ಪ್ರಮಾಣದಲ್ಲಿ ಹಣ ವಸೂಲಿ ಮಾಡಿ ಅವುಗಳನ್ನು ಮುಚ್ಚಿ ಹಾಕಲು ತಂತ್ರ ರೂಪಿಸಿದೆ. ಆದರೆ, ಈ ಬಾರಿ ಅವರ ತಂತ್ರ ಫಲಿಸದು ಎಂದು ಎನ್.ಚೆಲುವರಾಯಸ್ವಾಮಿ ಹೇಳಿದ್ದಾರೆ.
ಎಚ್ಚಿಕೆ ಚುನಾವಣೆಯ ಕೊನೆಯಲ್ಲಿ ಬರೋದನ್ನ ಕಲಿತಿದ್ದಾರೆ, ಚುನಾವಣೆಗೆ ಹಣ, ಆಮಿಷ, ಕಣ್ಣೀರು ಕೆಲಸ ಮಾಡಲ್ಲ, ಮಾಡಿರುವ ಕೆಲಸಗಳನ್ನ ಜನ ನೋಡಿದ್ದಾರೆ. ಜನಸಂಪರ್ಕ ಚುನಾವಣೆಯಲ್ಲಿ ಶಕ್ತಿ ತೋರಲಿದೆ. ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಚನ್ನಪಟ್ಟಣ ಕ್ಷೇತ್ರಕ್ಕೆ, ಜಲ ಸಂಪನ್ಮೂಲಕ್ಕೆ ತಮ್ಮದೇ ಆದ ಕೊಡುಗೆ, ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಚನ್ನಪಟ್ಟಣ ಅಭಿವೃದ್ಧಿಗೆ ಶ್ರಮ ವಹಿಸಲಿದ್ದಾರೆ. ಅಭಿವೃದ್ಧಿ ಕಡೆ ಗಮನಕೊಟ್ಟು ಜನ ಮತ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications