ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವ್ಯತಿರಿಕ್ತ ಹೇಳಿಕೆ ಬೇಡ: ಕೈ-ಜೆಡಿಎಸ್ ಮುಖಂಡರಿಗೆ ಎಚ್‌ಡಿಕೆ ಸೂಚನೆ

|
Google Oneindia Kannada News

ಬೆಂಗಳೂರು, ಮೇ 18: ಇಂದು ಬೆಳಿಗ್ಗೆಯಷ್ಟೆ ಜೆಡಿಎಸ್‌ನ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಅವರು ಸರ್ಕಾರಕ್ಕೆ ಮುಜುಗರವಾಗುವ ರೀತಿಯ ಕೊಟ್ಟಿದ್ದ ಹೇಳಿಕೆಗೆ ಕುಮಾರಸ್ವಾಮಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಇಂದು ಮಧ್ಯಾಹ್ನದ ವೇಳೆಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಯಾಗುವ ಹೊಸ್ತಿಲಲ್ಲಿ ನಾವೆಲ್ಲ ಇದ್ದೇವೆ, ಇಂತಹಾ ಸಮಯದಲ್ಲಿ ಜೆಡಿಎಸ್, ಕಾಂಗ್ರೆಸ್ ನಾಯಕರು ವ್ಯತಿರಿಕ್ತ ಹೇಳಿಕೆಗಳನ್ನು ನೀಡಬಾರದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್, ಕಾಂಗ್ರೆಸ್ ಮುಖಂಡರ ವ್ಯತಿರಿಕ್ತ ಹೇಳಿಕೆಗಳು ನೀಡುವುದರಿಂದ, ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚಿಸುವ ನಮ್ಮ ಪ್ರಯತ್ನಕ್ಕೆ ಇದು ಅಡ್ಡಿಯಾಗಬಹುದು ಎಂದು ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

Kumaraswamy instructs congress-jds leaders to not give controversial statements

'ಉಭಯ ಪಕ್ಷಗಳ ಮುಖಂಡರು ಇಂತಹ ಆಶಯಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಯಾವುದೇ ವಿಭಿನ್ನ , ವಿವಾದಾತ್ಮಕ ಹೇಳಿಕೆ ನೀಡದಂತೆ ನನ್ನ ಕಳಕಳಿಯ ಮನವಿ' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಬೆಳಿಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ್ದ ಬಸವರಾಜ ಹೊರಟ್ಟಿ, ಸರ್ಕಾರವನ್ನು ವಿಸರ್ಜಿಸಿ ಮತ್ತೆ ಚುನಾವಣೆಗೆ ಹೋಗುವುದು ಒಳಿತು ಎಂದಿದ್ದರು, ಕಾಂಗ್ರೆಸ್‌ ಮೇಲೆ ಆರೋಪ ಹೊರಿಸಿದ್ದ ಅವರು, ಕಾಂಗ್ರೆಸ್ ಪಕ್ಷವು ಕುಮಾರಸ್ವಾಮಿ ಅವರಿಗೆ ಕೆಲಸ ಮಾಡಲು ಬಿಡುತ್ತಿಲ್ಲ ಎಂದಿದ್ದರು.

English summary
Kumaraswamy today instruct congress and JDS leaders to not give controversial statements. He said it may affect on forming government in central other than BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X