• search
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಸೇವಾ ಅವಧಿ ಮುಂದುವರಿಕೆಗೆ ಎಚ್‌ಡಿಕೆ ಪತ್ರ

By Manjunatha
|
   ಕರ್ನಾಟಕ ಮುಖ್ಯಕಾರ್ಯದರ್ಶಿಯ ಸೇವಾ ಅವಧಿ ಮುಂದುವರಿಕೆಗೆ ಎಚ್ ಡಿ ಕೆ ಮನವಿ | Oneindia Kannada

   ಬೆಂಗಳೂರು, ಜೂನ್ 19: ಇದೇ ತಿಂಗಳಾಂತ್ಯಕ್ಕೆ ಸೇವೆಯಿಂದ ನಿವೃತ್ತರಾಗುತ್ತಿರುವ ಕರ್ನಾಟಕ ರಾಜ್ಯ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಅವರ ಸೇವಾ ಅವಧಿಯನ್ನು ಆಡಳಿತ ಕಾರಣಗಳಿಗಾಗಿ ಇನ್ನೂ ಮೂರು ತಿಂಗಳು ಮುಂದುವರೆಸಲು ರಾಜ್ಯ ಸರ್ಕಾರ ನಿರ್ಧಾರ ತಳೆದಿದೆ.

   ಈ ಕುರಿತು ಕೇಂದ್ರಕ್ಕೆ ಪತ್ರ ಬರೆದಿದ್ದು, ಜುಲೈ ನಿಂದ ಸೆಪ್ಟೆಂಬರ್ ವರೆಗೆ ರತ್ನಪ್ರಭಾ ಅವರನ್ನು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಮುಂದುವರೆಸಲು ಅನುಮತಿ ನೀಡಬೇಕು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

   ಪ್ರಧಾನಿ ಮೆಚ್ಚುಗೆಗೆ ಪಾತ್ರರಾದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ

   1981r ಬ್ಯಾಚ್‌ನ ಐಎಎಸ್ ಅಧಿಕಾರಿ ಕೆ.ರತ್ನಪ್ರಭಾ ಅವರು ರಾಜ್ಯದ ಆಡಳಿತದ ಬಗ್ಗೆ ಆಳವಾದ ಜ್ಞಾನ ಹೊಂದಿದ್ದು, ಮುಂಬರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅವರ ಅವಶ್ಯಕತೆ ಇದೆ ಎಂದು ಪತ್ರದಲ್ಲಿ ಹೇಳಲಾಗಿದೆ.

   ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ವಿರುದ್ಧ ಎಸಿಬಿಗೆ ದೂರು

   ಆಡಳಿತದಲ್ಲಿ ಅಪಾರ ಅನುಭವ ಇರುವ ಕೆ.ರತ್ನಪ್ರಭಾ ಅವರು ಸಿದ್ದರಾಮಯ್ಯ ಅವರ ಆಡಳಿತ ಸಮಯದಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಆಯ್ಕೆ ಆಗಿದ್ದರು. ಕಳೆದ ವರ್ಷ ನವೆಂಬರ್ 30ರಂದು ರಾಜ್ಯದ ಮುಖ್ಯಕಾರ್ಯದರ್ಶಿಯಾಗಿ ಅವರು ಅಧಿಕಾರ ಸ್ವೀಕರಿಸಿದ್ದರು.

   ನಾಡಗೀತೆ ವೇಳೆ ಚೂಯಿಂಗ್ ಗಮ್ ಜಗಿದ ಮಹಿಳಾ ಐಎಎಸ್ ಅಧಿಕಾರಿ ಅಮಾನತು

   ಪ್ರಧಾನಿ ಅವರು ಕರೆದಿದ್ದ ಐಎಎಸ್‌ಗಳ ಸಭೆಯಲ್ಲಿ ಮೋದಿ ಅವರು ರತ್ನಪ್ರಭಾ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದನ್ನು ನೆನೆಯಬಹುದು.

   lok-sabha-home

   ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

   English summary
   State Chief secretory K.Rathna prabha retiring from service this month end. But CM Kumaraswamy wants her to continue her job for 3 more moths so he wrote letter to center requesting service extend for K.Ratnaprabha.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more