ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಕೀಯ ಹೈಡ್ರಾಮ : ಇಂದು ಸಂಜೆ ಬೆಂಗಳೂರಿಗೆ ಕುಮಾರಸ್ವಾಮಿ ವಾಪಸ್

|
Google Oneindia Kannada News

ಬೆಂಗಳೂರು, ಜುಲೈ 07 : ಶನಿವಾರದಿಂದ ಕರ್ನಾಟಕ ರಾಜಕೀಯ ಹೈಡ್ರಾಮಕ್ಕೆ ಸಾಕ್ಷಿಯಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಲ್ಪ ಮತಕ್ಕೆ ಕುಸಿಯುವ ಆತಂಕ ಎದುರಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಸಂಜೆ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.

ಜೂನ್ 8 ರಿಂದ ಜುಲೈ 6ರ ತನಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಮೆರಿಕ ಪ್ರವಾಸದಲ್ಲಿದ್ದರು. ಈಗಾಗಲೇ ಅವರು ನ್ಯೂಯಾರ್ಕ್‌ನಿಂದ ಹೊರಟಿದ್ದು, ಸಂಜೆ 8.30ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಕರ್ನಾಟಕದಲ್ಲಿ ರಾಜಕೀಯ ಬೃಹನ್ನಾಟಕ, ಯಡಿಯೂರಪ್ಪ ನಡೆ ಏನುಕರ್ನಾಟಕದಲ್ಲಿ ರಾಜಕೀಯ ಬೃಹನ್ನಾಟಕ, ಯಡಿಯೂರಪ್ಪ ನಡೆ ಏನು

ಕಾಂಗ್ರೆಸ್‌ನ 9, ಜೆಡಿಎಸ್‌ನ 3 ಶಾಸಕರು ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ರಮೇಶ್ ಕುಮಾರ್ ಅವರು ಮಂಗಳವಾರದ ತನಕ ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಅವರು ಬೆಂಗಳೂರಿಗೆ ಬರುತ್ತಿದ್ದಂತೆ ಸರ್ಕಾರ ಉಳಿಸಿಕೊಳ್ಳುವ ಕಸರತ್ತು ನಡೆಸುವ ನಿರೀಕ್ಷೆ ಇದೆ.

ದೊಡ್ಡಾಟದ ಮೂಲಕ ದೇವೇಗೌಡರಿಂದ ಸಿದ್ದರಾಮಯ್ಯಗೆ ಚೆಕ್ ಮೇಟ್?ದೊಡ್ಡಾಟದ ಮೂಲಕ ದೇವೇಗೌಡರಿಂದ ಸಿದ್ದರಾಮಯ್ಯಗೆ ಚೆಕ್ ಮೇಟ್?

Kumaraswamy

ಎಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿಗೆ ಬರುತ್ತಿದ್ದಂತೆ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

14 ಶಾಸಕರ ರಾಜೀನಾಮೆ, ದೋಸ್ತಿ ಸರ್ಕಾರ ಗಡಗಡ : ಕ್ಷಣ ಕ್ಷಣದ ಮಾಹಿತಿ14 ಶಾಸಕರ ರಾಜೀನಾಮೆ, ದೋಸ್ತಿ ಸರ್ಕಾರ ಗಡಗಡ : ಕ್ಷಣ ಕ್ಷಣದ ಮಾಹಿತಿ

ಕಾಂಗ್ರೆಸ್‌ನ ಶಾಸಕರಿಗಿಂತ ಜೆಡಿಎಸ್‌ನ ಎಚ್.ವಿಶ್ವನಾಥ್ (ಹುಣಸೂರು), ನಾರಾಯಣ ಗೌಡ (ಕೆ.ಆರ್.ಪೇಟೆ), ಕೆ.ಗೋಪಾಲಯ್ಯ (ಮಹಾಲಕ್ಷ್ಮೀ ಲೇಔಟ್) ರಾಜೀನಾಮೆ ನೀಡಿರುವುದು ಎಚ್.ಡಿ.ಕುಮಾರಸ್ವಾಮಿ ಅವರ ಚಿಂತೆಗೆ ಕಾರಣವಾಗಿದೆ.

ಕಾಂಗ್ರೆಸ್‌ನ 9 ಮತ್ತು ಜೆಡಿಎಸ್‌ನ 3 ಶಾಸಕರ ರಾಜೀನಾಮೆ ಬಗ್ಗೆ ಮಂಗಳವಾರ ಪರಿಶೀಲನೆ ನಡೆಸುವುದಾಗಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಹೇಳಿದ್ದಾರೆ. ಆದ್ದರಿಂದ, ಕಾಂಗ್ರೆಸ್‌-ಜೆಡಿಎಸ್‌ಗೆ ಸರ್ಕಾರವನ್ನು ಉಳಿಸಿಕೊಳ್ಳಲು ಮೂರು ದಿನಗಳ ಅವಕಾಶ ಸಿಕ್ಕಿದೆ.

English summary
Karnataka witnessing for political drama. Chief Minister H.D.Kumaraswamy will return to Bengaluru on July 7, 2019. Kumaraswamy in private visit to the US from June 28 to July 6, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X