ರಾಜ್ಯ ಸರ್ಕಾರ ಜಿಂದಾಲ್ ಮುಂದೆ ಮಂಡಿಯೂರಲು ಇದ್ದ ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ

ಬೆಂಗಳೂರು, ಏಪ್ರಿಲ್ 27: ರಾಜ್ಯ ಸರ್ಕಾರ ಏಕಾಏಕಿ ಜಿಂದಾಲ್ ಎದುರು ಮಂಡಿ ಊರಲು ಕಾರಣವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ ಎಂದಿದ್ದಾರೆ.

ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚೆನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ.

ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ ಎಂದು ಹೇಳಿದ್ದಾರೆ.

ವಿರೋಧ ಪಕ್ಷದಲ್ಲಿದ್ದಾಗ ವಿರೋಧ, ಅಧಿಕಾರದಲ್ಲಿದ್ದಾಗ ಸ್ವಾಗತ

ವಿರೋಧ ಪಕ್ಷದಲ್ಲಿದ್ದಾಗ ವಿರೋಧ, ಅಧಿಕಾರದಲ್ಲಿದ್ದಾಗ ಸ್ವಾಗತ

ವಿರೋಧಕ್ಕಾಗಿಯೇ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ 'ಸಂಸ್ಕೃತಿ'. ಜಿಂದಾಲ್‌ಗೆ ಭೂಮಿ ನೀಡುವ ವಿಚಾರದಲ್ಲಿ ಅಂದು ನನ್ನ ಸರ್ಕಾರದ ವಿರುದ್ಧ, ನನ್ನ ವಿರುದ್ಧ ಸಲ್ಲದ ಆರೋಪ ಮಾಡಿದ್ದ ಬಿಎಸ್‌ವೈ ಇಂದು ಅದೇ ಆರೋಪಗಳನ್ನು ತಮ್ಮ ಮೇಲೆ ಹೊತ್ತುಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ.
ಆಗ ಕಾಂಗ್ರೆಸ್‌ ಶಾಸಕರಾಗಿದ್ದ, ಈಗ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಆನಂದ್‌ ಸಿಂಗ್‌ ಜಿಂದಾಲ್‌ ಅನ್ನು'ಈಸ್ಟ್‌ ಇಂಡಿಯಾ ಕಂಪನಿ' ಎಂದಿದ್ದರು.

ಅಂದಿನ ಗೃಹ ಸಚಿವರು ಪತ್ರ ಬರೆದಿದ್ದರು

ಅಂದಿನ ಗೃಹ ಸಚಿವರು ಪತ್ರ ಬರೆದಿದ್ದರು

ಜಿಂದಾಲ್‌ ವಿರುದ್ಧ ಅಂದಿನ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಅವರೇ ಇರುವ ಈಗಿನ ಸಂಪುಟ ಸಭೆ ಜಿಂದಾಲ್‌ಗೆ ಭೂಮಿ ನೀಡಿದೆ. ಆನಂದ್‌ ಸಿಂಗ್‌ ಈಗ ಈಸ್ಟ್‌ ಇಂಡಿಯಾ ಕಂಪನಿ ಪರವಾಗಿದ್ದಾರಾ?. ಜಿಂದಾಲ್‌ಗೆ ಭೂಮಿ ನೀಡುವ ವಿಚಾರವಾಗಿ ಅಂದು ಮೈತ್ರಿ ಸರ್ಕಾರದ ಭಾಗವಾಗಿದ್ದುಕೊಂಡೇ ಟೀಕೆ ಮಾಡಿದ್ದ, ದಾಖಲೆ, ಪತ್ರಗಳನ್ನು ಬಿಡುಗಡೆ ಮಾಡಿದ್ದ ಎಚ್‌.ಕೆ ಪಾಟೀಲ್‌ ಅವರು ಈಗ ಏನು ಮಾಡುತ್ತಿದ್ದಾರೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ? ಈಗ ಅವುಗಳನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಯಾರು ಅಡ್ಡ ಇದ್ದಾರೆ? ಎಂದು ದೂರಿದ್ದಾರೆ.

ಜಿಂದಾಲ್‌ ಕಂಪನಿಗೆ 3667 ಎಕರೆ ಮಾರಾಟ

ಜಿಂದಾಲ್‌ ಕಂಪನಿಗೆ 3667 ಎಕರೆ ಮಾರಾಟ

ಜಿಂದಾಲ್‌ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡಲು ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದರೆ, ಎಕರೆವಾರು ಶುದ್ಧ ಕ್ರಯಕ್ಕೆ ನಿಗದಿ ಮಾಡಿದ ಮೊತ್ತವೆಷ್ಟು ಎಂಬ ಪ್ರಶ್ನೆಗೆ ಗೃಹ ಸಚಿವರೇ 'ಗೊತ್ತಿಲ್ಲ' ಎಂಬ ಉತ್ತರ ನೀಡಿದ್ದಾರೆ. ಸ್ವತಃ ಗೃಹ ಸಚಿವರಿಗೇ ಮಾಹಿತಿ ಇಲ್ಲ ಎಂದರೆ ಏನು ಅರ್ಥ? ಇದನ್ನು ನಂಬಲು ಸಾಧ್ಯವೇ ಎಂದಿರುವ ಅವರು, ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಶುದ್ಧ ಕ್ರಯ ಮಾಡಿಕೊಡಬೇಕಾದ್ದು ಕಾನೂನು. ಅದನ್ನೇ ನನ್ನ ಸರ್ಕಾರ ಮಾಡಲು ಹೊರಟಿತ್ತು.

ಸಂಶಯ ನಿವಾರಣೆಗೆ ಭೂಮಿ ನೀಡಲು ನಿರ್ಧರಿಸಿತ್ತು

ಸಂಶಯ ನಿವಾರಣೆಗೆ ಭೂಮಿ ನೀಡಲು ನಿರ್ಧರಿಸಿತ್ತು

ಆದರೆ ಬಿಜೆಪಿ ಕಿತಾಪತಿ ಮಾಡಿತ್ತು. ಜನರಲ್ಲಿ ಮೂಡಬಹುದಾದ ಸಂಶಯ ನಿವಾರಣೆ ಮಾಡಿ ನಂತರ ಭೂಮಿ ನೀಡುವ ನಿರ್ಧಾರಕ್ಕೆ ಬಂದ ನನ್ನ ಸರ್ಕಾರ ಮಾರಾಟ ಪ್ರಕ್ರಿಯೆಯನ್ನು ನಿಲ್ಲಿಸಿತ್ತು. ಬಿಜೆಪಿಗೆ ಈಗ ಜ್ಞಾನೋದಯವಾಗಿದೆ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+