ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಮಹಾಮೈತ್ರಿ'ಗೆ ವೇದಿಕೆಯಾಗಲಿದೆ ಕುಮಾರಸ್ವಾಮಿ ಪದಗ್ರಹಣ

By Sachhidananda Acharya
|
Google Oneindia Kannada News

ಬೆಂಗಳೂರು, ಮೇ 20: ದೇಶದಾದ್ಯಂತ ತೃತೀಯ ರಂಗ ಅಥವಾ ಪ್ರಧಾನಿ ನರೇಂದ್ರ ಮೋದಿ ವಿರೋಧಿಗಳ ಮಹಾ ಮೈತ್ರಿಯ ಬಗ್ಗೆ ಭಾರೀ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ, ಇವರೆಲ್ಲರ ಒಟ್ಟುಗೂಡಿಸುವಿಕೆಗೆ ಕರ್ನಾಟಕ ವೇದಿಕೆಯಾಗಲಿದೆ.

ಕರ್ನಾಟಕ ಮುಖ್ಯಮಂತ್ರಿಯಾಗಿ ಇದೇ ಬುಧವಾರ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಸಮಾರಂಭದಲ್ಲಿ ನರೇಂದ್ರ ಮೋದಿಯವರ ಸಮಾನ ವಿರೋಧಿಗಳೆಲ್ಲಾ ಭಾಗವಹಿಸಲಿದ್ದಾರೆ.

ಜೆಡಿಎಸ್ ಅನ್ನು ಬಿಜೆಪಿಯ ಬಿಟೀಂ ಎಂದಿದ್ದ ರಾಹುಲ್ ಭೇಟಿಗೆ ಎಚ್ಡಿಕೆಜೆಡಿಎಸ್ ಅನ್ನು ಬಿಜೆಪಿಯ ಬಿಟೀಂ ಎಂದಿದ್ದ ರಾಹುಲ್ ಭೇಟಿಗೆ ಎಚ್ಡಿಕೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಅಖಿಲೇಶ್ ಯಾದವ್, ಮಾಯಾವತಿ, ತೆಲಂಗಾಣ ಸಿಎಂ ಕೆಸಿ ಚಂದ್ರಶೇಖರ್ ರಾವ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್, ಪಂಜಾಬ್ ಮುಖ್ಯಮಂತ್ರಿ ಕ್ಯಾ. ಅಮರಿಂದರ್ ಸಿಂಗ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

 Kumaraswamy to take oath as Karnataka CM on May 23

ಇದೇ ವೇಳೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ದೇವೇಗೌಡ, ಸಿನಿಮಾ ನಟ ಮತ್ತು ರಾಜಕಾರಣಿ ಕಮಲ್ ಹಾಸನ್, ಕಾಂಗ್ರೆಸ್ ಹಿರಿಯ ನಾಯಕರು, ರಾಜ್ಯ ಕಾಂಗ್ರೆಸ್ ನಾಯಕರು ಕೂಡ ಭಾಗವಹಿಸಲಿದ್ದಾರೆ.

English summary
With the fall of BJP's three-day-old government in Karnataka, H D Kumaraswamy heading the Congress-JDS coalition is set to become the chief minister for a second time on May 23. West Bengal Chief Minister Mamata Banerjee, BSP chief Mayawati, SP chief Akhilesh Yadav, Andhra Pradesh Chief Minister Chandrababu Naidu, Telangana Chief Minister Chandrashekar Rao and several other regional leaders would be present in swearing-in ceremony.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X