ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿಕ್ಕಬಳ್ಳಾಪುರದಿಂದ ಬುಧವಾರ ಕುಮಾರಸ್ವಾಮಿ ನಾಮಪತ್ರ

|
Google Oneindia Kannada News

ಬೆಂಗಳೂರು, ಮಾ. 25 : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಬುಧವಾರ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಕುಮಾರಸ್ವಾಮಿ ಸ್ಪರ್ಧೆಗೆ ಇಳಿದರೆ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಕದನದಿಂದಾಗಿ ಜಿಲ್ಲೆಯ ಚುನಾವಣಾ ಕಣ ರಂಗೇರಲಿದೆ.

ಕುಮಾರಸ್ವಾಮಿ ಮಂಗಳವಾರ ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿದ್ದಾರೆ. ಜೆಡಿಎಸ್ ಪಕ್ಷದ ಮೂಲಗಳ ಮಾಹಿತಿಯಂತೆ ಕುಮಾರಸ್ವಾಮಿ ಬುಧವಾರ ಬೆಳಗ್ಗೆ 11.30ಕ್ಕೆ ಚಿಕ್ಕಬಳ್ಳಾಪುರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಪಕ್ಷದ ಕಾರ್ಯಕರ್ತರು ಕೈಗೊಂಡಿದ್ದಾರೆ.

Kumaraswamy

ಈಗಾಗಲೇ ಕುಮಾರಸ್ವಾಮಿ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಸಿರು ನಿಶಾನೆ ತೋರಿದ್ದಾರೆ. ರಾಜಕೀಯ ಅನಿವಾರ್ಯತೆ ಇರುವುದರಿಂದ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಿ ಸವಾಲು ಎದುರಿಸುವಂತೆ ಸಲಹೆ ನೀಡಿದ್ದೇನೆ ಎಂದು ಸ್ವತಃ ದೇವೇಗೌಡರು ಹೇಳಿದ್ದಾರೆ. ಆದ್ದರಿಂದ ಎಚ್ಡಿಕೆ ಸ್ಪರ್ಧೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಿವೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿ]

ಕಳೆದವಾರ ಚಿಕ್ಕಬಳ್ಳಾಪರದಲ್ಲಿ ನಡೆದ ಜೆಡಿಎಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದ್ದ ಕುಮಾರಸ್ವಾಮಿ, ನಿಮ್ಮ ಪ್ರೀತಿಗೆ ಬೆಲೆ ಕೊಡುತ್ತೇನೆ. ನನ್ನ ಹೆಸರಿನಲ್ಲಿ ಮತ ಯಾಚಿಸಲು ಆರಂಭಿಸಿ, ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಕುರಿತು ಎರಡು ದಿನದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರು. ಸದ್ಯ ಕಾರ್ಯಕರ್ತರ ಒತ್ತಡಕ್ಕೆ ಮಣಿದಿರುವ ಅವರು ಚುನಾವಣೆಗೆ ಸ್ಪರ್ಧಿಸಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ. [ಚಿಕ್ಕಬಳ್ಳಾಪುರದಲ್ಲಿ ಎಚ್ಡಿಕೆ, ಮೊಯ್ಲಿ ಫೈಟ್]

ಅನಿತಾ ವಿರೋಧ : ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಲು ಅನಿತಾ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದರು. ರಾಮನಗರದ ಜನರು ಕುಮಾರಸ್ವಾಮಿ ಸ್ಪರ್ಧೆಗೆ ಒಪ್ಪಿಗೆ ನೀಡುತ್ತಿಲ್ಲ. ರಾಮನಗರದ ಜನರನ್ನು ಎದುರು ಹಾಕಿಕೊಂಡು ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವುದು ಬೇಡ, ಕ್ಷೇತ್ರಕ್ಕೆ ಬೇರೆ ಅಭ್ಯರ್ಥಿಯನ್ನು ಘೋಷಿಸಿ ಎಂದು ಅನಿತಾ ಕುಮಾರಸ್ವಾಮಿ ದೇವೇಗೌಡರಿಗೆ ಮನವಿ ಮಾಡಿದ್ದರು.

English summary
Elections 2014 : Janata Dal Secular has decided to field former chief minister HD Kumaraswamy in the Chikkaballapur Lok Sabha constituency against Union Petroleum and Environment Minister M Veerappa Moily. According to JDS sources Kumaraswamy will be filing his papers on Wednesday, March 26 the last day to file nominations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X