ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯಗೆ ಜನ ಕಾಂಗ್ರೆಸ್‌ ಮಾತು ಕೇಳುತ್ತಾರೆ ಎಂಬ ಭ್ರಮೆ!

|
Google Oneindia Kannada News

ಬೆಂಗಳೂರು, ಮೇ 20; "ಕಾಂಗ್ರೆಸ್‌ ಹೇಳಿದ ಮಾತ್ರಕ್ಕೆ ಜನ ಲಸಿಕೆಯಿಂದ ವಿಮುಖರಾಗಿಲ್ಲ. ಜನ ಕಾಂಗ್ರೆಸ್‌ ಮಾತು ಕೇಳುತ್ತಾರೆ ಎಂಬ ಭ್ರಮೆ ಸಿದ್ದರಾಮಯ್ಯನವರಿಗೆ ಬೇಡ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

ಗುರುವಾರ ಕುಮಾರಸ್ವಾಮಿ ಅವರು ಕೋವಿಡ್ ಲಸಿಕೆ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ. "ಕಾಂಗ್ರೆಸ್‌ನ ಲಸಿಕೆ ರಾಜಕಾರಣವನ್ನು ನಾನು ವಿವರಿಸಿದ್ದೇನೆ. ಕಾಂಗ್ರೆಸ್‌ನ ಅಪಪ್ರಚಾರದಿಂದ ಜನ ಲಸಿಕೆ ಹಾಕಿಸಿಕೊಳ್ಳುತ್ತಿಲ್ಲ ಎಂದು ನಾನು ಹೇಳಿಲ್ಲ. ಲಸಿಕೆಗಾಗಿ ಜನರು ಸಿದ್ದರಾಗಿಯೇ ಇದ್ದಾರೆ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕೋವಿಡ್ ಪರೀಕ್ಷೆ ಹೆಚ್ಚಿಸಿ; ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ ಕೋವಿಡ್ ಪರೀಕ್ಷೆ ಹೆಚ್ಚಿಸಿ; ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

"ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ? ಭಾರತದ್ದೇ ಕೋವ್ಯಾಕ್ಸಿನ್‌ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ?" ಎಂದು ಎಚ್. ಡಿ. ಕುಮಾರಸ್ವಾಮಿ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ಕೋವಿಡ್ ನಿಯಂತ್ರಣ ಸಲಹೆ ಕೊಟ್ಟ ಸಿದ್ದರಾಮಯ್ಯಗ್ರಾಮೀಣ ಭಾಗದಲ್ಲಿ ಕೋವಿಡ್ ನಿಯಂತ್ರಣ ಸಲಹೆ ಕೊಟ್ಟ ಸಿದ್ದರಾಮಯ್ಯ

"ಲಸಿಕೆಯೊಂದು ಸಿಕ್ಕಾಗ ಅದನ್ನು ಮೊದಲಿಗೆ ಮುಂಚೂಣಿ ಹೋರಾಟಗಾರರಿಗೆ ನೀಡಲಾಗುತ್ತದೆ. ಇದು ನಿಮಗೆ ತಿಳಿದಿರಲಿ. ದೇಶದಲ್ಲಿ ಮೊದಲು ಕೋವಿಡ್‌ ವಾರಿಯರ್‌ಗಳಿಗೆ ಲಸಿಕೆ ನೀಡಲಾಯಿತು. ನನ್ನ ಸರದಿ ಬಂದಾಗ ನಾನು ಲಸಿಕೆ ಪಡೆದೆ. ಇಲ್ಲಿ ಕಾಂಗ್ರೆಸ್‌ ಮಾತು ನಂಬಿ ಕೂರುವಂಥದ್ದೇನಿತ್ತು. ಕಾಂಗ್ರೆಸ್‌ ಮಾತನ್ನು 50 ವರ್ಷದಿಂದಲೂ ಕೇಳದ ಕುಟುಂಬ ನಮ್ಮದು" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಟೋಪಿವಾಲಾ ಸರ್ಕಾರ: 1250 ಕೋಟಿ ಲಾಕ್‌ಡೌನ್ ಪ್ಯಾಕೇಜ್‌ ಬಗ್ಗೆ ಕುಮಾರಸ್ವಾಮಿ ಟೀಕಾಪ್ರಹಾರ!ಟೋಪಿವಾಲಾ ಸರ್ಕಾರ: 1250 ಕೋಟಿ ಲಾಕ್‌ಡೌನ್ ಪ್ಯಾಕೇಜ್‌ ಬಗ್ಗೆ ಕುಮಾರಸ್ವಾಮಿ ಟೀಕಾಪ್ರಹಾರ!

ಭ್ರಮೆ ಸಿದ್ದರಾಮಯ್ಯನವರಿಗೆ ಬೇಡ

"ಲಸಿಕೆಗಾಗಿ ಜನರು ಸಿದ್ದರಾಗಿಯೇ ಇದ್ದಾರೆ. ಕಾಂಗ್ರೆಸ್‌ ಹೇಳಿದ ಮಾತ್ರಕ್ಕೆ ಜನ ಲಸಿಕೆಯಿಂದ ವಿಮುಖರಾಗಿಲ್ಲ.ಜನ ಕಾಂಗ್ರೆಸ್‌ ಮಾತು ಕೇಳುತ್ತಾರೆ ಎಂಬ ಭ್ರಮೆ ಸಿದ್ದರಾಮಯ್ಯನವರಿಗೆ ಬೇಡ" ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ಅಪಪ್ರಚಾರ ಮಾಡಲಿಲ್ಲವೇ?

"ಭಾರತದ್ದೇ ಕೋವ್ಯಾಕ್ಸಿನ್‌ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ? ಅದು ಬಿಟ್ಟು ನೀವು ಮಾಡಿದ್ದೇನು?" ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಪ್ರತಿ ಎಸೆತಕ್ಕೆ ಸಿಕ್ಸರ್‌ ಕೊಡಬೇಕೆನಿಸಿದೆ

"ಶಾಂತಿ ಕಾಲದಲ್ಲಿ ಕಲಹಕ್ಕೆ ಬರುವುದು, ನೆರೆ ಮನೆ ಬೆಂಕಿಯಲ್ಲಿ ಬೇಳೆ ಬೇಯಿಸುವುದು ಕಾಂಗ್ರೆಸ್‌ನ ಜಾಡ್ಯ. ಪ್ರತಿ ಎಸೆತಕ್ಕೆ ಸಿಕ್ಸರ್‌ ಕೊಡಬೇಕೆನಿಸಿದೆ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸೋನಿಯಾ ಗಾಂಧಿ ಜೊತೆ ಪತ್ರ ಬರೆದಿಲ್ಲ

"ದೇಶದಲ್ಲಿ ಸರ್ವರಿಗೂ ಉಚಿತ ಲಸಿಕೆ ಹಾಕುವಂತೆ ಸೋನಿಯಾ ಗಾಂಧಿ ಅವರ ಜೊತೆಗೂಡಿ ಎಚ್‌.ಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ದೇಶದ ಹಲವು ವಿರೋಧಪಕ್ಷಗಳ ನಾಯಕರ ಜೊತೆಗೂಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರೇ ಹೊರತು,ಸೋನಿಯಾ ಗಾಂಧಿ ಅವರ ಜೊತೆಗೂಡಿ ಪತ್ರ ಬರೆಯಲಿಲ್ಲ ನೆನಪಿರಲಿ" ಎಂದು ಟ್ವೀಟ್ ಮಾಡಿದ್ದಾರೆ.

ಎಂಥ ವಂಚಕ ನಡೆ ಇದು

"ಲಸಿಕೆಗಾಗಿ 100 ಕೋಟಿ ಕೊಟ್ಟಿದ್ದಾಗಿ ಕಾಂಗ್ರೆಸ್‌ ಹೇಳುತ್ತಿದೆ. ಇದೇನು ಸಿದ್ದರಾಮಯ್ಯನವರ ಮನೆ ಗಂಟೇ?. ಕಾಂಗ್ರೆಸ್‌ ಜನಪ್ರತಿನಿಧಿಗಳ ಕ್ಷೇತ್ರಾಭಿವೃದ್ಧಿ ನಿಧಿಯಲ್ಲವೇ?. ಲಸಿಕೆಗಾಗಿ ಕೈಯಿಂದ 100 ಕೋಟಿ ಕೊಟ್ಟಂತೆ ಹೇಳಿದೆ. ಎಂಥ ವಂಚಕ ನಡೆ?" ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

Recommended Video

Pujara WTC ಫೈನಲ್ ಪಂದ್ಯದ ಬಗ್ಗೆ ಹೇಳಿದ್ದೇನು | Oneindia Kannada

ಸಿದ್ದರಾಮಯ್ಯನವರೇ ಹೇಳಲು ಬಹಳಷ್ಟಿದೆ

"ನಾನು ದೇವೇಗೌಡರ ಸಲಹೆ ಪಡೆದುಕೊಳ್ಳುವುದು ಒಳ್ಳೆಯದು ಎಂದು ನೀವು ಹೇಳಿದ್ದೀರಿ. ದೇವೇಗೌಡರ ಸಲಹೆಯಂತೇ ನಾನು ಸೇರಿದಂತೆ ಪಕ್ಷ ನಡೆಯುತ್ತೇವೆ. ಸಿದ್ದರಾಮಯ್ಯನವರೇ ಹೇಳಲು ಬಹಳಷ್ಟಿದೆ. ನಾನು ಸುಳ್ಳಾಡಲಾರೆ. ಅದು ನಿಮಗೆ ಹೇಗೆ ಕಾಣುತ್ತದೆ ಎಂಬುದು ನನಗೆ ಅಪ್ರಸ್ತುತ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.

English summary
Former chief minister H. D. Kumaraswamy tweet against Siddaramaiah and Congress party in the issue of corona vaccine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X