ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲ್ಲಿದ್ದಲು ಕೊರತೆ: ಕೇಂದ್ರ ಸಚಿವರಿಗೆ ಕುಮಾರಸ್ವಾಮಿ ಟ್ವೀಟ್‌ ಮನವಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 18: ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿದ್ದು ವಿದ್ಯುತ್ ಉತ್ಪಾದನೆ ಕುಂಠಿತವಾಗಿರುವ ಕಾರಣ ಕುಮಾರಸ್ವಾಮಿ ಅವರು ಕಲ್ಲಿದ್ದಲು ಪೂರೈಕೆಗಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದಾರೆ.

ಮೈಸೂರು ದಸರಾ - ವಿಶೇಷ ಪುರವಣಿ

ಕೇಂದ್ರ ರೈಲ್ವೆ ಹಾಗೂ ಕಲ್ಲಿದ್ದಲು ಸಚಿವರಾಗಿರುವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ ಅವರು 6 ಲಕ್ಷ ಟನ್ ಕಲ್ಲಿದ್ದಲು ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಕಲ್ಲಿದ್ದಲು ಕೊರತೆ, ಕತ್ತಲೆ ರಾತ್ರಿಗಳನ್ನು ಕಳೆಯಲು ತಯಾರಾಗಿಕಲ್ಲಿದ್ದಲು ಕೊರತೆ, ಕತ್ತಲೆ ರಾತ್ರಿಗಳನ್ನು ಕಳೆಯಲು ತಯಾರಾಗಿ

ಪಿಯೂಷ್‌ ಗೋಯಲ್ ಅವರಿಗೆ ಟ್ವೀಟ್‌ ಮಾಡುವ ಮುಖಾಂತರವೂ ಮನವಿ ಮಾಡಿರುವ ಕುಮಾರಸ್ವಾಮಿ ಅವರು ರಾಜ್ಯದ ಕಲ್ಲಿದ್ದಲು ಕೊರತೆ ಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ರಾಯಚೂರು : ಕಲ್ಲಿದ್ದಲು ಕೊರತೆ, ವಿದ್ಯುತ್ ಉತ್ಪಾದನೆ ಸ್ಥಗಿತ?ರಾಯಚೂರು : ಕಲ್ಲಿದ್ದಲು ಕೊರತೆ, ವಿದ್ಯುತ್ ಉತ್ಪಾದನೆ ಸ್ಥಗಿತ?

ಕಲ್ಲಿದ್ದಲು ಪೂರೈಕೆ ಒಪ್ಪಂದದಂತೆ ಕೇಂದ್ರವು ಕಲ್ಲಿದ್ದಲು ಪೂರೈಕೆ ಮಾಡದೇ ಇರುವುದೇ ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಗೆ ಕಾರಣವಾಗಿದೆ. ಹಾಗಾಗಿ ರಾಜ್ಯವು ಕೇಂದ್ರದ ಮೇಲೆ ಒತ್ತಡ ಹೇರುತ್ತಿದೆ.

ಒಪ್ಪಂದದ ಪ್ರಕಾರ ಕಲ್ಲಿದ್ದಲು ಪೂರೈಸದ ಕೇಂದ್ರ

1720MW ಸಾಮರ್ಥ್ಯದ ರಾಯಚೂರು ಉಷ್ಣ ಸ್ಥಾವರದಲ್ಲಿ ಶೂನ್ಯ ಕಲ್ಲಿದ್ದಲು ಸಂಗ್ರಹಣೆ ಉಂಟಾಗಿದೆ. ಈ ಸ್ಥಿತಿಗೆ ಕಾರಣ, ಕೇಂದ್ರ ಸರ್ಕಾರಿ ಸ್ವಾಮ್ಯದ ವೆಸ್ಟರ್ನ್ ಕೋಲ್ ಪೀಲ್ಡ್ಸ್(WLC) ಕಲ್ಲಿದ್ದಲು ಪೂರೈಕೆ ಒಪ್ಪಂದದ ಪ್ರಕಾರ ನೀಡ ಬೇಕಾಗಿದ್ದ ಕಲ್ಲಿದ್ದಲಿನ ಒಟ್ಟು ಪ್ರಮಾಣದಲ್ಲಿ ಸುಮಾರು 6ಲಕ್ಷ ಟನ್ ಗಳಷ್ಟು ಕಲ್ಲಿದ್ದಲನ್ನು ಈವರೆಗೆ ಪೂರೈಕೆ ಮಾಡದಿರುವುದು ಎಂದು ಕುಮಾರಸ್ವಾಮಿ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಆರು ಲಕ್ಷ ಟನ್ ಕಲ್ಲಿದ್ದಲು ಪೂರೈಸಲು ಮನವಿ

6 ಲಕ್ಷ ಪ್ರಮಾಣದ ಕೊರತೆಯನ್ನು ಕೇಂದ್ರ ಸರ್ಕಾರಿ ಸ್ವಾಮ್ಯದ ಎಂ.ಸಿ.ಎಲ್ ಮುಖಾಂತರ ಪೂರೈಕೆ ಮಾಡಬೇಕೆಂದು ನಾನು ಗೌರವಾನ್ವಿತ ಕೇಂದ್ರ ಕಲ್ಲಿದ್ದಲು ಸಚಿವರಾದ ಪಿಯೂಷ್ ಗೋಯಲ್ ರವರನ್ನು ಪತ್ರ ಮುಖೇನ ವಿನಂತಿಸಿಕೊಂಡಿದ್ದೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಕಲ್ಲಿದ್ದಲು ಖಾಲಿ: ಕೇಂದ್ರ ಮಧ್ಯಪ್ರವೇಶಕ್ಕೆ ಎಚ್ಡಿಕೆ ಆಗ್ರಹರಾಜ್ಯದಲ್ಲಿ ಕಲ್ಲಿದ್ದಲು ಖಾಲಿ: ಕೇಂದ್ರ ಮಧ್ಯಪ್ರವೇಶಕ್ಕೆ ಎಚ್ಡಿಕೆ ಆಗ್ರಹ

ಮುಂದಿನ ದಿನಗಳಲ್ಲಿ ಪೂರೈಕೆ ವ್ಯತ್ಯಯ ಆಗದಿರಲಿ

ಮುಂದಿನ ದಿನಗಳಲ್ಲಿ WCL ನಿಂದ ಒಪ್ಪಂದದ ಪ್ರಕಾರ ಪೂರ್ಣ ಪ್ರಮಾಣದ ಕಲ್ಲಿದ್ದಲು ಪೂರೈಕೆ ಮಾಡುವುದರೊಂದಿಗೆ ರಾಜ್ಯದಲ್ಲಿ ನಿರಂತರವಾಗಿ ನಿಗದಿತ ಪ್ರಮಾಣದ ವಿದ್ಯುತ್ ಉತ್ಪಾದನೆಗೆ ಸಹಕರಿಸುವಂತೆ ಪಿಯೂಷ್‌ ಗೋಯಲ್ ಅವರಿಗೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಕಲ್ಲಿದ್ದಲು ಕೊರತೆ, ವಿದ್ಯುತ್ ವ್ಯತ್ಯಯ

ಕಲ್ಲಿದ್ದಲು ಕೊರತೆ, ವಿದ್ಯುತ್ ವ್ಯತ್ಯಯ

ರಾಜ್ಯದ ರಾಯಚೂರು ವಿದ್ಯುತ್‌ ಉತ್ಪಾದನಾ ಘಟಕದಲ್ಲಿ ಕಲ್ಲಿದ್ದಲು ಸಂಗ್ರಹ ಖಾಲಿಯಾಗಿದ್ದು ಈಗಾಗಲೇ ನಾಲ್ಕು ಘಟಕಗಳು ಉತ್ಪಾದನೆ ಸ್ಥಗಿತಗೊಳಿಸಿವೆ. ಬಳ್ಳಾರಿ ಹಾಗೂ ಯಮರಮಸ್‌ನಲ್ಲಿಯೂ ಕಲ್ಲಿದ್ದಲು ಕೊರತೆ ಆಗಿದ್ದು ಕೆಲವು ದಿನಗಳಿಗೆ ಆಗುವಷ್ಟು ಮಾತ್ರವೇ ದಾಸ್ತಾನು ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

English summary
Karnataka facing lake of coal so CM Kumaraswamy requested central minister to supply coal as per the WCL agreement. He write letter to the minister and also tweet to him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X