ಕುಮಾರಸ್ವಾಮಿ 12 ಟ್ವೀಟ್: ಎಲ್ಲ ಪ್ರಶ್ನೆಗಳಿಗೂ ಉತ್ತರ

ಬೆಂಗಳೂರು, ಜನವರಿ 11: ಮಾಜಿ ಸಿಎಂ ಕುಮಾರಸ್ವಾಮಿ ಅವರು ನಿನ್ನೆ ಬಿಡುಗಡೆ ಮಾಡಿದ ಮಂಗಳೂರು ಗಲಭೆಯ ವಿಡಿಯೋ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿದೆ.

ಕುಮಾರಸ್ವಾಮಿ ಅವರ ವಿಡಿಯೋಕ್ಕೆ ಪ್ರತಿಯಾಗಿ ರಾಜ್ಯ ಬಿಜೆಪಿ ನಾಯಕರುಗಳು ತರಹೇವಾರಿ ಹೇಳಿಕೆಗಳನ್ನು ನೀಡಿದ್ದು, ಕುಮಾರಸ್ವಾಮಿ ಕುರಿತು ಹಾಗೂ ವಿಡಿಯೋ ಕುರಿತು ಹಲವು ಆರೋಪಗಳನ್ನು ಮಾಡಿದ್ದಾರೆ.

ಬಿಜೆಪಿ ನಾಯಕರು ಮಾಡಿರುವ ಆರೋಪಗಳಿಗೆ ಮತ್ತು ವಿಡಿಯೋ ಕುರಿತಾಗಿ ಹಾಕಿರುವ ಸವಾಲುಗಳು, ಪ್ರಶ್ನೆಗಳ ಬಗ್ಗೆ ವಿವರವಾಗಿ ಟ್ವಿಟ್ಟರ್‌ನಲ್ಲಿ ಕುಮಾರಸ್ವಾಮಿ ಉತ್ತರಿಸಿದ್ದಾರೆ.

ಬರೋಬ್ಬರಿ 12 ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಧೈರ್ಯವಿದ್ದರೆ ವಿಡಿಯೋ ನಕಲಿ ಎಂದು ಸಾಬೀತು ಪಡಿಸಲಿ ಎಂದು ಸವಾಲೆಸೆದಿದ್ದಾರೆ. ಇದರ ಜೊತೆಗೆ ಇನ್ನೂ ಕೆಲವು ಪ್ರಶ್ನೆಗಳನ್ನು ಅವರೂ ಕೇಳಿದ್ದಾರೆ.

ವಿಡಿಯೋ ಬಗ್ಗೆ ಲಘುವಾಗಿ ಮಾತನಾಡಿದ್ದ ಯಡಿಯೂರಪ್ಪ

ವಿಡಿಯೋ ಬಗ್ಗೆ ಲಘುವಾಗಿ ಮಾತನಾಡಿದ್ದ ಯಡಿಯೂರಪ್ಪ

"ಅದಕ್ಕೆಲ್ಲಾ ಅರ್ಥ ಇದ್ಯೇನ್ರೀ, ಅದೆಲ್ಲಾ ಕಟ್ ಆಂಡ್ ಪೇಸ್ಟ್ ವೀಡಿಯೋ" ಎಂದಿದ್ದಾರೆ ಯಡಿಯೂರಪ್ಪ, ಸಿ.ಡಿ. ಬಿಡುಗಡೆ ವೇಳೆಯೇ ಇಂತಹ ಬಾಲಿಶತನದ ಪ್ರತಿಕ್ರಿಯೆಗಳು ಬಿಜೆಪಿ ನಾಯಕರಿಂದ ಬರುತ್ತವೆ ಎಂದದ್ದೆ. ಬಿಜೆಪಿ ಶಾಸಕರಿಂದ ಇಂತಹುದ್ದನ್ನು ಬಿಟ್ಟು ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದಿದ್ದೆ. ಅದನ್ನು ರುಜುವಾತುಪಡಿಸಿದಿರಿ'' ಎಂದು ವಿಡಿಯೋ ಬಗ್ಗೆ ಲಘುವಾಗಿ ಮಾತನಾಡಿದ ಸಿಎಂ ಗೆ ಟಾಂಗ್ ಕೊಟ್ಟಿದ್ದಾರೆ ಎಚ್‌ಡಿಕೆ

ಸಿಡಿ ಸತ್ಯಾಸತ್ಯತೆ ಬಗ್ಗೆ ವರದಿ ತರಿಸುವ ಧೈರ್ಯ ನಿಮಗಿದೆಯೇ?

ಸಿಡಿ ಸತ್ಯಾಸತ್ಯತೆ ಬಗ್ಗೆ ವರದಿ ತರಿಸುವ ಧೈರ್ಯ ನಿಮಗಿದೆಯೇ?

ಸಿ.ಡಿ.ಯ ಸತ್ಯಾಸತ್ಯತೆ ಬಗ್ಗೆ ತಜ್ಞರಿಂದ ವರದಿ ತರಿಸಿ ಕೊಳ್ಳುವ ಧೈರ್ಯ ನಿಮಗಿದೆಯೇ? ಎಂದು ಸವಾಲು ಹಾಕಿರುವ ಕುಮಾರಸ್ವಾಮಿ, 'ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ. ನಾನು ಬಿಡುಗಡೆ ಮಾಡಿರುವ 'ಸಿಡಿ'ಯನ್ನು ನೀವು ಸೃಷ್ಟಿಸಿಕೊಂಡಂತೆ 'ಕಟ್ ಅಂಡ್ ಪೇಸ್ಟ್' ಬಿಜೆಪಿ ಸರ್ಕಾರ ಎಂದುಕೊಂಡಿರಾ? ಎಂದು ವ್ಯಂಗ್ಯದ ಮೂಲಕ ಆಪರೇಷನ್ ಕಮಲದಿಂದುತ್ಪಾದನೆಯಾದ ಸರ್ಕಾರವನ್ನು ಟೀಕಿಸಿದ್ದಾರೆ.

ಸ್ಥಿಮಿತ ಕಳೆದುಕೊಂಡು ನೀಲಿ ಚಿತ್ರ ವೀಕ್ಷಿಸಿದ್ದಿರಾ? ಡಿಸಿಎಂ ಸವದಿಗೆ ಪ್ರಶ್ನೆ

ಸ್ಥಿಮಿತ ಕಳೆದುಕೊಂಡು ನೀಲಿ ಚಿತ್ರ ವೀಕ್ಷಿಸಿದ್ದಿರಾ? ಡಿಸಿಎಂ ಸವದಿಗೆ ಪ್ರಶ್ನೆ

ಉಪ ಚುನಾವಣೆಯಲ್ಲಿ ಸೋತ ಹತಾಶೆಯಿಂದ ಸ್ಥಿಮಿತ ಕಳೆದುಕೊಂಡ ಕುಮಾರಸ್ವಾಮಿ ಮಂಗಳೂರು ಗಲಭೆ ವಿಡಿಯೊ ಬಿಡುಗಡೆ ಮಾಡಿದ್ದಾರೆ ಎಂದು ಡಿಸಿಎಂ ಲಕ್ಮಣ ಸವದಿ ಆರೋಪಿಸಿದ್ದಾರೆ. ಸರಿ... ಹಾಗಾದರೆ ಸವದಿ ಅದ್ಯಾವ ಸ್ಥಿಮಿತ ಕಳೆದುಕೊಂಡು ಸದನದಲ್ಲಿ ನೀಲಿ ಚಿತ್ರ ನೋಡಿದರು? ಈ ಬಾರಿ ಅವರು ಯಾವ ಚುನಾವಣೆ ಗೆದ್ದಿದ್ದಾರೆ? ಸ್ಥಿಮಿತ ಉಳಿದಿದೆಯೇ?

ನನ್ನ ಕಾಲದಲ್ಲಿ ಗಲಭೆ, ಗೋಲಿಬಾರ್ ಏಕೆ ಆಗಲಿಲ್ಲ: ಗೃಹ ಸಚಿವರಿಗೆ ಪ್ರಶ್ನೆ

ನನ್ನ ಕಾಲದಲ್ಲಿ ಗಲಭೆ, ಗೋಲಿಬಾರ್ ಏಕೆ ಆಗಲಿಲ್ಲ: ಗೃಹ ಸಚಿವರಿಗೆ ಪ್ರಶ್ನೆ

ಪೊಲೀಸರು ಗಲಭೆ ಮಾಡುವುದಿಲ್ಲ, ನಿಯಂತ್ರಿಸುತ್ತಾರೆ. ಕುಮಾರಸ್ವಾಮಿ ಕಾಲದಲ್ಲೂ ಅದೇ ಪೋಲೀಸರೇ ಇದ್ದರು ಎಂದಿದ್ದಾರೆ ಗೃಹ ಸಚಿವ. ಬೊಮ್ಮಾಯಿ ಅವರೇ ಅದು ನನ್ನ ಕಾಲ. ಶಾಂತಿ-ಸುವ್ಯವಸ್ಥೆಗಷ್ಟೇ ಪೊಲೀಸರ ಸೇವೆ ಪಡೆಯುತ್ತಿದ್ದೆವು. ಇದು ನಿಮ್ಮ ಕಾಲ. ಗಲಭೆ, ಗುಂಡೇಟಿಗೆ ನೀವು ಪೊಲೀಸರನ್ನು ಬಳಸಿಕೊಳ್ಳುತ್ತಿದ್ದೀರಿ. ನನ್ನ ಕಾಲದಲ್ಲೂ ಇದೇ ಪೊಲೀಸರಿದ್ದರು. ಹೌದು. ಆದರೆ ನನ್ನ ಕಾಲದಲ್ಲಿ ಗಲಭೆಗಳು ಯಾಕೆ ಆಗಲಿಲ್ಲ? ಗೋಲಿಬಾರ್ಗಳು ಯಾಕೆ ಆಗಲಿಲ್ಲ? ಇದಕ್ಕೆ ನೀವು ಉತ್ತರಿಸುವಿರಾ?

ಎಲ್ಲಾ ಸಿಡಿ ಬಯಲಾದರೆ ಬಿಜೆಪಿ ಬೆತ್ತಲಾಗುತ್ತದೆ: ಎಚ್‌ಡಿಕೆ

ಎಲ್ಲಾ ಸಿಡಿ ಬಯಲಾದರೆ ಬಿಜೆಪಿ ಬೆತ್ತಲಾಗುತ್ತದೆ: ಎಚ್‌ಡಿಕೆ

ಗಲಭೆಯ ಸಿಡಿ ಬಿಡುಗಡೆ ಮಾಡಿದ್ದಕ್ಕೆ ಸದಾನಂದಗೌಡ ವ್ಯಂಗ್ಯವಾಡಿದ್ದಾರೆ.ಸಿಡಿ ಹಲವರಿಗೆ ರಾಜಕೀಯ ಅಸ್ತಿತ್ವದ ಸ್ವತ್ತು ಎಂದಿದ್ದಾರೆ.ಬಿಜೆಪಿಯಲ್ಲಿ ಸದ್ದು ಮಾಡಿದ ಸಿಡಿಗಳ ಸಂಖ್ಯೆ ಒಂದೆರಡೇ? ಎಲ್ಲ ಸಿಡಿಗಳು ಬಯಲಾದರೆ ಬಿಜೆಪಿಗರು ಬೆತ್ತಲಾಗುತ್ತಾರಷ್ಟೇ. ಸಿಡಿಗಳು ಬಿಜೆಪಿಯ ಸ್ವತ್ತು. ಸಿಡಿ ಬಗ್ಗೆ ಮಾತಾಡುವಾಗ ಸದಾನಂದಗೌಡ ಎಚ್ಚರವಾಗಿರಲಿ.

ಮಂಗಳೂರಿನಲ್ಲಿ ಭಿನ್ನ ದ್ವನಿಗಳನ್ನು ಹತ್ತಿಕ್ಕಲಾಗಿದೆ: ಕುಮಾರಸ್ವಾಮಿ

ಮಂಗಳೂರಿನಲ್ಲಿ ಭಿನ್ನ ದ್ವನಿಗಳನ್ನು ಹತ್ತಿಕ್ಕಲಾಗಿದೆ: ಕುಮಾರಸ್ವಾಮಿ

ಮಂಗಳೂರು ಶಾಂತಿಯಿಂದಿದೆ, ಮರಳಿ ಗಲಭೆ ಎಬ್ಬಿಸಿ ಅಲ್ಲಿ ಅಸ್ತಿತ್ವವೇ ಇಲ್ಲದ ತಮ್ಮ ಪಕ್ಷಕ್ಕೆ ನೆಲೆ ಕಲ್ಪಿಸಲು ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ ಎಂದು ಸೋದರಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಂಗಳೂರಿನ ಭಿನ್ನ ಧ್ವನಿಗಳ ಕೊರಳು ಬಿಗಿ ಹಿಡಿದು, ಉಸಿರುಗಟ್ಟಿಸಿ, ಸದ್ದು ಬಾರದಂತೆ ಮಾಡಿರುವುದು ನಿಮ್ಮ ಪ್ರಕಾರ 'ಶಾಂತಿ'ಯೇ?

'ಪೊಲೀಸರು ಕಲ್ಲು ತೂರಿದ ಪ್ರತಿಭಟನಾಕಾರರು ಸೈತಾನರೆ?'

'ಪೊಲೀಸರು ಕಲ್ಲು ತೂರಿದ ಪ್ರತಿಭಟನಾಕಾರರು ಸೈತಾನರೆ?'

ಮೆಕ್ಕಾಕ್ಕೆ ಹೋದಾಗ ಮುಸಲ್ಮಾನರು ಸೈತಾನನಿಗೆ ಕಲ್ಲು ಹೊಡೆಯುತ್ತಾರೆ. ಪೊಲೀಸರ ಮೇಲೆ ಕಲ್ಲು ತೂರಲು ಅವರೇನು ಸೈತಾನರೇ ಎಂದು ಸೋದರಿ ಶೋಭಾ ಪ್ರಶ್ನೆ ಮಾಡಿದ್ದಾರೆ. ಹಾಗಾದರೆ ಪೊಲೀಸರು ಕಲ್ಲು ತೂರಾಟ ಮಾಡಿದರಲ್ಲ... ಹೋರಾಟಗಾರರೇನು ಸೈತಾನರೇ? ಉತ್ತರಿಸುವಿರಾ ಶೋಭಾ ಅವರೇ?

'ಮಂಗಳೂರಿನಲ್ಲಿ ರಾಜಕಾರಣ ಮಾಡುತ್ತಿರುವುದು ನೀವು, ನಾನಲ್ಲ'

'ಮಂಗಳೂರಿನಲ್ಲಿ ರಾಜಕಾರಣ ಮಾಡುತ್ತಿರುವುದು ನೀವು, ನಾನಲ್ಲ'

ಮಂಗಳೂರಿನಲ್ಲಿ ನಾನು ರಾಜಕಾರಣ ಮಾಡಬೇಕಿಲ್ಲ. ಅಲ್ಲಿ ರಾಜಕಾರಣ ಮಾಡುತ್ತಿರುವುದು ನೀವು. ಅಲ್ಲಿ ಕೋಮು ಗಲಭೆ ಉಂಟು ಮಾಡುತ್ತಿರುವುದು ನೀವು. ವಾಣಿಜ್ಯ ನಗರಿಯಾಗಬೇಕಿದ್ದ ಮಂಗಳೂರು ಕೋಮು ರಾಜಕಾರಣದ ಕಣವಾಗಿದ್ದು‌ ಬಿಜೆಪಿಯಿಂದ.

ಬಿಜೆಪಿ ಚಿಲ್ಲರೆ ರಾಜಕಾರಣದಿಂದ ಮಂಗಳೂರಿಗೆ ಆಪತ್ತು

ಬಿಜೆಪಿ ಚಿಲ್ಲರೆ ರಾಜಕಾರಣದಿಂದ ಮಂಗಳೂರಿಗೆ ಆಪತ್ತು

ಸಮುದ್ರ ತೀರದ ಜಗತ್ತಿನ ಹಲವು ಪ್ರದೇಶಗಳು ವಾಣಿಜ್ಯ ನಗರಿಗಳಾಗಿವೆ. ಅಷ್ಟೇ ಏಕೆ, ಮುಂಬೈ, ಚೆನ್ನೈ, ಕೊಚ್ಚಿ ನಮ್ಮ ದೇಶದ ಉದಾಹರಣೆಗಳು. ಮಂಗಳೂರಿಗೂ ಅಂಥದ್ದೇ ಅವಕಾಶಗಳಿದ್ದವು, ಇದೆ. ದೇಶಕ್ಕೆ ದೊಡ್ಡ ಬ್ಯಾಂಕ್‌ಗಳನ್ನು ಕೊಟ್ಟದ್ದು ಇದೇ ಕರಾವಳಿ. ಆದರೆ ನಿಮ್ಮ ಚಿಲ್ಲರೆ ರಾಜಕಾರಣ ಮಂಗಳೂರಿನ ವಾಣಿಜ್ಯಿಕ ಬೆಳವಣಿಗೆಗೆ ಅಡ್ಡಗಾಲಾಗಿದೆ.

ಮಂಗಳೂರಲ್ಲಿ ಸಾತ್ವಿಕ ರಾಜಕಾರಣ ಮಾಡುತ್ತೇನೆ, ಬಿಜೆಪಿಯಂತಲ್ಲ: ಎಚ್‌ಡಿಕೆ

ಮಂಗಳೂರಲ್ಲಿ ಸಾತ್ವಿಕ ರಾಜಕಾರಣ ಮಾಡುತ್ತೇನೆ, ಬಿಜೆಪಿಯಂತಲ್ಲ: ಎಚ್‌ಡಿಕೆ

ಮಂಗಳೂರಿನಲ್ಲಿ ನಾನು ರಾಜಕಾರಣ ಮಾಡಬಾರದು ಎನ್ನುತ್ತಾರೆ ಸೋದರಿ ಶೋಭಾ. ಆದರೆ, ರಾಜಕೀಯ ಪಕ್ಷವೊಂದರ ಶಾಸಕಾಂಗ ಪಕ್ಷದ ನಾಯಕನಾದ ನಾನು ಮಂಗಳೂರಲ್ಲಿ ಏಕೆ ರಾಜಕಾರಣ ಮಾಡಬಾರದು? ಹಾಗೇನಾದರೂ ನನಗೆ ನಿರ್ಬಂಧವಿದೆಯೇ? ಮಂಗಳೂರಲ್ಲಿ ನಾನೂ ರಾಜಕಾರಣ ಮಾಡುತ್ತೇನೆ. ಆದರೆ ಬಿಜೆಪಿಯಂತಲ್ಲ. ಸಾತ್ವಿಕವಾಗಿ‌.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+