ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಎಸ್‌ಸಿ : ನೊಂದ ಅಭ್ಯರ್ಥಿಗಳ ಬೆಂಬಲಕ್ಕೆ ನಿಂತ ಎಚ್ಡಿಕೆ

|
Google Oneindia Kannada News

ಬೆಂಗಳೂರು, ಆ.9 : ಕರ್ನಾಟಕ ಲೋಕಸೇವಾ ಆಯೋಗದ ಮೂಲಕ 2011ರಲ್ಲಿ ನಡೆದ ಸಂದರ್ಶನ ಪ್ರಕ್ರಿಯೆಯಲ್ಲಿ ಆಯ್ಕೆಗೊಂಡಿದ್ದ 362 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳನ್ನು ರದ್ದು ಪಡಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ನೊಂದ ಅಭ್ಯರ್ಥಿಗಳು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ನೀಡಿದ್ದಾರೆ.

ಫ್ರೀಡಂಪಾರ್ಕ್ ನಲ್ಲಿ ಶುಕ್ರವಾರ ನೊಂದ ಅಭ್ಯರ್ಥಿಗಳ ಜೊತೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕುಮಾರಸ್ವಾಮಿ, ಸರ್ಕಾರ ತನ್ನ ನಿರ್ಣಯವನ್ನು ವಾಪಸ್ ಪಡೆಯದಿದ್ದರೆ ಅಭ್ಯರ್ಥಿಗಳೊಂದಿಗೆ ಸೇರಿ ಸೋವವಾರದಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಸೋಮವಾರದ ತನಕ ಪ್ರತಿದಿನ ಅಭ್ಯರ್ಥಿಗಳ ಜೊತೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಾಗಿಯೂ ತಿಳಿಸಿದರು. [ಕೆಪಿಎಸ್ಸಿ ನೇಮಕಾತಿ ರದ್ದು, ಸಿಡಿದೆದ್ದ ಅಭ್ಯರ್ಥಿಗಳು]

ಸರ್ಕಾರ ತನ್ನ ನಿರ್ಧಾರದಿಂದಾಗಿ ಬಡವರ ಅನ್ನವನ್ನು ಕಸಿದುಕೊಂಡಿದೆ ಎಂದು ಹೇಳಿದ ಕುಮಾರಸ್ವಾಮಿ, ಬಡ ಕುಟುಂಬದಿಂದ ಬಂದ ಅಭ್ಯರ್ಥಿಗಳು ಇಲ್ಲಿದ್ದಾರೆ. ಕಷ್ಟಪಟ್ಟು ಓದಿ ಪರೀಕ್ಷೆ ಪಾಸಾಗಿದ್ದಾರೆ. ಕೆಲಸ ಸಿಕ್ಕಿತು ಎಂದು ಕೊಳ್ಳುತ್ತಿರುವಾಗಲೇ ಸರ್ಕಾರ ನೇಮಕಾತಿ ಆದೇಶ ರದ್ದು ಪಡಿಸುವ ನಿರ್ಧಾರ ಕೈಗೊಂಡು ಅವರ ಭವಿಷದ್ಯವನ್ನು ಕತ್ತಲಲ್ಲಿ ದೂಡಿದೆ ಎಂದು ಆರೋಪಿಸಿದರು. ಕುಮಾರಸ್ವಾಮಿ ಪ್ರತಿಭಟನೆಯ ಚಿತ್ರಗಳು

ನೇಮಕಾತಿ ರದ್ದುಗೊಳಿಸಬೇಡಿ

ನೇಮಕಾತಿ ರದ್ದುಗೊಳಿಸಬೇಡಿ

ಕರ್ನಾಟಕ ಲೋಕಸೇವಾ ಆಯೋಗದ ಮೂಲಕ 2011ರಲ್ಲಿ ನಡೆದ ಸಂದರ್ಶನ ಪ್ರಕ್ರಿಯೆಯಲ್ಲಿ ಆಯ್ಕೆಗೊಂಡಿದ್ದ 362 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳನ್ನು ರದ್ದು ಪಡಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ನೊಂದ ಅಭ್ಯರ್ಥಿಗಳು ಫ್ರೀಡಂಪಾರ್ಕ್ ನಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ನೀಡಿದ್ದಾರೆ.

ಸೋಮವಾರದಿಂದ ಉಪವಾಸ ಸತ್ಯಾಗ್ರಹ

ಸೋಮವಾರದಿಂದ ಉಪವಾಸ ಸತ್ಯಾಗ್ರಹ

ಕೆಪಿಎಸ್ ಸಿ ನೇಮಕಾತಿಯನ್ನು ರದ್ದುಗೊಳಿಸಿರುವ ಸರ್ಕಾರ, ತನ್ನ ನಿರ್ಣಯವನ್ನು ವಾಪಸ್ ಪಡೆಯದಿದ್ದರೆ ನೊಂದ ಅಭ್ಯರ್ಥಿಗಳೊಂದಿಗೆ ಸೇರಿ ಸೋಮವಾರದಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಅಭ್ಯರ್ಥಿಗಳ ಗೋಳು ಕೇಳಿ

ಅಭ್ಯರ್ಥಿಗಳ ಗೋಳು ಕೇಳಿ

ಸರ್ಕಾರ ನೇಮಕಾತಿ ಆದೇಶವನ್ನು ರದ್ದುಗೊಳಿಸುವ ನಿರ್ಣಯವನ್ನು ತೆಗೆದುಕೊಳ್ಳುವ ಮುನ್ನ ಇಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಅಭ್ಯರ್ಥಿಗಳ ಕಥೆಯನ್ನು ಒಮ್ಮೆ ಕೇಳಲಿ ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ. ಸಿಎಂ ಸೇರಿದಂತೆ ಸಚಿವರು ಅಭ್ಯರ್ಥಿಗಳನ್ನು ಭೇಟಿ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ಬಡಕುಟುಂಬದವರ ಅನ್ನ ಕಿತ್ತುಕೊಂಡಿದ್ದೀರಿ

ಬಡಕುಟುಂಬದವರ ಅನ್ನ ಕಿತ್ತುಕೊಂಡಿದ್ದೀರಿ

ಬಡ ಕುಟುಂಬದಿಂದ ಬಂದ ಅಭ್ಯರ್ಥಿಗಳು ಇಲ್ಲಿದ್ದಾರೆ. ಕಷ್ಟಪಟ್ಟು ಓದಿ ಪರೀಕ್ಷೆ ಪಾಸಾಗಿದ್ದಾರೆ. ಕೆಲಸ ಸಿಕ್ಕಿತು ಎಂದು ಕೊಳ್ಳುತ್ತಿರುವಾಗಲೇ ಸರ್ಕಾರ ಇಂತಹ ನಿರ್ಧಾರ ಕೈಗೊಂಡು ಅವರ ಭವಿಷ್ಯವನ್ನು ಕತ್ತಲಲ್ಲಿ ದೂಡಿದೆ. ಸರ್ಕಾರ ಬಡವರ ಅನ್ನಕಿತ್ತುಕೊಂಡಿದೆ ಎಂದು ಎಂದು ಕುಮಾರಸ್ವಾಮಿ ಆರೋಪಿಸಿದರು.

ಅಧಿವೇಶನ ಕರೆಯಿರಿ

ಅಧಿವೇಶನ ಕರೆಯಿರಿ

ಕೆಪಿಎಸ್ ಸಿ ಹಗರಣದ ಕುರಿತು ಚರ್ಚೆ ಮಾಡಲು ವಿಶೇಷ ವಿಧಾನಸಭೆ ಅಧಿವೇಶನ ಕರೆಯುವಂತೆ ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅಧಿವೇಶನದಲ್ಲಿ ಸಿಐಡಿ ವರದಿಯನ್ನು ಮಂಡಿಸುವಂತೆ ಆಗ್ರಹಿಸಿದ್ದಾರೆ.

English summary
The KPSC 2011 candidates intensified their agitation on Friday, after the government took a decision to scrap the selection list. Former Chief Minister H.D.Kumaraswamy was with the candidates at the protest venue freedom park and demanded that CM call for an immediate assembly session and table the CID report.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X