ಬರ ನಿರ್ವಹಣೆ: ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಭೆ

ಬೆಂಗಳೂರು, ಮೇ 14: ನಿಸರ್ಗ ಚಿಕಿತ್ಸೆ, ಹೋಮ-ಹವನ, ರೆಸಾರ್ಟ್ ರೆಸ್ಟ್, ಚುನಾವಣಾ ಪ್ರಚಾರದ ನಂತರ ಸಿಎಂ ಕುಮಾರಸ್ವಾಮಿ ಅವರಿಗೆ ಕೊನೆಗೂ ಆಡಳಿತದತ್ತ ಗಮನ ಹರಿಸಲು ಸಮಯ ಸಿಕ್ಕಿದಂತಿದೆ. ಅವರು ನಾಳೆ ಜಿಲ್ಲಾಧಿಕಾರಿಗಳ ಸಭೆ ನಡೆಸಲಿದ್ದಾರೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಬರ ಪರಿಸ್ಥಿತಿ ನಿರ್ವಹಣೆ, ಬರದ ತೀಕ್ಷ್ಣತೆ ಕುರಿತು ಮಾಹಿತಿ ಸಂಗ್ರಹ, ಹಾನಿ ಮತ್ತಿತರ ವಿಷಯಗಳ ಕುರಿತು ಚರ್ಚಿಸಲು ನಾಳೆ ಸಿಎಂ ಅವರು ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಭೆ ನಡೆಸಲಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಧಾರವಾಡ ಮತ್ತು ಕಲಬುರಗಿ ಜಿಲ್ಲಾಧಿಕಾರಿಗಳು ಈ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸುತ್ತಿಲ್ಲ.

ಬರ ನಿರ್ವಹಣೆ, ಕುಡಿಯುವ ನೀರು ಪೂರೈಕೆ, ಜಾನುವಾರುಗಳ ಸಂರಕ್ಷಣೆಗೆ ಮೇವು ಬ್ಯಾಂಕ್ ಸ್ಥಾಪನೆ, ಗೋಶಾಲೆ ನಿರ್ಮಾಣ, ಜನರು ಗುಳೆ ಹೋಗದಂತೆ ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ ಸಿಇಒಗಳಿಂದ ಸಿಎಂ ಮಾಹಿತಿ ಪಡೆಯಲಿದ್ದಾರೆ.

Kumaraswamy video meeting with district commissioners on May 15

ಕುಮಾರಸ್ವಾಮಿ ಅವರು ನಡೆಸುವ ವಿಡಿಯೋ ಸಂವಾದದ ಸಂದರ್ಭದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಇರಲಿದ್ದಾರೆ. ಮಳೆಗಾಲದ ಬಗ್ಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಹ ನಾಳೆ ಚರ್ಚೆ ನಡೆಯಲಿದೆ.

ಕುಮಾರಸ್ವಾಮಿ ಅವರು ಜೊತೆ ಕೃಷಿ ಸಚಿವರು, ನೀರಾವರಿ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರು ಸಹ ನಾಳಿನ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+