ಕುಮಾರಸ್ವಾಮಿ ಶಿವಮೊಗ್ಗ, ಚಿಕ್ಕಮಗಳೂರು ವೈಮಾನಿಕ ಸಮೀಕ್ಷೆ ಮುಂದೂಡಿಕೆ
ಬೆಂಗಳೂರು, ಆಗಸ್ಟ್ 18: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಡೆಸಲು ಉದ್ದೇಶಿಸಿದ್ದ ವೈಮಾನಿಕ ಸಮೀಕ್ಷೆಯನ್ನು ಮುಂದೂಡಲಾಗಿದೆ.
ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಯನ್ನು ವೀಕ್ಷಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಭಾನುವಾರ ಪ್ರವಾಸ ನಡೆಸಲು ಉದ್ದೇಶಿಸಿದ್ದರು.
ಆದರೆ, ಈ ವೈಮಾನಿಕ ಸಮೀಕ್ಷೆಯನ್ನು ಅನಿವಾರ್ಯ ಕಾರಣಗಳಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೊದಲು ಚಿಕ್ಕಮಗಳೂರಿಗೆ ಭೇಟಿ ನೀಡಿ ಮಳೆಹಾನಿ ಸಮೀಕ್ಷೆ ನಡೆಸಲಿದ್ದ ಕುಮಾರಸ್ವಾಮಿ, ಸಂಜೆ ಐದು ಗಂಟೆಗೆ ಶಿವಮೊಗ್ಗಕ್ಕೆ ತೆರಳಿ ಅಧಿಕಾರಿಗಳ ಜತೆಗೆ ಸಭೆ ನಡೆಸಬೇಕಿತ್ತು.
ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ವಿವಿಧೆಡೆ ಮಳೆಯಿಂದ ಉಂಟಾಗಿರುವ ಮನೆ, ಬೆಳೆ ಮುಂತಾದವುಗಳ ಹಾನಿ ಸೇರಿದಂತೆ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಬೇಕಿತ್ತು.
ವೈಮಾನಿಕ ಸಮೀಕ್ಷೆಯ ದಿಢೀರ್ ಮುಂದೂಡುವಿಕೆಗೆ ಕಾರಣ ತಿಳಿದುಬಂದಿಲ್ಲ. ಮುಂದಿನ ಭೇಟಿಯ ದಿನಾಂಕವನ್ನು ಪ್ರಕಟಿಸಿಲ್ಲ.












Click it and Unblock the Notifications