ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋನಿಯಾ ಭೇಟಿಗೂ ಮುನ್ನ ಹಾಸನದಲ್ಲಿ ಎಚ್‌ಡಿಕೆ ಸಾಲು ಸಾಲು ಪೂಜೆ

|
Google Oneindia Kannada News

Recommended Video

ನಿಯೋಜಿತ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಸನದ ಲಕ್ಷ್ಮಿ ನರಸಿಂಹ ದೇವಸ್ಥಾನಕ್ಕೆ ಭೇಟಿ

ಬೆಂಗಳೂರು, ಮೇ 21: ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ಸೋಮವಾರ ದೆಹಲಿಗೆ ತೆರಳಲಿದ್ದಾರೆ.

ರಾಜ್ಯದಲ್ಲಿ ಆಡಳಿತ ನಡೆಸಲು ಪರಸ್ಪರ ಕೈಜೋಡಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್‌ ಸರ್ಕಾರದ ಸ್ವರೂಪ ಯಾವ ರೀತಿ ಇರಬೇಕು ಎಂಬ ಬಗ್ಗೆ ಸೋನಿಯಾ ಅವರೊಂದಿಗೆ ಕುಮಾರಸ್ವಾಮಿ ಅವರು ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.

ಉಪ ಮುಖ್ಯಮಂತ್ರಿ, ಗೃಹಖಾತೆ ಸೇರಿದಂತೆ ವಿವಿಧ ಸಚಿವ ಸ್ಥಾನಗಳ ಹಂಚಿಕೆ ಸಂಬಂಧ ಈ ವೇಳೆ ಮಾತುಕತೆ ನಡೆಯಲಿದೆ.

'ಮಹಾಮೈತ್ರಿ'ಗೆ ವೇದಿಕೆಯಾಗಲಿದೆ ಕುಮಾರಸ್ವಾಮಿ ಪದಗ್ರಹಣ'ಮಹಾಮೈತ್ರಿ'ಗೆ ವೇದಿಕೆಯಾಗಲಿದೆ ಕುಮಾರಸ್ವಾಮಿ ಪದಗ್ರಹಣ

ಕಾಂಗ್ರೆಸ್‌ನ ಎಷ್ಟು ಶಾಸಕರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕು, ಯಾವ ಶಾಸಕರಿಗೆ ಯಾವ ಖಾತೆ ನೀಡಬೇಕು ಎಂಬ ಬಗ್ಗೆ ಚರ್ಚಿಸಲಿದ್ದಾರೆ. ಇಬ್ಬರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಕ ಮಾಡಬೇಕು ಎಂಬ ಬಗ್ಗೆ ಒತ್ತಾಯ ಕೇಳಿಬರುತ್ತಿದ್ದು, ಈ ಕುರಿತೂ ಸಹ ಮಾತುಕತೆ ನಡೆಯುವ ಸಾಧ್ಯತೆ ಇದೆ.

kumaraswamy will meet sonia gandhi

ಅಲ್ಲದೆ, ಬುಧವಾರ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರನ್ನು ಕುಮಾರಸ್ವಾಮಿ ಅವರು ಖುದ್ದಾಗಿ ಆಹ್ವಾನ ನೀಡಲಿದ್ದಾರೆ ಎನ್ನಲಾಗಿದೆ.

33 ಖಾತೆಗಳಿರುವ ಸಂಪುಟದಲ್ಲಿ ಕಾಂಗ್ರೆಸ್‌ಗೆ 20 ಮತ್ತು ಜೆಡಿಎಸ್‌ಗೆ 13 ಸಚಿವ ಸ್ಥಾನಗಳನ್ನು ಹಂಚಿಕೊಳ್ಳುವ ನಿರೀಕ್ಷೆಯಿದೆ.

ಸಂಭಾವ್ಯ : ಕೈ-ತೆನೆ ಮೈತ್ರಿ ಸರ್ಕಾರದಲ್ಲಿ ಸಚಿವರು ಹಾಗೂ ಖಾತೆಗಳುಸಂಭಾವ್ಯ : ಕೈ-ತೆನೆ ಮೈತ್ರಿ ಸರ್ಕಾರದಲ್ಲಿ ಸಚಿವರು ಹಾಗೂ ಖಾತೆಗಳು

ಸೋಮವಾರ ಬೆಳಿಗ್ಗೆಯೇ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಎಚ್‌.ಡಿ. ದೇವೇಗೌಡ ಅವರ ನಿವಾಸಕ್ಕೆ ತೆರಳಿದ ಕುಮಾರಸ್ವಾಮಿ ಅವರಿಂದ ಕೆಲವರು ಸಲಹೆ ಸೂಚನೆಗಳನ್ನು ಪಡೆದುಕೊಂಡರು.

ದೆಹಲಿಗೆ ಹೊರಡುವ ಮುನ್ನ ಹಾಸನಕ್ಕೆ ತೆರಳಲಿರುವ ಕುಮಾರಸ್ವಾಮಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ.

ಹುಟ್ಟೂರು ಹರದನಹಳ್ಳಿ, ಮಾವಿನಕೆರೆ, ಚನ್ನರಾಯಪಟ್ಟಣದ ವಿವಿಧ ದೇವಸ್ಥಾನಗಳಲ್ಲಿ ಅವರು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಜಕ್ಕೂರು ವಿಮಾನ ನಿಲ್ದಾಣದಿಂದ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

English summary
HD Kumaraswamay will meet Sonia Gandhi on Monday to discuss cabinet expansion. He will visit many temples in Hassan before leaving to Delhi
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X