'ರಾಜ್ಯದಲ್ಲಿ ಕುಮಾರಸ್ವಾಮಿ ಸರ್ಕಾರ ಅಧಿಕಾರಕ್ಕೆ ಬರಲ್ಲ, ಗೆಲ್ಲುವುದೂ ಇಲ್ಲ'
ಬೆಂಗಳೂರು, ಜೂನ್ 21: ಡಿ.ಕೆ.ಶಿವಕುಮಾರ್ ಬಳಿ ಬಟ್ಟೆ ಹೊಲಿಸಿಕೊಳ್ಳುವಷ್ಟು ದರಿದ್ರ ನನಗಿಲ್ಲ ಎಂದು ಕುಮಾರಸ್ವಾಮಿ ಅವರ ಹೇಳಿಕೆಗೆ ಡಿ ಕೆ ಶಿವಕುಮಾರ್ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಹೆಚ್ ಡಿ ಕುಮಾಸ್ವಾಮಿ ಅವರ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಅವರ ಸರ್ಕಾರ ಬರುವುದೂ ಇಲ್ಲ, ಗೆಲ್ಲುವುದೂ ಇಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.
ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಏನು ಹೇಳಿದ್ದರು? ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ ಬರುತ್ತದೆ, ಎಲ್ಲ ತಯಾರಾಗಿ ಎಂದು ಹೇಳಿದ್ದರು. ಆಗ ಅದಕ್ಕೆ ನಾನು ಉಡುಗೊರೆ ನೀಡುತ್ತೇನೆ ಎಂದು ಹೇಳಿದ್ದೆ ಎಂದು ವ್ಯಂಗ್ಯವಾಡಿದರು. ಗ್ರಾಮೀಣ ಭಾಗದಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳು ಕಡಿಮೆ ಇರುವ ಕಾರಣಕ್ಕೆ ವಸತಿ ಸಚಿವರು ಮನೆ ಹಂಚಿಕೆ ಮೀಸಲಾತಿಯನ್ನು ನಗರ ಪ್ರದೇಶಕ್ಕೆ ವರ್ಗಾವಣೆ ಮಾಡಿದ್ದಾರೆ. ನಾವು ಯಾರ ಸೌಲಭ್ಯಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು.

ಸಾಚಾರ್ ವರದಿಗೆ ಅನುಗುಣವಾಗಿ ಗ್ರಾಮೀಣ ಪ್ರದೇಶಕ್ಕೂ ಶೇ 10 ರಷ್ಟು ಮೀಸಲಾತಿ ನೀಡಲಾಗುತ್ತಿತು. ಆದರೆ ಗ್ರಾಮೀಣ ಭಾಗದಲ್ಲಿ ಕಡಿಮೆ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ಇರುವ ಕಾರಣಕ್ಕೆ ಸೌಲಭ್ಯ ರದ್ದಾಗುತ್ತಿತ್ತು. ನಾವೇನೂ ಹೊಸದಾಗಿ ಮೀಸಲಾತಿ ಸೃಷ್ಟಿ ಮಾಡಿ ನೀಡುತ್ತಿಲ್ಲ. ಪರಿಶಿಷ್ಟ ವರ್ಗ ಮತ್ತು ಜಾತಿಗಳಲ್ಲಿ ಶೇ 90 ರಷ್ಟು ಜನರಿಗೆ ಅನುಕೂಲ ಮಾಡಿಕೊಡಲಾಗಿದೆ. ಹೊಸದಾಗಿ ಮನೆ ಬೇಕಾಗಿರುವವರು ಅಡಿಪಾಯ ಹಾಕಿದರೆ ಮಾತ್ರ ಅವರಿಗೆ ಅನುಕೂಲ ಮಾಡಲು ಸಾಧ್ಯ. ಅಡಿಪಾಯ ಹಾಕದೆ ಹಣ ನೀಡಲು ಸಾಧ್ಯವಿಲ್ಲ ಎಂದರು.
ವಿಪಕ್ಷಗಳು ರಾಜಕೀಯ ಮಾಡುತ್ತವೆ, ಮಾಡಲಿ. ಸರ್ಕಾರ ಮನೆಗಳನ್ನು ಕಟ್ಟಿ ನಷ್ಟ ಮಾಡಿಕೊಳ್ಳಬೇಕೆ? ಪರಿಶಿಷ್ಟರಿಗೆ ಅವಕಾಶ ಮಾಡಿಕೊಡಲಾಗಿತ್ತು, ಆದರೆ ಅವರ ಕೋಟಾ ಮುಗಿದು ಹೋಯಿತು. ನಂತರ ಅದನ್ನು ಹಿಂದುಳಿದ, ಸಾಮಾನ್ಯ ವರ್ಗಗಳಿಗೆ ಬಳಸಿಕೊಂಡಿದ್ದೇವೆ. ನಮ್ಮದು ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಸರ್ಕಾರ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ನಾವೇನು ಕೆಲಸ ಮಾಡಿದ್ದೇವೆ, ಅವರು ಏನು ಮಾಡಿದ್ದಾರೆ ಎಂದು ಸದನದಲ್ಲಿ ಚರ್ಚೆ ಮಾಡಲು ಹೇಳಿ ಎಂದು ತಿಳಿಸಿದರು. ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ ಕೊಟ್ಟರೇ ಮಾತ್ರ ಮನೆ ಹಂಚಿಕೆ ಎನ್ನುವ ಶಾಸಕ ಬಿ.ಆರ್. ಪಾಟೀಲ್ ಅವರ ಆರೋಪದ ಬಗ್ಗೆ ಕೇಳಿದಾಗ, "ಇದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು












Click it and Unblock the Notifications