Suraj Revanna: ಸೂರಜ್ ರೇವಣ್ಣ ಬಂಧನ: ಮಾಧ್ಯಮಗಳ ಪ್ರಶ್ನೆಗೆ ಎಚ್‌.ಡಿ.ಕುಮಾರಸ್ವಾಮಿ ಸಿಡಿಮಿಡಿ

ಬೆಂಗಳೂರು, ಜೂನ್‌ 24:ಯುವಕನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದಲ್ಲಿ ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಬಂಧನಕ್ಕೊಳಗಾಗಿದ್ದು, ಈ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಆರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿಯವರು ಸಿಡಿಮಿಡಿಕೊಂಡರು.

ಈ ಪ್ರಶ್ನೆಯನ್ನು ನಂಗ್ಯಾಕೆ ಕೇಳ್ತೀರಿ? ನಂಗೂ ಅದಕ್ಕೂ ಏನು ಸಂಬಂಧ? ಇಂತಹ ಪ್ರಶ್ನೆಗಳಿಗೆ ಉತ್ತರಿಸುವ ಅವಶ್ಯಕತೆ ನಂಗಿಲ್ಲ ಎಂದು ಕೆಂಡಾಮಂಡಲವಾದರು. ಬಳಿಕ ದಯವಿಟ್ಟು ಇಂತಹ ವಿಷಯಗಳನ್ನ ನನ್ನ ಹತ್ರ ಚರ್ಚೆ ಮಾಡಬಾರದು. ರಾಜ್ಯಕ್ಕೆ ಸಂಬಂಧಪಟ್ಟ ವಿಷ್ಯಗಳಿದ್ರೆ ಚರ್ಚೆ ಮಾಡಿ. ಆ ವಿಷ್ಯಗಳನ್ನು ನನ್ನ ಹತ್ತಿರ ಯಾಕೆ ಚರ್ಚೆ ಮಾಡ್ತೀರಾ. ಅದರ ಅವಶ್ಯಕತೆ ಏನಿದೆ. ಅದಕ್ಕೆ ಕಾನೂನು ಇರುತ್ತದೆ. ಅದನ್ನು ಕಾನೂನು ನೋಡಿಕೊಳ್ಳುತ್ತದೆ. ಅದು ಯಾತಕ್ಕೆ ಬರುತ್ತದೆ ಎಂದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ. ಆ ತರಹದ ಪ್ರಶ್ನೆಗಳನ್ನ ಕೇಳಬೇಡಿ. ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಯಾರಾದರೂ ಹೇಳುತ್ತಾರಾ? ಯಾರೇ ತಪ್ಪು ಮಾಡಿದರೂ ತಪ್ಪೇ. ಕಾನೂನಿನ ಮುಂದೆ ಎಲ್ಲರೂ ತಲೆ ಬಾಗಲೇಬೇಕು ಎಂದರು.

Kumaraswamy s reaction on Suraj Revanna s arrest

ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಡಿ ಕೆ ಬ್ರದರ್ಸ್‌ ಸೋಲು ಅನುಭವಿಸಿದ್ದು, ಚನ್ನಪಟ್ಟಣ ವಶಪಡಿಸಿಕೊಳ್ಳಲು ಡಿ ಕೆ ಶಿವಕುಮಾರ್‌ ಸ್ಪರ್ಧೆ ನಡೆಸಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದು, ರಾಜಕೀಯ ಎದುರಾಳಿ ಡಿ ಕೆ ಶಿವಕುಮಾರ್‌ ಸ್ಪರ್ಧೆ ಮಾಡಲಿ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಾದರೂ ಸ್ಪರ್ಧಿಸಲಿ ಅಥವಾ ಅವರೊಂದಿಗೆ ಇನ್ನೂ ನಾಲ್ಕು ಜನ ಸ್ಪರ್ಧೆ ಮಾಡಲಿ ತಮ್ಮದೇನೂ ಅಭ್ಯಂತರವಿಲ್ಲ. ಶಿವಕುಮಾರ್‌ ಅವರು ಸ್ಪರ್ಧಿಸಲಿದ್ದಾರೆ ಎಂಬುದಕ್ಕೆ ದೊಡ್ಡ ಮಹತ್ವ ನೀಡುವ ಅಗತ್ಯ ಇಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ನಿಲ್ಲಬಹುದು. ಉಪಚುನಾವಣೆಯಲ್ಲಿ ಯಾರನ್ನಾದರೂ ನಾವು ನಿಲ್ಲಬೇಡಿ ಎಂದು ಹೇಳಲಾಗುವುದಿಲ್ಲ. ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಯಾರಾಗಲಿದ್ದಾರೆ ಎಂಬುದನ್ನು ಕಾಲವೇ ತೀರ್ಮಾನಿಸಲಿದೆ. ಉಪಚುನಾವಣೆ ವಿಚಾರಕ್ಕೆ ಈಗ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಈಗ ರಾಜ್ಯದ ಅಭಿವೃದ್ಧಿ ಕಡೆ ಗಮನಹರಿಸೋಣ ಎಂದರು.

ಸಂಡೂರು ದೇವದಾರಿ ಗಣಿಗಾರಿಕೆಗೆ 2016ರಲ್ಲೇ ಅಂದಿನ ರಾಜ್ಯ ಸರ್ಕಾರದ ಶಿಫಾರಸ್ಸಿನ ಅನ್ವಯ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. 404 ಹೆಕ್ಟೇರ್‌ಗೆ ಪರ್ಯಾಯವಾಗಿ 808 ಹೆಕ್ಟೇರ್‌ ಪ್ರದೇಶದಲ್ಲಿ ಅರಣ್ಯೀಕರಣಗೊಳಿಸುವುದಾಗಿ ಗಣಿ ಕಂಪನಿ ಒಪ್ಪಿಕೊಂಡು ₹ 390 ಕೋಟಿ ರಾಜ್ಯ ಸರಕಾರಕ್ಕೆ ಪಾವತಿಸಿದೆ. ಗಣಿಗಾರಿಕೆ ವಿರೋಧಿಸುವವರು ಇದನ್ನು ತಿಳಿದುಕೊಳ್ಳಬೇಕೆಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಅದಿರು ಮಾರಾಟಕ್ಕೆ ನಾನು ಸಹಿ ಹಾಕಿಲ್ಲ. 2005ರಲ್ಲಿ ಗಣಿಗಾರಿಕೆ ನಿಂತು ಹೋಗಿತ್ತು. ಅದರ ನಂತರ, ಅಲ್ಲಿ ಗುತ್ತಿಗೆ ಪಡೆದ ಕಂಪನಿಯು ರಾಜ್ಯ ಹಾಗೂ ಕೇಂದ್ರ ಸರಕಾರದ ಜತೆ ಸಾಕಷ್ಟು ಪ್ರಕ್ರಿಯೆ ನಡೆಸಿತ್ತು. 2016ರಲ್ಲಿ ರಾಜ್ಯ ಸರಕಾರ ದೇವದಾರಿ ಅರಣ್ಯ ಪ್ರದೇಶದಲ್ಲಿ 404 ಹೆಕ್ಟೇರ್‌ ಪ್ರದೇಶದಲ್ಲಿ ಅದಿರು ಉತ್ಪಾದನೆ ಮಾಡುವ ಕುರಿತು ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಅದರ ಮುಂದುವರಿದ ಭಾಗವಾಗಿ ಕೇಂದ್ರ ಸರ್ಕಾರ ಸಹಮತ ನೀಡಿದೆ ಎಂದು ಸ್ಪಷ್ಟಪಡಿಸಿದರು.

ಉದ್ದೇಶಿತ ಗಣಿಗಾರಿಕೆ ಪ್ರದೇಶದಲ್ಲಿ 90 ಸಾವಿರ ಮರಗಳಿವೆ ಎನ್ನುವ ಸ್ಪಷ್ಟತೆಯೂ ಇಲ್ಲ. ಗಣಿಗಾರಿಕೆ 40-50 ವರ್ಷ ನಡೆಯುವ ನಿರಂತರ ಪ್ರಕ್ರಿಯೆಯಾಗಿರುವುದರಿಂದ ಹಂತ-ಹಂತವಾಗಿ ಮರ ಕಡಿಯಲಾಗುತ್ತದೆ. ಅದೇ ಸಮಯಕ್ಕೆ ಅರಣ್ಯೀಕರಣ ಸಹ ನಡೆಯುತ್ತದೆ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+