ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜೀನಾಮೆ
ಕುಂದಾಪುರ, ಜನವರಿ 31: ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ತಮ್ಮ ಶಾಸಕ ಸ್ಥಾನಕ್ಕೆ ನಿನ್ನೆ(ಜ.30) ರಾಜೀನಾಮೆ ನೀಡಿದ್ದಾರೆ.
ತಮ್ಮ ಮಾತೃಪಕ್ಷವಾದ ಬಿಜೆಪಿಗೆ ಅವರು ಮತ್ತೆ ಸೇರಪಡೆಯಾಗಲಿರುವ ಹಿನ್ನೆಲೆಯಲ್ಲಿ ಅವಧಿ ಮುಗಿಯುವ ಮುನ್ನವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
2013 ರ ವಿಧಾನ ಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕುಂದಾಪುರ ಕ್ಷೇತ್ರದಿಂದ ಚುನಾವಣೆಗೆ ನಿಂತು ಅವರು ಗೆಲುವು ಸಾಧಿಸಿದ್ದರು.

ಫೆ.4 ರಂದು ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಅವರ ಸಮ್ಮುಖದಲ್ಲೇ ಹಾಲಾಡಿಯವರು ಬಿಜೆಪಿಗೆ ಸೇರಲಿರುವುದು ಬಹುತೇಕ ಖಚಿತವಾಗಿದೆ.
ಕುಂದಾಪುರದಲ್ಲಿ ನಡೆದ ಪರಿವರ್ತನಾ ಯಾತ್ರೆಯ ಸಂದರ್ಭದಲ್ಲಿ ಕುಂದಾಪುರಕ್ಕೆ ಬಿಜೆಪಿ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ ಶೆಟ್ಟಿಯವರೇ ಎಂದು ವಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಈಗಾಗಲೇ ಘೋಷಿಸಿರುವುದನ್ನು ಇಲ್ಲಿ ಸ್ಮರಿಸಬಹುದು.












Click it and Unblock the Notifications