ರಾಜ್ಯಸಭೆ ಚುನಾವಣೆ ಕುಪೇಂದ್ರ ರೆಡ್ಡಿ ಜೆಡಿಎಸ್ ಅಭ್ಯರ್ಥಿ
ಬೆಂಗಳೂರು, ಜೂ. 7 : ರಾಜ್ಯಸಭೆ ಟಿಕೆಟ್ ಹಂಚಿಕೆ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಯಸಿದ್ದ ಕೆಪಿಸಿಸಿ ಕಾರ್ಯದರ್ಶಿ ಕುಪೇಂದ್ರ ರೆಡ್ಡಿ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಜೆಡಿಎಸ್ ನತ್ತ ಮುಖಮಾಡಿದ್ದು, ಪಕ್ಷದ ಅಭ್ಯರ್ಥಿಯಾಗಿ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಶನಿವಾರ ಘೋಷಣೆಯಾಗುವ ಸಾಧ್ಯತೆ ಇದೆ. ರಾಜ್ಯಸಭೆ ಟಿಕೆಟ್ ಸಿಎಂ ಸಿದ್ದರಾಮಯ್ಯ ಅವರ ಪರಮಾಪ್ತ ಚೆನ್ನಾರೆಡ್ಡಿಗೆ ದೊರೆಯುವುದು ಬಹುತೇಕ ಖಚಿತವಾಗಿದೆ. ಆದ್ದರಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಕುಪೇಂದ್ರ ರೆಡ್ಡಿ ಜೆಡಿಎಸ್ ಸೇರಲು ಸಿದ್ಧತೆ ನಡೆಸಿದ್ದು, ಇಂದು ಈ ಕುರಿತು ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ. [ಬಿಜೆಪಿಯಿಂದ ರಾಜ್ಯಸಭೆಗೆ ಪ್ರಭಾಕರ ಕೋರೆ]

ವಿಧಾನಸಭೆಯಲ್ಲಿ ಜೆಡಿಎಸ್ ಪಕ್ಷ 40 ಶಾಸಕರ ಬಲ ಹೊಂದಿದೆ. ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಕೇವಲ ಐದು ಮತಗಳು ಪಕ್ಷಕ್ಕೆ ಬೇಕಾಗಿವೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕುಪೇಂದ್ರ ರೆಡ್ಡಿ ಪರವಾಗಿ ಅಖಾಡಕ್ಕೆ ಇಳಿದು ಮತಬೇಟೆಯಾಡಲಿದ್ದು, ಐದು ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾಗಲಿದ್ದಾರೆ ಎಂಬ ಮಾತುಗಳಿವೆ. [ಮೇಲ್ಮನೆಗೆ ಶರವಣ, ರಾಜ್ಯಸಭೆಗೆ ಕುಪೇಂದ್ರ]
ಕಾಂಗ್ರೆಸ್ ಮತ್ತು ಜೆಡಿಎಸ್ ಒಮ್ಮತದ ಅಭ್ಯರ್ಥಿಯನ್ನು ಬೆಂಬಲಿಸಬೇಕಾದರೆ, ವಿಧಾನಪರಿಷತ್ತಿನ ಒಂದು ಸ್ಥಾನವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಬೇಕು ಎಂದು ಮನವಿ ಮುಂದಿಡಲಾಗಿತ್ತು. ಆದರೆ, ಕಾಂಗ್ರೆಸ್ ಇದನ್ನು ತಳ್ಳಿ ಹಾಕಿತ್ತು. ಇದರಿಂದಾಗಿ ರಾಜ್ಯಸಭೆಗೆ ಕಾಂಗ್ರೆಸ್ ಮೂರನೇ ಅಭ್ಯರ್ಥಿ ಸ್ಪರ್ಧಿಸಿದರೆ ಗೆಲವು ಸುಲಭವಾಗಿಲ್ಲ.
ವಿಧಾನಪರಿಷತ್ ಚುನಾವಣೆಗೆ ಬಿಜೆಪಿ-ಜೆಡಿಎಸ್ ಒಮ್ಮತ ಅಭ್ಯರ್ಥಿಯಾಗಿ ಯು.ಬಿ ಮಲ್ಲಿಕಾರ್ಜುನ್ ಕಣಕ್ಕಿಳಿಯಲಿದ್ದಾರೆ. ಇನ್ನು ಜೆಡಿಎಸ್ ಸ್ವಂತ ಬಲದಿಂದ ಗೆಲ್ಲಬಹುದಾದ ಒಂದು ಸ್ಥಾನಕ್ಕೆ ಸಿ.ಆರ್. ಮನೋಹರ್, ಕೆ.ವಿ. ನಾರಾಯಣಸ್ವಾಮಿ ಹಾಗೂ ಟಿ.ಎ. ಶರವಣ ಹೆಸರು ಚಾಲ್ತಿಯಲ್ಲಿದೆ. ಆದರೆ, ಅಭ್ಯರ್ಥಿ ಯಾರು?












Click it and Unblock the Notifications