ರೈತರ ವಿದ್ಯುತ್ ಸಮಸ್ಯೆಗೆ ಕುಸುಮ್ ಯೋಜನೆ ಪರಿಹಾರ: ಮಹತ್ವದ ಮಾಹಿತಿ ನೀಡಿದ ಇಂಧನ ಸಚಿವ ಕೆ.ಜೆ.ಜಾರ್ಜ್
ಕೋಲಾರ, ಆಗಸ್ಟ್ 30 : ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ರಾಜ್ಯದಲ್ಲಿ ಕುಸುಮ್ ಬಿ ಮತ್ತು ಕುಸುಮ್ ಸಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಕೋಲಾರದಂತಹ ಜಿಲ್ಲೆಗಳಿಗೆ ಇದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಕೋಲಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಹಾಗೂ ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು, "ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಗಳನ್ನು ಅಳವಡಿಸಲಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರದಿಂದ ಶೇ. 30 ಮತ್ತು ರಾಜ್ಯ ಸರ್ಕಾರದಿಂದ ಶೇ. 50ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಒಟ್ಟು ವೆಚ್ಚದ ಶೇ. 20ನ್ನು ಫಲಾನುಭವಿಗಳು ಭರಿಸಿದರೆ ರೈತರಿಗೆ ಸರ್ಕಾರದಿಂದಲೇ ಪಂಪ್ ಸೆಟ್ ಗಳನ್ನು ಅಳವಡಿಸಿಕೊಡಲಾಗುವುದು. ರಾಜ್ಯ ಸರ್ಕಾರ ಸಬ್ಸಿಡಿ ಹೆಚ್ಚಿಸಿರುವುದರಿಂದಲೇ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಯೋಜನೆಗೆ ನೋಂದಾಯಿಸಿದ್ದಾರೆ ಎಂದರು.

ಅದೇ ರೀತಿ ಕುಸುಮ್ ಸಿ ಫೀಡರ್ ಸೋಲಾರೈಸೇಶನ್ ಯೋಜನೆಯಡಿ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಿ ಸಮೀಪದ ಸಬ್ ಸ್ಟೇಷನ್ ಗೆ ವಿದ್ಯುತ್ ಒದಗಿಸಲಾಗುತ್ತದೆ. ಆಯಾ ಸಬ್ ಸ್ಟೇಷನ್ ವ್ಯಾಪ್ತಿಯಲ್ಲೇ ಆ ವಿದ್ಯುತ್ ಪೂರೈಕೆಯಾಗುವುದರಿಂದ ಗ್ರಾಹಕರಿಗೆ ವಿದ್ಯುತ್ ಸಮಸ್ಯೆ ಇಲ್ಲದಂತಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸೋಲಾರ್ ಘಟಕಗಳನ್ನು ಸ್ಥಾಪಿಸಲಾಗುವುದು.
ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ 4 ಎಕರೆ ಜಮೀನು ಬೇಕಿದ್ದು, ಖಾಸಗಿ ಭೂಮಿಗೆ ಪ್ರತಿ ಎಕರೆಗೆ ವಾರ್ಷಿಕ 25 ಸಾವಿರ ರೂ. ನೀಡಲಾಗುತ್ತದೆ. ಸರ್ಕಾರಿ ಭೂಮಿಯಾದರೆ ಇಂಧನ ಇಲಾಖೆಯಿಂದ ಜಿಲ್ಲಾಧಿಕಾರಿಗಳ ಬಳಿ ಪ್ರತಿ ಎಕರೆಗೆ 25 ಸಾವಿರ ರು. ಠೇವಣಿ ಇಟ್ಟು ಆ ಮೊತ್ತವನ್ನು ಆ ಭಾಗದ ಅಂಗನವಾಡಿ, ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು ವೆಚ್ಚ ಮಾಡಲಾಗುವುದು," ಎಂದು ತಿಳಿಸಿದರು.
"ರಾಜ್ಯದಲ್ಲಿ ಪ್ರಸ್ತುತ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಲಭ್ಯವಿದೆ. ಅದರ ಸಮರ್ಪಕ ಪೂರೈಕೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೆಚ್ಚುವರಿ ಸಬ್ ಸ್ಟೇಷನ್ ಗಳ ನಿರ್ಮಾಣ, ಟ್ರಾನ್ಸ್ ಫಾರಂಗಳ ಉನ್ನತೀಕರಣ ಮುಂತಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೆಚ್ಚುವರಿ ವಿದ್ಯುತ್ ಅಗತ್ಯವಿದ್ದರೆ ವಿದ್ಯುತ್ ಖರೀದಿ ಬದಲು ಇತರೆ ರಾಜ್ಯಗಳೊಂದಿಗೆ ವಿದ್ಯುತ್ ವಿನಿಮಯ ಮಾಡಿಕೊಂಡು ಇಲಾಖೆಗೆ ಹೊರೆಯಾದಗದಂತೆ ನೋಡಿಕೊಳ್ಳಲಾಗುತ್ತಿದೆ," ಎಂದು ಹೇಳಿದರು.
ಜಿಲ್ಲೆಯ ಅಂಚಿನಲ್ಲಿ ಇರುವ ಕೆಲವು ಗ್ರಾಮಗಳಲ್ಲಿ ಅವಿರತ ವಿದ್ಯುತ್ ಸಂಪರ್ಕ ಒದಗಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯ ಇಂಧನ ವ್ಯವಸ್ಥೆಗಳಾದ ಪವನ ವಿದ್ಯುತ್ ಅಥವಾ ಸೌರ ವಿದ್ಯುತ್ ವ್ಯವಸ್ಥೆ ಮಾಡಿಕೊಡಲಾಗುವುದು. ಇದಕ್ಕಾಗಿ ಕೇಂದ್ರ ಸರ್ಕಾರದ ಯೋಜನೆಯನ್ನು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಜಾರಿಯಲ್ಲಿರುವುದರಿಂದ ಕೇಂದ್ರ ಸರ್ಕಾರದ ಸೂರ್ಯ ಘರ್ ಯೋಜನೆಗೆ ಅಷ್ಟೊಂದು ಬೇಡಿಕೆ ಇಲ್ಲ. ಇದರ ಹೊರತಾಗಿಯೂ ಸೂರ್ಯ ಘರ್ ಯೋಜನೆ ಕುರಿತಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜನ ಜಾಗೃತಿ ಮೂಡಿಸಲಾಗುವುದು ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲೆಯ ಶಾಸಕರು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳನ್ನು ಹೇಳಿಕೊಂಡಾಗ ಪ್ರತಿಕ್ರಿಯಿಸಿದ ಸಚಿವರು, "ಜನತೆ ತಮ್ಮ ಸಮಸ್ಯೆಗಳನ್ನು ನೇರವಾಗಿ ಶಾಸಕರೊಂದಿಗೆ ಹೇಳಿಕೊಳ್ಳುತ್ತಾರೆ. ಹೀಗಾಗಿ ಅವರಿಗೆ ಸಮಸ್ಯೆಯ ಬಗ್ಗೆ ಅರಿವಿರುತ್ತದೆ. ಆದ್ದರಿಂದ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಬೆಸ್ಕಾಂ ಎಂಜಿನಿಯರ್ ಗಳು ತಮ್ಮ ವ್ಯಾಪ್ತಿಯ ಶಾಸಕರ ಜತೆ ಸಂಪರ್ಕದಲ್ಲಿದ್ದು, ಅವರ ಸಲಹೆಗಳನ್ನು ಪಡೆದು ಕೆಲಸ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications