ಸಿಎಂ ಸಿದ್ದರಾಮಯ್ಯ ಮಾಧ್ಯಮ ಸಲಹೆಗಾರರಾಗಿ ಕೆವಿ ಪ್ರಭಾಕರ್ ನೇಮಕ
ಬೆಂಗಳೂರು, ಮೇ 22: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರರೂಢರಾಗಿರುವ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಕಳೆದ ಅವಧಿಯಲ್ಲಿ ಸಿದ್ದರಾಮಯ್ಯ ಅವರಿಗೆ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತರಾದ ದಿನೇಶ್ ಅಮಿನ್ಮಟ್ಟು ಅವರು ನೇಮಕವಾಗಿದ್ದರು. ಈ ಬಾರಿ ಕೆವಿ ಪ್ರಭಾಕರ್ ಅವರು ಮಾಧ್ಯಮ ಸಲಹೆಗಾರರಾಗಿ ಆಯ್ಕೆಯಾಗಿದ್ದಾರೆ.

ಈ ಸಂಬಂಧ ಶ್ರೀ ಕೆ.ವಿ. ಪ್ರಭಾಕರ್, ಹಿರಿಯ ಪತ್ರಕರ್ತರು ನಂ.127/7 ಟೆಂಪಲ್ ಕೋರ್ಟ್ ಅಪಾರ್ಟ್ಮೆಂಟ್, ಬುಲ್ ಟೆಂಪಲ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು- 18 ಇವರನ್ನು ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ನೇಮಿಸಲಾಗಿದೆ. ಇವರಿಗೆ ದಿನಾಂಕ 20.05.2023ರಿಂದ ಜಾರಿಗೆ ಬರುವಂತೆ ಹಾಗೂ ಮುಮದಿನ ಆದೇಶದವರೆಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಡಾ. ವೆಂಕಟೇಶಯ್ಯ ಕೆಎಎಸ್ (ಆಯ್ಕೆ ಶ್ರೇಣಿ) ಅಧಿಕಾರಿ ಇವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ದಿನಾಂಕ 20.5.2023ರಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ಮಾನ್ಯ ಮುಖ್ಯಮಂತ್ರಿಯವರು ಆಪ್ತ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದೇಶಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆದು ಮೇ 13ರಂದು ಫಲಿತಾಂಶ ಹೊರ ಬಂದಿತ್ತು. ಈ ಬಾರಿ ಕಾಂಗ್ರೆಸ್ಗೆ 135 ಸ್ಥಾನಗಳನ್ನು ಪಡೆದುಕೊಂಡಿತ್ತು. ಬಿಜೆಪಿ 66, ಜೆಡಿಎಸ್ 19 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತ್ತು.
-
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
Karnataka: ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳು ಪ್ರಕಟ: ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ?











Click it and Unblock the Notifications