ಕರಾವಳಿಯಲ್ಲಿ ಚಂಡಮಾರುತ: ಒಳನಾಡಿನ ಮೂರು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್'
ಬೆಂಗಳೂರು, ಅಕ್ಟೋಬರ್ 26: 'ಕ್ಯಾರ್' ಚಂಡಮಾರುತ ಪರಿಣಾಮ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಒಳನಾಡಿದ ಹುಬ್ಬಳ್ಳಿ, ಧಾರವಾಡ, ಬೆಳಗಾವಿಯಲ್ಲಿ ಭಾರಿ ಮಳೆ ಮುಂದುವರೆದಿದ್ದು ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಸೇರಿಸಿದೆ.
ಕರಾವಳಿ ಭಾಗದಲ್ಲಿ ಕ್ಯಾರ್ ಚಂಡಮಾರುತ ಅನಾಹುತ ಸೃಷ್ಟಿಸಿದ್ದು, ಈಗಾಗಲೇ ಉಡುಪಿಯಲ್ಲಿ ಮಳೆಯಿಂದಾಗಿ ಇಬ್ಬರು ಜೀವ ಕಳೆದುಕೊಂಡಿದ್ದಾರೆ. ಮಡಿಕೇರಿಯಲ್ಲಿ ಒಬ್ಬರು ಅಸುನೀಗಿದ್ದಾರೆ.

ಚಂಡಮಾರುತದ ಭಾರಿ ಮಳೆಗೆ ಹಲವು ಆಸ್ತಿ-ಪಾಸ್ತಿ ಹಾನಿಯಾಗಿದ್ದು, ಹಲವೆಡೆ ಮನೆ ಕುಸಿತ, ಮನೆಗೆ ನೀರು ನುಗ್ಗಿರುವ ಘಟನೆ ನಡೆದಿದೆ.
ಇನ್ನು, ಉತ್ತರ ಒಳನಾಡು ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.












Click it and Unblock the Notifications