ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮತ್ತು ಪತ್ನಿಗೆ ಕೋವಿಡ್ ಸೋಂಕು ದೃಢ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 5: ರಾಜ್ಯ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಅವರ ಪತ್ನಿಯಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ಇಬ್ಬರೂ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

Recommended Video

ಭಾರತೀಯರನ್ನು ಅಪಹರಿಸಿದ China ಸೇನೆ , Arunachal pradeshದಲ್ಲಿ ಘಟನೆ | Oneindia Kannada

ಯಲ್ಲಾಪುರ ಕ್ಷೇತ್ರದ ಶಾಸಕರಾಗಿರೂ ಆಗಿರುವ ಶಿವರಾಮ್ ಹೆಬ್ಬಾರ್ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.

 ಅಪ್ಪಾಜಿ ಗೌಡರ ಸಾವಿನಿಂದ ಜಿಲ್ಲಾಡಳಿತ ಪಾಠ ಕಲಿಯಬೇಕು: ವೈಎಸ್ ವಿ ದತ್ತ ಅಪ್ಪಾಜಿ ಗೌಡರ ಸಾವಿನಿಂದ ಜಿಲ್ಲಾಡಳಿತ ಪಾಠ ಕಲಿಯಬೇಕು: ವೈಎಸ್ ವಿ ದತ್ತ

'ಇಂದು ನಾನು ಹಾಗೂ ನನ್ನ ಧರ್ಮಪತ್ನಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಪರೀಕ್ಷಾ ವರದಿಯಲ್ಲಿ ಇಬ್ಬರಿಗೂ ಸಹ ಪಾಸಿಟಿವ್ ಎಂದು ಬಂದಿದೆ. ಯಾವುದೇ ಹೆಚ್ಚಿನ ರೋಗಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ನಲ್ಲಿದ್ದು ಚಿಕಿತ್ಸೆ ತೆಗೆದುಕೊಳ್ಳಲಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ, ಹಾರೈಕೆಯಿಂದ ಶೀಘ್ರ ಗುಣಮುಖವಾಗಿ ವಿಶ್ವಾಸವಿದೆ' ಎಂದು ಅವರು ಹೇಳಿದ್ದಾರೆ.

Labour Minister Of Karnataka Shivaram Hebbar And His Wie Tests Positive For Coronavirus

ಕಾರ್ಮಿಕ ಖಾತೆ ಸಚಿವರು ಮತ್ತು ನನ್ನ ಆತ್ಮೀಯರಾದ ಶಿವರಾಮ್ ಹೆಬ್ಬಾರ್ ಮತ್ತು ಅವರ ಶ್ರೀಮತಿಯವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಚೇತರಿಸಿಕೊಳ್ಳಲಿ, ಮತ್ತೆ ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ನಿರತರಾಗಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ನನ್ನ ಆತ್ಮೀಯರು, ಸಂಪುಟ ಸಹೋದ್ಯೋಗಿಗಳು ಮತ್ತು ರಾಜ್ಯದ ಕಾರ್ಮಿಕ ಸಚಿವರಾದ ಶ್ರೀ ಶಿವರಾಮ್ ಹೆಬ್ಬಾರ್ ಅವರು ಕೊರೊನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ತಮ್ಮ ಎಂದಿನ ಕರ್ತವ್ಯಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಸಚಿವ ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

ನೀವಿಬ್ಬರೂ ಬೇಗನೆ ಹುಷಾರಾಗಿ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹಾರೈಸಿದ್ದಾರೆ. ಸಚಿವ ಸಿ.ಟಿ. ರವಿ, ಜಗದೀಶ್ ಶೆಟ್ಟರ್, ಪಿ.ಸಿ. ಮೋಹನ್, ಸುರೇಶ್ ಅಂಗಡಿ, ಶೋಭಾ ಕರಂದ್ಲಾಜೆ, ಬಿ.ವೈ. ರಾಘವೇಂದ್ರ ಸೇರಿದಂತೆ ಅನೇಕ ಸಹೋದ್ಯೋಗಿಗಳು ಶಿವರಾಮ್ ಹೆಬ್ಬಾರ್ ಅವರು ಶೀಘ್ರದಲ್ಲಿಯೇ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

English summary
Labour Minister of Karnataka Shivaram Hebbar informed that, he and his wife both are tested positive for coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X