ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲ್ಲಿದ್ದಲು ಕೊರತೆ, ಕತ್ತಲೆ ರಾತ್ರಿಗಳನ್ನು ಕಳೆಯಲು ತಯಾರಾಗಿ

|
Google Oneindia Kannada News

Recommended Video

ಕರ್ನಾಟಕದಲ್ಲಿ ಕಲ್ಲಿದ್ದಲ ಕೊರತೆಯಿಂದ ವಿದ್ಯುತ್ ಕಡಿತದ ಸಾಧ್ಯತೆ | Oneindia Kannada

ಬೆಂಗಳೂರು, ಅಕ್ಟೋಬರ್ 18: ರಾಜ್ಯದ ವಿದ್ಯುತ್ ಶಾಖೋತ್ಪನ್ನ ಕೇಂದ್ರಗಳಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿದ್ದು ರಾಜ್ಯವು ಭಾರಿ ಪ್ರಮಾಣದ ವಿದ್ಯುತ್‌ ಕಡಿತ ಎದುರಿಸುವ ಸ್ಥಿತಿ ಇದೆ.

ಮೈಸೂರು ದಸರಾ - ವಿಶೇಷ ಪುರವಣಿ

ಕಲ್ಲಿದ್ದಲು ಖಾಲಿಯಾದ ಕಾರಣ ರಾಯಚೂರು ಶಾಖೋತ್ಪನ್ನ ಕೇಂದ್ರದ ನಾಲ್ಕು ಘಟಕಗಳು ಬುಧವಾರವೇ ಕಾರ್ಯ ಸ್ಥಗಿತಗೊಳಿಸಿವೆ. ದೈನಂದಿನ ಪೂರೈಕೆ ಅನುಸರಿಸಿ ಮುಂದಿನ ದಿನಗಳಲ್ಲಿ ವಿದ್ಯುತ್ ಉತ್ಪಾದನೆ ಮಾಡಲಾಗುವುದು ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯದಲ್ಲಿ ಕಲ್ಲಿದ್ದಲು ಖಾಲಿ: ಕೇಂದ್ರ ಮಧ್ಯಪ್ರವೇಶಕ್ಕೆ ಎಚ್ಡಿಕೆ ಆಗ್ರಹ ರಾಜ್ಯದಲ್ಲಿ ಕಲ್ಲಿದ್ದಲು ಖಾಲಿ: ಕೇಂದ್ರ ಮಧ್ಯಪ್ರವೇಶಕ್ಕೆ ಎಚ್ಡಿಕೆ ಆಗ್ರಹ

ಬಳ್ಳಾರಿ ಮತ್ತು ಯಮರಮಸ್‌ನ ವಿದ್ಯುತ್‌ ಉತ್ಪಾದನಾ ಘಟಕಗಳಲ್ಲಿ ಐದು ದಿನಗಳಿಗೆ ಆಗುವಷ್ಟು ಮಾತ್ರವೇ ಕಲ್ಲಿದ್ದಲು ಉಳಿದಿದೆ. ಆ ನಂತರ ಅಲ್ಲಿಯೂ ಹಲವು ಘಟಕಗಳು ಬಂದ್ ಆಗಲಿವೆ.

Lack of coal in Karnataka power fluctuation may take place

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಪೂರೈಸಬೇಕಿದ್ದ 6 ಲಕ್ಷ ಟನ್‌ ಕಲ್ಲಿದ್ದಲನ್ನು ಪೂರೈಸದೇ ಇರುವ ಕಾರಣ ಕಲ್ಲಿದ್ದಲು ಕೊರತೆ ಉಲ್ಬಣಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಯಚೂರು : ಕಲ್ಲಿದ್ದಲು ಕೊರತೆ, ವಿದ್ಯುತ್ ಉತ್ಪಾದನೆ ಸ್ಥಗಿತ? ರಾಯಚೂರು : ಕಲ್ಲಿದ್ದಲು ಕೊರತೆ, ವಿದ್ಯುತ್ ಉತ್ಪಾದನೆ ಸ್ಥಗಿತ?

ಮುಖ್ಯಮಂತ್ರಿಗಳು ಈಗಾಗಲೇ ಕೇಂದ್ರಕ್ಕೆ ಕಲ್ಲಿದ್ದಲು ಪೂರೈಕೆ ಮಾಡುವಂತೆ ಪತ್ರ ಬರೆದಿದ್ದಾರೆ. ಎಂಸಿಎಲ್‌ ಹಾಗೂ ವೆಸ್ಟರ್ನ್‌ ಕೋಲ್ಡ್‌ ಫೀಲ್ಡ್‌ ನಿಂದ ಅಗತ್ಯ ಪ್ರಮಾಣದ ಕಲ್ಲಿದ್ದಲು ಪೂರೈಕೆ ಮಾಡಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.

ಅಕ್ಟೋಬರ್‌ ಟು ಡಿಸೆಂಬರ್ ಹೆಚ್ಚುವರಿ ವಿದ್ಯುತ್ ಬಿಲ್ ಏಕೆ ಕಟ್ಟಬೇಕು?ಅಕ್ಟೋಬರ್‌ ಟು ಡಿಸೆಂಬರ್ ಹೆಚ್ಚುವರಿ ವಿದ್ಯುತ್ ಬಿಲ್ ಏಕೆ ಕಟ್ಟಬೇಕು?

ರಾಯಚೂರಿನ ಶಾಖೋತ್ಪನ್ನ ಕೇಂದ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಮಾಡಲು 30 ಟನ್ ಕಲ್ಲಿದ್ದಲು ಬೇಕು ಆದರೆ ಈಗ 10-12 ಟನ್ ಅಷ್ಟೆ ಪೂರೈಕೆ ಆಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬಳ್ಳಾರಿ ಹಾಗೂ ಯಮರಮಸ್‌ನಲ್ಲಿ ವಿದ್ಯುತ್ ಉತ್ಪಾದನೆ ನಡೆಯುತ್ತಿರುವ ಕಾರಣ ಆತಂಕದ ಪರಿಸ್ಥಿತಿ ಇಲ್ಲ ಎಂದು ಸಹ ಅವರು ಭರವಸೆ ನೀಡಿದ್ದಾರೆ.

English summary
Lack of coal in Karnataka load shedding may take place in state. CM Kumaraswamy writes letter to central government to supply 6 lakh ton coal immediately.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X