ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಕೊರತೆ: ಕೇಂದ್ರಕ್ಕೆ ಪತ್ರ!
ಕರ್ನಾಟಕ ಬಿಜೆಪಿಯಲ್ಲಿ ಬಣ ರಾಜಕೀಯ ಜೋರಾಗಿದ್ದು. ಸದ್ಯಕ್ಕೆ ಮುಗಿಯುವ ಸಾಧ್ಯತೆ ಇಲ್ಲ. ಇದರ ನಡುವೆ ಬಿಜೆಪಿಯಲ್ಲಿ ಇನ್ನಷ್ಟು ಗೊಂದಲಗಳು ಸೃಷ್ಟಿಯಾಗುತ್ತಿವೆ. ಇದರ ನಡುವೆ ಮಾಜಿ ಮುಖ್ಯಮಂತ್ರಿ ಹಾಗೂ ಸದಾನಂದ ಗೌಡ ಅವರು ಬಿಜೆಪಿ ಹೈಕಮಾಂಡ್ ಗೆ ಪತ್ರ ಬರೆದಿದ್ದಾರೆ. ಈ ಪತ್ರದ ಬಗ್ಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಭಾರೀ ಚರ್ಚೆಯಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಷಯ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಸದಾನಂದ ಗೌಡ ಅವರು ಯಾವ ವಿಚಾರಕ್ಕೆ ಪತ್ರ ಬರೆದಿದ್ದಾರೆ ಎನ್ನುವ ವಿವರ ಇಲ್ಲಿದೆ.
ದೆಹಲಿ ವಿಧಾನಸಭೆ ಚುನಾವಣೆಯನ್ನು ಉದಾಹರಣೆಯನ್ನಾಗಿ ಕೊಟ್ಟಿರುವ ಸದಾನಂದ ಗೌಡ ಅವರು ಬಿಜೆಪಿ ದೆಹಲಿ ಜಯ ಹಾಗೂ ಪಾಠಗಳು ಮತ್ತು ಕರ್ನಾಟಕದ ಮುಂದಿನ ಹಾದಿ ಎನ್ನುವ ಶೀರ್ಷಿಕೆಯೊಂದಿಗೆ ಪತ್ರವೊಂದನ್ನು ಬರೆದಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದು ಪಕ್ಷದ ಸಕಲ ಮಟ್ಟದ ಶ್ರಮ. ಸಂಘಟನೆ ಹಾಗೂ ಜನಪರ ರಾಜಕೀಯದ ಫಲವಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯ ಅವರ ದೃಢ ನಿರ್ಧಾರ, ಅಭಿವೃದ್ಧಿ ಪರ ಕೆಲಸ ಹಾಗೂ ಕೇಂದ್ರ ಸರ್ಕಾರದ ಸಮರ್ಥ ಕಾರ್ಯ ವಿಧಾನದಿಂದ ಜನರ ವಿಶ್ವಾಸವನ್ನು ಮತ್ತೆ ಗಳಿಸಿದೆ. ಪಕ್ಷದ ಬೂತ್ ಮಟ್ಟದ ಬಲವಾದ ತಂತ್ರ, ಸುಸಂಘಟಿತ ಪುಚಾರ ಯಂತ್ರ ಹಾಗೂ ಜನಸಾಮಾನ್ಯರ ಸಮಸ್ಯೆಗಳನ್ನು ನಿರ್ಧಾರಾತ್ಮಕವಾಗಿ ಪರಿಹರಿಸುವ ನೇತೃತ್ವದ ಫಲವಾಗಿ ದೆಹಲಿಯಲ್ಲಿ ಈ ಜಯ ಸಾಧ್ಯವಾಗಿದೆ. ಈ ಗೆಲುವು ಜನತೆಯ ಆಶೀರ್ವಾದ ಹಾಗೂ ನಾವೇ ಅನುಸರಿಸಬೇಕಾದ ಮಾರ್ಗದರ್ಶನವನ್ನು ಕೊಟ್ಟಿದೆ ಎಂದಿದ್ದಾರೆ.
ದೆಹಲಿ ವಿಧಾನಸಭೆ ಚುನಾವಣೆಯ ಗೆಲುವನ್ನು ಉಲ್ಲೇಖಿಸಿ ಮಾತನಾಡಿರುವ ಅವರು ಕರ್ನಾಟಕದಲ್ಲಿನ ಸಮಸ್ಯೆಯನ್ನು ಪರಿಹರಿಸುವ ಅವಶ್ಯಕತೆಯೂ ಇದೆ ಎಂದು ಹೇಳಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆಯ ಗೆಲುವಿಗೆ ವಿರುದ್ಧವಾಗಿ ಕರ್ನಾಟಕ ಬಿಜೆಪಿಯಲ್ಲಿ ಪರಿಸ್ಥಿತಿ ಇದೆ. ಕರ್ನಾಟಕದಲ್ಲಿ ಬಿಜೆಪಿ ಇನ್ನೂ ಆಂತರಿಕ ಕಲಹ ಮತ್ತು ಸಂಘಟನಾ ದೌರ್ಬಲ್ಯದಿಂದ ಬಳಲುತ್ತಿದೆ. ಪಕ್ಷದಲ್ಲಿ ಉದ್ಭವಿಸಿರುವ ಭಿನ್ನಾಭಿಪ್ರಾಯಗಳು ಮತ್ತು ಗುಂಪು ರಾಜಕಾರಣದಿಂದ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿದೆ ಎಂದು ಸದಾನಂದ ಗೌಡ ಅವರು ಬಹಿರಂಗ ಪತ್ರವನ್ನು ಬರೆದಿದ್ದಾರೆ.
ದೆಹಲಿಯಲ್ಲಿ ಪಕ್ಷ ಏಕತೆ ಮತ್ತು ಶಿಸ್ತಿನ ಕಾರ್ಯಪದ್ಧತಿಯನ್ನು ಅನುಸರಿಸಿದರೆ, ಕರ್ನಾಟಕದಲ್ಲಿ ಕೆಲವು ನಾಯಕರು ತಮ್ಮ ಸ್ವಂತ ರಾಜಕೀಯ ಲಾಭಕ್ಕಾಗಿ ಒಡಕು ಸೃಷ್ಟಿ ಮಾಡುತ್ತಿರುವುದು ಗಂಭೀರ ಸಮಸ್ಯೆಯಾಗುತ್ತಿದೆ. ಇದರಿಂದ ಕಾರ್ಯಕರ್ತರು ಹಾಗೂ ಮತದಾರರಲ್ಲಿ ಒಂದು ರೀತಿಯ ಅಸ್ಥಿರತೆ ಉಂಟಾಗಿದೆ. ಈ ಸನ್ನಿವೇಶವನ್ನು ಸರಿಪಡಿಸದೇ ಹೋದರೆ, ಮುಂಬರುವ ಚುನಾವಣೆಯಲ್ಲಿ ಸವಾಲುಗಳನ್ನು ಎದುರಿಸಬೇಕಾಗಬಹುದು ಎಂದು ಹೇಳಿದ್ದಾರೆ.
ಪಕ್ಷದ ಶಕ್ತಿ ಪುನರ್ ನಿರ್ಮಿಸುವ ಅಗತ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಬಿಜೆಪಿ ಪಕ್ಷದ ಯಶಸ್ಸು ಎನ್ನುವುದು ಯಾವುದೇ ಒಬ್ಬ ವ್ಯಕ್ತಿ ಅವರ ಸಾಧನೆ ಅಲ್ಲ. ಇದು ಶ್ರದ್ಧೆ, ಶ್ರಮ ಹಾಗೂ ಸಮೂಹ ಶಕ್ತಿಯ ಪ್ರತೀಕ. ರಾಜ್ಯದಲ್ಲಿ ಪಕ್ಷ ಮತ್ತಷ್ಟು ಬಲಿಷ್ಠಗೊಳ್ಳಬೇಕಾದರೆ. ಎಲ್ಲಾ ನಾಯಕರೂ ಒಗ್ಗೂಡಬೇಕು, ಸಂಘಟನೆಯ ಶಕ್ತಿಯನ್ನು ಪುನರ್ ನಿರ್ಮಿಸಬೇಕು. ಗಟ್ಟಿ ತಂತ್ರವನ್ನು ಅನುಸರಿಸಬೇಕು.
ಪಕ್ಷದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳಬೇಕು. ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ಸಹಕಾರ ಮತ್ತು ಏಕತೆ ಯೋಗವನ್ನು ತರುವ ಹಂತ ಕಡ್ಡಾಯವಾಗಿದೆ. ದೆಹಲಿಯ ಗೆಲುವು ನಮಗೆ ಪಾಠವಾಗಬೇಕು ಹಾಗು ಒಳಜಗಳ ಮುಗಿದು, ಕಾರ್ಯಪದ್ಧತಿಯಲ್ಲಿ ಸ್ಪಷ್ಟತೆ ಮತ್ತು ಶಿಸ್ತು ಇರಬೇಕು. ಕರ್ನಾಟಕದ ಜನತೆ BJPಗೆ ಬೆಂಬಲ ನೀಡಲು ಸಿದ್ಧರಿದ್ದಾರೆ. ಆದರೆ ಅವರ ವಿಶ್ವಾಸವನ್ನು ಸಂಪಾದಿಸಲು ಪಕ್ಷದ ಒಳಾಂಗಣವನ್ನು ಶುದ್ಧಗೊಳಿಸಿ, ಬಲಿಷ್ಠಗೊಳಿಸಬೇಕಾಗಿದೆ ಎಂದು ಅವರು ವಿವರಿಸಿದ್ದಾರೆ.
-
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral












Click it and Unblock the Notifications