ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದ ಲಹರಿ ವೇಲು
ಬೆಂಗಳೂರು, ಆಗಸ್ಟ್ 30 : ಲಹರಿ ರೆಕಾರ್ಡಿಂಗ್ ಸಂಸ್ಥೆಯ ಮಾಲೀಕ ಲಹರಿ ವೇಲು ಬಿಜೆಪಿ ಸೇರಿದರು. ಬಿಜೆಪಿ ಸೇರುತ್ತಿರುವುದಾಗಿ ಎರಡು ದಿನಗಳ ಹಿಂದೆ ಅವರು ಮಾಹಿತಿ ನೀಡಿದ್ದರು.
ಬುಧವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾದರು. ಕೇಂದ್ರ ಸಚಿವ ಅನಂತ ಕುಮಾರ್, ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

'ನಮ್ಮ ಕುಟುಂಬದಲ್ಲಿ ಯಾರೂ ರಾಜಕಾರಣದಲ್ಲಿಲ್ಲ. ಜನರ ಸೇವೆ ಮಾಡಬೇಕು ಎಂಬ ಆಸೆ ಇತ್ತು. ಯಡಿಯೂರಪ್ಪ ಅವರು ಕೆಲವು ದಿನಗಳ ಹಿಂದೆ ಮನೆಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದರು. ಪಕ್ಷಕ್ಕೆ ಆಹ್ವಾನಿಸಿದರು' ಎಂದು ಲಹರಿ ವೇಲು ಹೇಳಿದ್ದರು.
Recommended Video

'ಕುಟುಂಬ ಸದಸ್ಯರ ಜೊತೆ ಸುದೀರ್ಘವಾದ ಚರ್ಚೆ ನಡೆಸಿ ರಾಜಕಾರಣಕ್ಕೆ ಪಾದಾರ್ಪಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಂಡಿದ್ದೇನೆ' ಎಂದು ಹೇಳಿದ್ದರು. ಇಂದು ಯಡಿಯೂರಪ್ಪ ಸಮ್ಮುಖದಲ್ಲಿ ಅವರು ಪಕ್ಷ ಸೇರಿದ್ದಾರೆ.
ಲಹರಿ ವೇಲು ಸೇರ್ಪಡೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ ಅವರು, 'ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ಮೂಲಕ ಕಾಂಗ್ರೆಸ್ ಇತಿಹಾರ ಸೇರಲಿದೆ' ಎಂದರು.












Click it and Unblock the Notifications