ಲಹರಿ ವೇಲು ರಾಜಕಾರಣಕ್ಕೆ, ಬಿಜೆಪಿಗೆ ಸೇರ್ಪಡೆ

ಬೆಂಗಳೂರು, ಆಗಸ್ಟ್. 28 : ಲಹರಿ ಸಂಸ್ಥೆಯ ಮಾಲೀಕ ಲಹರಿ ವೇಲು ರಾಜಕಾರಣಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಹೌದು, ಲಹರಿ ವೇಲು ಈ ತಿಂಗಳ ಅಂತ್ಯದಲ್ಲಿ ಬಿಜೆಪಿ ಸೇರಲಿದ್ದಾರೆ.

Recommended Video

      Ramanath Rai And Oscar Fernandes Dance Dance

      ಸೋಮವಾರ ಮಾಧ್ಯಮಗಳಿಗೆ ಲಹರಿ ವೇಲು ಅವರು ಈ ಕುರಿತು ಮಾಹಿತಿ ನೀಡಿದರು. ಆಗಸ್ಟ್ 30 ರಂದು ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ವೇಲು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ.

      Lahari Velu will join BJP on August 30, 2017

      ಮಾಧ್ಯಮಗಳ ಜೊತೆ ಮಾತನಾಡಿದ ಲಹರಿ ವೇಲು, 'ನಮ್ಮ ಕುಟುಂಬದಲ್ಲಿ ಯಾರೂ ರಾಜಕಾರಣದಲ್ಲಿಲ್ಲ. ಜನರ ಸೇವೆ ಮಾಡಬೇಕು ಎಂಬ ಆಸೆ ಇತ್ತು. ಯಡಿಯೂರಪ್ಪ ಅವರು ಕೆಲವು ದಿನಗಳ ಹಿಂದೆ ಮನೆಗೆ ಕರೆಸಿಕೊಂಡು ಮಾತುಕತೆ ನಡೆಸಿದರು. ಪಕ್ಷಕ್ಕೆ ಆಹ್ವಾನಿಸಿದರು' ಎಂದರು.

      'ಕುಟುಂಬ ಸದಸ್ಯರ ಜೊತೆ ಸುದೀರ್ಘವಾದ ಚರ್ಚೆ ನಡೆಸಿ ರಾಜಕಾರಣಕ್ಕೆ ಪಾದಾರ್ಪಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಂಡಿದ್ದೇನೆ. ಆ. 30ರಂದು ಬಿಜೆಪಿ ಸೇರಲಿದ್ದೇನೆ' ಎಂದು ವೇಲು ಹೇಳಿದರು.

      ಸುಮಾರು ಮೂವತ್ತು ವರ್ಷಗಳಿಂದ ಚಿತ್ರರಂಗದಲ್ಲಿ, ಆಡಿಯೋ ಕಂಪನಿ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ವೇಲು ಅವರು ರಾಜಕಾರಣಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ತೆರೆಕಂಡ 'ಗೋಲಿ ಸೋಡಾ' ಚಿತ್ರದಲ್ಲಿ ಲಹರಿ ವೇಲು ರಾಜಕಾರಣಿ ಪಾತ್ರ ಮಾಡಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+