ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋಕಾಕ್ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸಿದ ಸಿದ್ದರಾಮಯ್ಯ?

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 03 : ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ಆರಂಭಿಸಿದೆ. ಗೋಕಾಕ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಕಟ್ಟಿಹಾಕಲು ಸಿದ್ದರಾಮಯ್ಯ ತಂತ್ರ ರೂಪಿಸಿದ್ದು, ಅಭ್ಯರ್ಥಿ ಅಂತಿಮಗೊಳಿಸಿದ್ದಾರೆ.

2018ರ ಚುನಾವಣೆಯಲ್ಲಿ ಗೋಕಾಕ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಗೆಲುವು ಸಾಧಿಸಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅವರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ. ಈ ಕುರಿತು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ.

ನಾನು ಎಲ್ಲೂ ಹೋಗಿಲ್ಲ, ಕಾಂಗ್ರೆಸ್ ನಲ್ಲೇ ಇದ್ದೇನೆ: ಲಖನ್ ಜಾರಕಿಹೊಳಿನಾನು ಎಲ್ಲೂ ಹೋಗಿಲ್ಲ, ಕಾಂಗ್ರೆಸ್ ನಲ್ಲೇ ಇದ್ದೇನೆ: ಲಖನ್ ಜಾರಕಿಹೊಳಿ

ಕರ್ನಾಟಕ ಕಾಂಗ್ರೆಸ್ ಎಲ್ಲಾ 17 ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಅಭ್ಯರ್ಥಿಗಳು ಯಾರಾಗಬೇಕು? ಎಂಬ ಬಗ್ಗೆ ಪಕ್ಷದಲ್ಲಿಯೇ ಚರ್ಚೆಗಳು ಆರಂಭವಾಗಿವೆ. ಸ್ವತಃ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭ್ಯರ್ಥಿಗಳ ಬಗ್ಗೆ ಆಸಕ್ತಿವಹಿಸಿದ್ದಾರೆ.

ಅತೃಪ್ತಿಯ ಬೆಂಕಿ ಹತ್ತಿದ್ದು ಬೆಳಗಾವಿಯಿಂದ: ಸತೀಶ್ ಜಾರಕಿಹೊಳಿಅತೃಪ್ತಿಯ ಬೆಂಕಿ ಹತ್ತಿದ್ದು ಬೆಳಗಾವಿಯಿಂದ: ಸತೀಶ್ ಜಾರಕಿಹೊಳಿ

ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಿ, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಳ್ಳಲು ಕಾರಣರಾದ ಶಾಸಕರಿಗೆ ಉಪ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲು ಪಕ್ಷ ತಂತ್ರ ರೂಪಿಸುತ್ತಿದೆ. ಇದರ ಭಾಗವಾಗಿಯೇ ಗೋಕಾಕ್ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸಲಾಗಿದೆ.

ಜಾರಕಿಹೊಳಿ ಸಹೋದರರ ಜೊತೆ ಸಿದ್ದರಾಮಯ್ಯ ರಹಸ್ಯ ಸಭೆಜಾರಕಿಹೊಳಿ ಸಹೋದರರ ಜೊತೆ ಸಿದ್ದರಾಮಯ್ಯ ರಹಸ್ಯ ಸಭೆ

ಜಾರಕಿಹೊಳಿ ಕುಟುಂಬದಿಂದ ಮತ್ತೊಬ್ಬರು

ಜಾರಕಿಹೊಳಿ ಕುಟುಂಬದಿಂದ ಮತ್ತೊಬ್ಬರು

ಜಾರಕಿಹೊಳಿ ಕುಟುಂಬದಿಂದ ಮತ್ತೊಬ್ಬರು ರಾಜಕೀಯಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಗೋಕಾಕ್‌ನಲ್ಲಿ ಉಪ ಚುನಾವಣೆ ನಡೆದರೆ ಲಖನ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ. ಸಹೋದರ ರಮೇಶ್ ಜಾರಕಿಹೊಳಿ ಎದುರಾಳಿಯಾಗಿ ಲಖನ್ ಕಣಕ್ಕಿಳಿಯಲಿದ್ದಾರೆ.

ಸಿದ್ದರಾಮಯ್ಯ ಮಾತುಕತೆ

ಸಿದ್ದರಾಮಯ್ಯ ಮಾತುಕತೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೋಕಾಕ್ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ರಮೇಶ್ ಜಾರಕಿಹೊಳಿಗೆ ಸೋಲುಣಿಸಬೇಕು ಎಂಬುದು ಅವರ ಹಠವಾಗಿದೆ. ಉಪ ಚುನಾವಣೆಯಲ್ಲಿ ಕಣಕ್ಕಿಳಿಯುವ ಕುರಿತು ಲಖನ್ ಜಾರಹೊಳಿ ಜೊತೆ ಮಾತುಕತೆ ನಡೆಸಿದ್ದಾರೆ.

ಬಿಜೆಪಿ ಸೇರುವ ವದಂತಿ ಹಬ್ಬಿತ್ತು

ಬಿಜೆಪಿ ಸೇರುವ ವದಂತಿ ಹಬ್ಬಿತ್ತು

2018ರ ಚುನಾವಣೆ ಸಮಯದಲ್ಲಿಯೇ ಲಖನ್ ಜಾರಕಿಹೊಳಿ ಚುನಾವಣಾ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಬಳಿಕ ಅವರು ನಾನು ಕಾಂಗ್ರೆಸ್‌ನಲ್ಲಿಯೇ ಇರುವೆ ಎಂದು ಸ್ಪಷ್ಟನೆ ನೀಡಿದ್ದರು.

ಸತೀಶ್ ಜಾರಕಿಹೊಳಿ ಬೆಂಬಲ

ಸತೀಶ್ ಜಾರಕಿಹೊಳಿ ಬೆಂಬಲ

ಲಖನ್ ಜಾರಕಿಹೊಳಿ ಬೆಂಬಲಕ್ಕೆ ಸತೀಶ್ ಜಾರಕಿಹೊಳಿ ನಿಂತಿದ್ದಾರೆ. ಗೋಕಾಕ್‌ನಲ್ಲಿ ಉಪ ಚುನಾವಣೆ ನಡೆದರೆ ಲಖನ್ ಕಣಕ್ಕಿಳಿಯಬೇಕು ಎಂದು ಸಿದ್ದರಾಮಯ್ಯ ಬಳಿ ಅವರು ಹೇಳಿದ್ದಾರೆ. ಆದ್ದರಿಂದ, ಗೋಕಾಕ್ ಉಪ ಚುನಾವಣೆ ಕಣ ಕುತೂಹಲಕ್ಕೆ ಕಾರಣವಾಗಿದೆ.

English summary
Karnataka Congress may file Lakhan Jarkiholi against Ramesh Jarkiholi at Gokak in by election. Former CM Siddaramaiah discuss with Lakhan Jarkiholi about contesting against brother.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X