ಧರ್ಮಸ್ಥಳ : ವಸ್ತು ಪ್ರದರ್ಶನದ ಚಿತ್ರಗಳು

ಮಂಗಳೂರು, ನ. 19 : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪುಣ್ಯ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ವಿಶೇಷ ಪೂಜೆ ಪುನಸ್ಕಾರದ ಜತೆಗೆ ಸರ್ವ ಧರ್ಮ ಸಮ್ಮೇಳನ, ಲಕ್ಷದೀಪೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಮುಖ ಆಕರ್ಷಣೆಯಾಗಿದೆ. ಲಕ್ಷದೀಪೋತ್ಸವ ಸಂದರ್ಭದಲ್ಲಿ ನಡೆದ ಕಾರ್ಯಕ್ರಮಗಳ ಸಚಿತ್ರ ವರದಿ

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ,ಬಿ, ಇಬ್ರಾಹಿಂ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಎಸ್‌ಡಿಎಮ್ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್. ಪ್ರಭಾಕರ್ ಮುಂತಾದವರು ಉಪಸ್ಥಿತರಿದ್ದರು.

ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ವಸ್ತು ಪ್ರದರ್ಶನವೂ ಮನೋರಂಜನೆಯೊಂದಿಗೆ ಜ್ಞಾನಾಭಿವೃದ್ಧಿಯ ವೇಗವರ್ಧಕವಾಗಿದೆ ಎಂದು ಹೇಳಿದರು. ಇಂದು ಜ್ಞಾನ ಸಂಪಾದನೆಗೆ ಹಲವಾರು ಅವಕಾಶಗಳಿವೆ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. [ಲಕ್ಷದೀಪೋತ್ಸವ ಪ್ರಯುಕ್ತ ಪಾದಯಾತ್ರೆ]

annual event

ಹಿಂದಿನ ಕಾಲದ ಶ್ರೇಣೀಕೃತ ಸಮಾಜದಲ್ಲಿ ಜ್ಞಾನವನ್ನು ಗುಪ್ತವಾಗಿ ಬಚ್ಚಿಟ್ಟುಕೊಳ್ಳುವ ಸಂಪ್ರದಾಯವಿತ್ತು. ಆದರೆ, ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷಿಪ್ರ ಬೆಳವಣಿಗೆಯಿಂದಾಗಿ ಇಂದು ಜಾಗತೀಕರಣದ ನೆಲೆಯಲ್ಲಿ ಕ್ರಾಂತಿಕಾರಿ ಪರಿವರ್ತನೆಯಾಗಿ ಜನರಿಗೆ ಹಲವಾರು ಅವಕಾಶ ದೊರಕಿವೆ ಎಂದರು.

ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ ಮೊದಲಾದ ಕ್ಷೇತ್ರಗಳಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಿದೆ ಎಂದು ಹೇಳಿದ ಜಿಲ್ಲಾಧಿಕಾರಿ ಅವರು ಹೆಗ್ಗಡೆಯವರನ್ನು ಅಭಿನಂದಿಸಿದರು.

ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಧರ್ಮಸ್ಥದಲ್ಲಿ ಅನ್ನದಾನ, ವಿದ್ಯಾದಾನ, ಔಷಧಿದಾನ ಮತ್ತು ಅಭಯದಾನ ನಿತ್ಯೋತ್ಸವವಾಗಿದ್ದು ದಾನ ಧರ್ಮದಲ್ಲಿಯೂ ಶಿಸ್ತು ಮತ್ತು ಸಮರ್ಪಕ ವ್ಯವಸ್ಥೆಯನ್ನು ಅಳವಡಿಸಿ ಕ್ಷೇತ್ರದ ಸಂಪ್ರದಾಯವನ್ನು ಮುಂದುವರಿಸಲಾಗುತ್ತಿದೆ ಎಂದರು.

ಗ್ರಾಮೀಣಾಭಿವೃದ್ಧಿ ಯೋಜನೆಯ ಮೂಲಕ ಸರ್ಕಾರಿ ಕಾರ್ಯಕ್ರಮಗಳನ್ನು ಜನ ಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸುವಲ್ಲಿ ಸಕ್ರಿಯ ಸಹಕಾರ ನೀಡಲಾಗುತ್ತಿದೆ. ಹಲವು ಮಂದಿಗೆ ಇಂದು ಕೂಡಾ ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಸಮರ್ಪಕ ಮಾಹಿತಿಯ ಕೊರತೆಯಿದೆ. ಇದನ್ನು ವಸ್ತು ಪ್ರದರ್ಶನದ ಮೂಲಕ ನಿವಾರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

AB Ibrahim

ವಸ್ತು ಪ್ರದರ್ಶನದಲ್ಲಿ ಕೃಷಿ, ವಾಣಿಜ್ಯ, ಬ್ಯಾಂಕಿಂಗ್, ಶಿಕ್ಷಣ, ಉದ್ಯೋಗ ಮೊದಲಾದ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ 194 ಮಳಿಗೆಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+