ಸರ್ಕಾರಿ ಬಸ್ ಚಾಲಕರಿಗೆ ಬಹುಮಾನ ಘೋಷಿಸಿದ ಸಚಿವರು

ಬೆಂಗಳೂರು, ಮೇ 01 : ಸಾರಿಗೆ ಸಚಿವ ಲಕ್ಷ್ಮಣ ಸವದಿ ಲಾಕ್ ಡೌನ್ ಸಂಕಷ್ಟದ ಕಾಲದಲ್ಲಿಯೂ ಸಾರಿಗೆ ಇಲಾಖೆ ಸಿಬ್ಬಂದಿಗಳಿಗೆ ಬಹುಮಾನ ಘೋಷಣೆ ಮಾಡಿದ್ದಾರೆ. ಲಾಕ್ ಡೌನ್ ಬಳಿಕ ಬಸ್‌ಗಳ ಸಂಚಾರ ರದ್ದುಗೊಂಡಿದ್ದು, ನಾಲ್ಕು ಸಾರಿಗೆ ನಿಗಮಗಳಿಗೆ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ.

Recommended Video

      RSS ಕಾರ್ಯಕರ್ತನಾಗಿರೋ ಮುಸ್ಲಿಂ ಯುವಕ ಅಸ್ಸಾಂ ನಲ್ಲಿ ಎಂಥಾ ಕೆಲಸ ಮಾಡ್ತಿದ್ದಾನೆ?

      ಶುಕ್ರವಾರ ಸಾರಿಗೆಇಲಾಖೆ ಅಧಿಕಾರಿಗಳ ಜೊತೆ ಉಪ ಮುಖ್ಯಮಂತ್ರಿಯೂ ಆಗಿರುವ ಲಕ್ಷ್ಮಣ ಸವದಿ ಸಭೆ ನಡೆಸಿದರು. 41 ವಿಭಾಗೀಯ ನಿಯಂತ್ರಾಧಿಕಾರಿಗಳು ಸಹ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.

      "4 ಸಾರಿಗೆ ನಿಗಮಗಳಲ್ಲಿ ಪ್ರತಿ ತಿಂಗಳು ಅತಿ ಹೆಚ್ಚು ಇಂಧನ ಕ್ಷಮತೆ ತೋರುವ ಒಬ್ಬ ಚಾಲಕನಿಗೆ 10 ಗ್ರಾಂ ಚಿನ್ನದ ಪದಕ ನೀಡುವುದಾಗಿ" ಸಭೆಯಲ್ಲಿ ಸಚಿವರು ಘೋಷಣೆ ಮಾಡಿದರು.

      Lakshman Savadi Announces Gold Coin Award For Driver

      "ಲಾಕ್ ಡೌನ್‌ನಿಂದಾಗಿ ಸಾರಿಗೆ ಸಂಸ್ಥೆಗಳು ಇಂದು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿವೆ. ನಾವೆಲ್ಲರೂ ಒಂದು ತಂಡವಾಗಿ ಮುಂದಿನ ದಿನಗಳಲ್ಲಿ ಕರ್ತವ್ಯ ನಿರ್ವಹಿಸಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬೇಕು" ಎಂದು ಸಚಿವರು ಕರೆ ನೀಡಿದರು.

      "ಮೇ 3ರಂದು ಲಾಕ್ ಡೌನ್ ಅಂತ್ಯಗೊಳ್ಳಲಿದೆ. ಮುಂದೆ ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ನಿಗಮದ ಬಸ್‌ಗಳನ್ನು ಗುತ್ತಿಗೆ ನೀಡಲು ಇಂದು ನಡೆದ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ" ಎಂದು ಲಕ್ಷ್ಮಣ ಸವದಿ ಹೇಳಿದರು.

      ಪ್ರತಿಯೊಬ್ಬ ವಿಭಾಗೀಯ ನಿಯಂತ್ರಾಣಾಧಿಕಾರಿಗಳನ್ನು ಸಂಪರ್ಕಿಸಿ ಹಸಿರು, ಕೆಂಪು ವಲಯಗಳಲ್ಲಿ ಯಾವ ರೀತಿ ಬಸ್ ಕಾರ್ಯಾಚರಣೆ ಮಾಡಬೇಕು ಎಂಬುದರ ಬಗ್ಗೆ ಲಕ್ಷ್ಮಣ ಸವದಿ ಚರ್ಚೆ ನಡೆಸಿದರು.

      ಕಾರ್ಮಿಕರ ಸ್ಥಳಾಂತರದ ವೇಳೆ ಸುರಕ್ಷತೆ ಬಗ್ಗೆ ಗಮನ ಹರಿಸುವುದು. ಬಸ್ ನಿಲ್ದಾಣಗಳನ್ನು ಸ್ವಚ್ಛ ಮಾಡುವುದು, ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸೇರಿದಂತೆ ವಿವಿಧ ಸೂಚನೆಗಳನ್ನು ಸಚಿವರು ನೀಡಿದರು.

      ಲಾಕ್ ಡೌನ್ ಘೋಷಣೆ ಬಳಿಕ ಬಸ್‌ಗಳ ಸಂಚಾರ ಸಂಪೂರ್ಣವಾಗಿ ರದ್ದಾಗಿದೆ. ಏಪ್ರಿಲ್ 20ರ ತನಕ ನಾಲ್ಕು ನಿಗಮಗಳಿಗೆ 816.23 ಕೋಟಿ ನಷ್ಟವಾಗಿದೆ. ಲಾಕ್ ಡೌನ್ ಇನ್ನೂ 2 ವಾರಗಳ ಕಾಲ ವಿಸ್ತರಣೆಯಾಗಿದ್ದು, ಇನ್ನಷ್ಟು ನಷ್ಟವಾಗಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+