ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟೋಲ್ ಗಳಲ್ಲಿ ಸರ್ಕಾರಿ ಸಾರಿಗೆಗೆ ವಿನಾಯಿತಿ ನೀಡಲು ಸವದಿ ಮನವಿ

By ಶಿವಾನಂದ
|
Google Oneindia Kannada News

ಬೆಂಗಳೂರು, ಏಪ್ರಿಲ್ 28: ಲಾಕ್ ಡೌನ್ ಪರಿಣಾಮವಾಗಿ ಕರ್ನಾಟಕ ಸರ್ಕಾರದ ಸಾರಿಗೆ ಕ್ಷೇತ್ರಕ್ಕೆ ತೀವ್ರ ನಷ್ಟವಾಗಿರುವ ಹಿನ್ನೆಲೆಯಲ್ಲಿ ಮುಂದಿನ ಆರು ತಿಂಗಳುಗಳ ಕಾಲ ಸಾರಿಗೆ ಸಂಸ್ಥೆಯ ಕೆಎಸ್ ಆರ್ ಟಿಸಿ ಬಸ್ಸುಗಳಿಗೆ ಟೋಲ್ ಗಳಲ್ಲಿ ವಿನಾಯಿತಿ ನೀಡಬೇಕೆಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಮನವಿ ಮಾಡಿದರು.

ನಿತಿನ್ ಗಡ್ಕರಿ ಅವರೊಂದಿಗಿನ ವಿಡಿಯೋ ಸಂವಾದದಲ್ಲಿ ಇಂದು ಬೆಳಿಗ್ಗೆ ಭಾಗವಹಿಸಿದ್ದ ಸವದಿ, ಲಾಕ್ ಡೌನ್ ನಿಂದಾಗಿ ಕರ್ನಾಟಕದ ಸಾರಿಗೆ ವಲಯದ ಮೇಲೆ ಆದ ಪರಿಣಾಮವನ್ನು ವಿವರಿಸಿದರು. ಒಂದು ತಿಂಗಳಿಗಿಂತಲೂ ಹೆಚ್ಚುಕಾಲ ಲಾಕ್ ಡೌನ್ ಆಗಿರುವುದರಿಂದ ಸರಕಾರಿ ಸಾರಿಗೆಗಳಾದ ಬಿಎಂಟಿಸಿ, ಕೆಎಸ್ ಆರ್ ಟಿಸಿ ವಾಯವ್ಯ ಸಾರಿಗೆ, ಈಶಾನ್ಯ ಸಾರಿಗೆ ನಷ್ಟದಲ್ಲಿದೆ. ಸಂಸ್ಥೆಗಳ ಆದಾಯ ಸಂಪೂರ್ಣ ನಿಂತಿರುವುದರಿಂದ ಸಿಬ್ಬಂದಿ ವೇತನ ನೀಡುವುದಕ್ಕೂ ಹರಸಾಹಸ ಪಡುವಂತಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ಈ ಸಂಸ್ಥೆಗಳ ನೆರವಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಸಾರಿಗೆ ಸಂಸ್ಥೆ ನೌಕರರಿಗೆ ಸಿಹಿ ಸುದ್ದಿ ನೀಡಿದ ಲಕ್ಷ್ಮಣ ಸವದಿಸಾರಿಗೆ ಸಂಸ್ಥೆ ನೌಕರರಿಗೆ ಸಿಹಿ ಸುದ್ದಿ ನೀಡಿದ ಲಕ್ಷ್ಮಣ ಸವದಿ

ಸರ್ಕಾರಿ ಸಾರಿಗೆ ಮಾತ್ರವಲ್ಲದೆ ಖಾಸಗಿ ಸಾರಿಗೆ ವಲಯದ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಖಾಸಗಿ ಚಾಲಕರು ಮತ್ತು ಅವರ ಪರಿಚಾರಕರಿಗೆ (ಕ್ಲೀನರುಗಳಿಗೆ) ಇನ್ಸುರೆನ್ಸ್ ಯೋಜನೆ ಪ್ರಾರಂಭಿಸುವುದು ಅಗತ್ಯ ಎಂದು ಸವದಿ ಪ್ರತಿಪಾದಿಸಿದರು. ಸಾರಿಗೆ ಸಂಸ್ಥೆಗಳಿಗೆ ಉಪಯೋಗಿಸಲಾಗುವ ಡೀಸೆಲ್ ಮೇಲಿನ ಕೇಂದ್ರ ಸರ್ಕಾರದ ತೆರಿಗೆಗಳಿಗೆ ಸಂಪೂರ್ಣ ವಿನಾಯಿತಿ ನೀಡಬೇಕೆಂದು ಮನವಿ ಮಾಡಿದರು.

Lakshman Savadi Requested For Toll Excemption For Government Transport

ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾ ತಡೆಗಟ್ಟುವಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿ, ಮೊಬೈಲ್ ಕ್ಲಿನಿಕ್ ಗಳನ್ನು ಪ್ರಾರಂಭಿಸುವುದಕ್ಕೆ ಅಗತ್ಯ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸಬೇಕೆಂದು ವಿನಂತಿಸಿಕೊಂಡರು. ಸವದಿ ಅವರು ಮುಂದಿಟ್ಟ ಈ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಪರಿಶೀಲಿಸುವುದಾಗಿ ಗಡ್ಕರಿ ಭರವಸೆ ನೀಡಿದರು.

ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ಸಾರಿಗೆ ಇಲಾಖೆಯ ಆಯುಕ್ತರಾದ ಶಿವಕುಮಾರ್, ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ, ಸಿ. ಶಿಕಾ, ಲೋಕೋಪಯೋಗಿ ಇಲಾಖೆಯ ಬಿ. ಗುರುಪ್ರಸಾದ್ ಮುಂತಾದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

English summary
Karnataka transport minister Lakshman Savadi requested for toll excemption for government transport in video conference with nithin gadkari today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X