Rain alert: ಕರಾವಳಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ; ಮೀನುಗಾರರು ಸಮುದ್ರಕ್ಕಿಳಿಯದಂತೆ ಮಹತ್ವದ ಸೂಚನೆ

ಬೆಂಗಳೂರು, ಜುಲೈ 17: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಿಂದ ರಾಜ್ಯದ ಪ್ರಮುಖ ಜಲಾಶಯಗಳು ಭರ್ತಿಯಾಗಿದೆ. ಕರಾವಳಿಯಲ್ಲಿ ಎಡೆಬಿಡದೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸೂಚಿಸಿದ್ದಾರೆ. ಅಲ್ಲದೆ, ಉಡುಪಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ದೃಷ್ಟಿಯಿಂದ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಕಳೆದ ಮಂಗಳವಾರ (ಜುಲೈ 15) ಮೀನುಗಾರರು ನಾಪತ್ತೆಯಾದ ಕ್ಷಣದಿಂದಲೂ ಜಿಲ್ಲಾಡಳಿತದೊಂದಿಗೆ ಸತತ ಸಂಪರ್ಕದಲ್ಲಿದ್ದು, ಕ್ಷಣ ಕ್ಷಣಕ್ಕೂ ಮಾಹಿತಿ ಪಡೆಯುತ್ತಿದ್ದೆ. ಇಂದು ಮೀನುಗಾರರು ಜೀವಂತವಾಗಿ ವಾಪಸ್ ಬರದ ವಿಷಯ ಕೇಳಿ ತೀವ್ರ ದುಃಖವಾಯಿತು. ಮೃತರಾದ ರೋಹಿತ್ ಖಾರ್ವಿ, ಸುರೇಶ್ ಖಾರ್ವಿ ಹಾಗೂ ಜಗನ್ನಾಥ್ ಖಾರ್ವಿ ಅವರ ಕುಟುಂಬ ವರ್ಗದವರನ್ನು ಶೀಘ್ರವೇ ಭೇಟಿಯಾಗಿ ಸಾಂತ್ವನ ಹೇಳುವೆ ಎಂದು ಸಚಿವರು ಹೇಳಿದ್ದಾರೆ.

Lakshmi Hebbalkar advises fishermen not to venture into the sea due to rain

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಮೀನುಗಾರಿಕೆಗೆ ತೆರಳಿ ದೋಣಿ ಮುಗುಚಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಂತಾಪ ಸೂಚಿಸಿದ್ದಾರೆ. ಶೀಘ್ರದಲ್ಲಿ ಉಡುಪಿ ಜಿಲ್ಲೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ತುಂಬುವ ಕೆಲಸ ಮಾಡಲಿದ್ದೇನೆ. ಜೊತೆಗೆ ಸರ್ಕಾರದಿಂದ ನಿಯಮಾನುಸಾರ ಪರಿಹಾರ ಒದಗಿಸುವ ಪ್ರಾಮಾಣಿಕ ಕೆಲಸ ಮಾಡಲಿದ್ದೇ‌ನೆ ಎಂದು ಹೇಳಿದರು.

ಇನ್ನೂ ದುಃಖದ ಈ ಸಮಯದಲ್ಲಿ ಮೃತರ ಕುಟುಂಬಗಳ ದುಃಖದಲ್ಲಿ ನಾನೂ ಭಾಗಿಯಾದ್ದೇನೆ. ಅಗಲಿದ ಆತ್ಮಗಳಿಗೆ ಭಗವಂತ ಶಾಂತಿ‌ ನೀಡಲಿ ಹಾಗೂ ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿ‌ ದಯಪಾಲಿಸಲಿ ಪ್ರಾರ್ಥಿಸುತ್ತೇನೆ ಹಾಗೂ ಕುಟುಂಬಸ್ಥರು ಯಾವುದೇ ಕಾರಣಕ್ಕೆ ಧೈರ್ಯವನ್ನು ಕಳೆದುಕೊಳ್ಳಬೇಡಿ ಎಂದು ವಿನಂತಿಸುತ್ತೇನೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ. ‌

ಬಿಜೆಪಿಯವರು ಮಾತನಾಡುವುದು ಒಂದು, ಮಾಡುವುದು ಮತ್ತೊಂದು. ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಕಾಪಿ ಹೊಡೆದು ಪಾಸಾಗಿರುವ ಸ್ಟೂಡೆಂಟ್ಸ್ . ಮುಂಬರುವ ಬಿಹಾರ ಚುನಾವಣೆಗೆ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಘೋಷಿಸಿರುವ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಹಿಂದೆ ನರೇಗಾ, ಆಧಾರ್ ಕಾರ್ಡ್ ಜಾರಿಗೆ ತರುವುದನ್ನು ವಿರೋಧ ಮಾಡಿದ್ದರು. ದೇಶದಲ್ಲಿ ಉತ್ತಮ ಯೋಜನೆಗಳನ್ನು ವಿರೋಧಿಸಿದರು. ಆದರೀಗ ನಮ್ಮ ಯೋಜನೆಗಳನ್ನೇ ಅನುಸರಿಸುತ್ತಿದ್ದಾರೆ ಎಂದರು.

ಮಹಿಳಾ ಸಬಲೀಕರಣಕ್ಕೆ ಗ್ಯಾರಂಟಿ ಯೋಜನೆಗಳನ್ನು ಮಾಡಿದ್ದೆವು. ಇದೀಗ ಕರ್ನಾಟಕದಲ್ಲಿ ಯಶಸ್ವಿಯಾಗಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದನ್ನು ನೋಡಿದ ಬಿಜೆಪಿಗರು, ಮಹಾರಾಷ್ಟ್ರ, ದೆಹಲಿಯಲ್ಲಿ ನಮ್ಮ ಯೋಜನೆಗಳನ್ನು ಘೋಷಣೆ ಮಾಡಿ ಚುನಾವಣೆ ಗೆದ್ದರು. ಕೇಂದ್ರದ ಬಿಜೆಪಿ ನಾಯಕರು ಕರ್ನಾಟಕಕ್ಕೆ ಬಂದಾಗಲೆಲ್ಲಾ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುತ್ತಾರೆ. ಆದರೆ, ಕರ್ನಾಟಕ ಮಾಡೆಲ್ ಇಟ್ಟುಕೊಂಡು ನರೇಂದ್ರ ಮೋದಿ ರಾಜಕಾರಣ ಮಾಡುತ್ತಿದ್ದಾರೆ. ಕರ್ನಾಟಕದ ಯೋಜನೆಗಳನ್ನ ಹಾಗೂ ಮಾಡೆಲ್ ಅನ್ನು ಟೀಕೆ ಮಾಡುವ ನೈತಿಕತೆ ಇದೆಯೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+