lakshmi Hebbalkar Car Accident: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಕಾರಣ ರಿವೀಲ್!

ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಮಂಗಳವಾರ ಬೆಳಿಗ್ಗೆ ಭೀಕರ ಅಪಘಾತಕ್ಕೆ ಒಳಗಾಗಿದೆ. ಈ ಅಪಘಾತದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಗಂಭೀರ ಗಾಯಗಳು ಆಗಿವೆ. ಇದೀಗ ಕೊನೆಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತಕ್ಕೆ ಕಾರಣ ಏನು ಎನ್ನುವುದು ರಿವೀಲ್ ಆಗಿದೆ. ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನು ಮೂಳೆಯ ಭಾಗದಲ್ಲಿ ಗಂಭೀರ ಪೆಟ್ಟಾಗಿದೆ.

ಅಲ್ಲದೆ ಅವರ ಸಹೋದರನಿಗೂ ಪೆಟ್ಟಾಗಿದೆ. ಆದರೆ ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಇದೀಗ ಕೊನೆಗೂ ಈ ಅಪಘಾತಕ್ಕೆ ಕಾರಣ ಏನು ಎನ್ನುವುದು ರಿವೀಲ್ ಆಗಿದೆ. ಕಾರು ಅಪಘಾತಕ್ಕೆ ಕಾರಣವೇನು ಎನ್ನುವ ವಿವರ ಇಲ್ಲಿದೆ.

lakshmi Hebbalkar Car Accident Reason Revealed

ಸಂಕ್ರಾಂತಿ ಹಬ್ಬದ ದಿನವೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತಕ್ಕೆ ಒಳಗಾಗಿದೆ. ಇದೀಗ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಮಂಗಳವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ.

ಇದೀಗ ಕೊನೆಗೂ ಅವರ ಕಾರು ಅಪಘಾತಕ್ಕೆ ಕಾರಣ ಏನು ಎನ್ನುವುದು ರಿವೀಲ್ ಆಗಿದೆ. ಕಾರು ಅಪಘಾತ ಯಾವ ರೀತಿ ಸಂಭವಿಸಿತ್ತು ಹಾಗೂ ಇದಕ್ಕೆ ಏನು ಕಾರಣ ಅನ್ನೋದನ್ನ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹೋದರ ಹಾಗೂ ವಿಧಾನ ಪರಿಷತ್‌ನ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಅವರು ವಿವರಿಸಿದ್ದಾರೆ.

lakshmi Hebbalkar Car Accident Reason Revealed

ಇನ್ನು ಕಾರು ಅಪಘಾತ ಸಂಭವಿಸುವಾಗ ಕಾರ್‌ನಲ್ಲಿ ಚನ್ನರಾಜ್ ಅವರು ಸಹ ಇದ್ದರು. ಅಪಘಾತದಲ್ಲಿ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ಅವರು ಬೆಳಿಗ್ಗೆ ಪ್ರಾಥಮಿಕ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಟಾರ್ಜ್‌ ಆಗಿದ್ದಾರೆ. ಇದೀಗ ಅಪಘಾತದ ಹಿನ್ನೆಲೆಯನ್ನು ವಿವರಿಸಿದ್ದಾರೆ. ನಮ್ಮಿಂದಲೇ ತಪ್ಪಾಗಿದೆ. ಈ ರೀತಿ ಆಗಬಾರದಿತ್ತು. ನಾವು ಸ್ವಲ್ಪ ಎಚ್ಚರಿಕೆ ವಹಿಸಿದ್ದರೆ ಅಪಘಾತವನ್ನು ತಪ್ಪಿಸಬಹುದಿತ್ತು ಎಂದು ಹೇಳಿದ್ದಾರೆ. ಅಲ್ಲದೆ ಸಣ್ಣ ನಿರ್ಲಕ್ಷ್ಯದಿಂದ ಈ ರೀತಿ ಆಗಿದೆ ಎಂದಿದ್ದಾರೆ.

ನಾಯಿ ಅಡ್ಡ ಬಂದು ಸಮಸ್ಯೆ: ಇನ್ನು ಅಪಘಾತ ಸಂಭವಿಸಿದ್ದಕ್ಕೆ ಮುಖ್ಯ ಕಾರಣ ನಾಯಿ ಅಡ್ಡ ಬಂದಿದ್ದೇ ಎಂದು ಹೇಳಲಾಗಿದೆ. ಕಾರು ಚಲಾಯಿಸುವಾಗ ನಾಯಿ ಅಡ್ಡ ಬಂದಿದ್ದು ನಾಯಿಗೆ ಗುದ್ದುವುದನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ.

ಇದರಲ್ಲಿ ಕಾರು ಚಾಲಕನದ್ದು ಯಾವುದೇ ತಪ್ಪಿಲ್ಲ ಅಂತಲೂ ಅವರು ಹೇಳಿದ್ದಾರೆ. ಈ ಸಮಯದಲ್ಲಿ ನಮ್ಮೊಂದಿಗೆ ಯಾವುದೇ ಬೆಂಗಾವಲು ‌ವಾಹನ ಬರುತ್ತಿರಲಿಲ್ಲ. ನಾವು ತಡವಾಗಿ ಬಂದಿದ್ದರಿಂದ ಅವರಿಗೆ ಮಾಹಿತಿ ಇರಲಿಲ್ಲ ಎಂದಿದ್ದಾರೆ.

ಬೆನ್ನು ಮೂಳೆಗೆ ಗಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಬೆಳಿಗ್ಗೆ ಅಪಘಾತಕ್ಕೆ ಗುರಿಯಾಗಿತ್ತು. ಸಂಕ್ರಾಂತಿ ಹಬ್ಬದ ದಿನ (ಜನವರಿ 14)ರಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಹಾಗೂ ಅವರ ಸಹೋದರಿನಿಗೆ ಆಘಾತ ಎದುರಾಗಿತ್ತು. ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನು ಮೂಳೆಗೆ ಬಲವಾದ ಪೆಟ್ಟು ಬಿದ್ದಿದೆ ಅಂತ ಹೇಳಲಾಗಿದೆ.

ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಿಗ್ಗೆ ಆರು ಗಂಟೆಗೆ ಅಪಘಾತ ಸಂಭವಿಸಿದ್ದು. ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆನ್ನುಮೂಳೆಯ ಎಲ್1 ಎಲ್4 ಮೂಳೆ‌ ಭಾಗದಲ್ಲಿ ಬಲವಾದ ಪೆಟ್ಟಾಗಿರುವುದು ವರದಿಯಾಗಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+