ಮೃತ ರೈತನ ಕುಟುಂಬಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಂತ್ವನ; ಲಕ್ಷ್ಮೀತಾಯಿ ಫೌಂಡೇಷನ್ ನಿಂದ ನೆರವು
ಬೆಳಗಾವಿ, ಆಗಸ್ಟ್ 07: ಬೆಳಗಾವಿ ತಾಲೂಕಿನ ಬಿಜಗರಣಿ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೆ ಮೃತಪಟ್ಟ ಬಿಜಗರಣಿ ಗ್ರಾಮದ ಅಮಿತ್ ದೇಸಾಯಿ ಹಾಗೂ ಲತಾ ದಂಪತಿ ಕುಟುಂಬಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಂತ್ವನ ಹೇಳಿದ್ದಾರೆ.
ಬಿಜಗರಣಿ ಗ್ರಾಮದ ಶ್ರೀ ಅಮಿತ್ ದೇಸಾಯಿ ಹಾಗೂ ಲತಾ ದೇಸಾಯಿ ಎಂಬ ದಂಪತಿಗಳು ಎಂದಿನಂತೆ ತಮ್ಮ ಹೊಲಗದ್ದೆಯ ಕೆಲಸದಲ್ಲಿ ನಿರತರಾದ ಸಮಯದಲ್ಲಿ ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
— Laxmi Hebbalkar (@laxmi_hebbalkar) August 7, 2023
ಇವತ್ತು ಮೃತರ ಮನೆಗೆ ತೆರಳಿ ಅಳಿಯ ಮತ್ತು ಮಗಳನ್ನು ಕಳೆದುಕೊಂಡು ಆಘಾತಕ್ಕಗೊಳಗಾಗಿರುವ ತಾಯಿ ಶ್ರೀಮತಿ ಚಂದ್ರಮಾಲಾ ದೇಸಾಯಿ ಅವರನ್ನು… pic.twitter.com/yjvqKUiWGW
ಸೋಮವಾರ ಮೃತದ ಕುಟುಂಬವನ್ನ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್, ಅಳಿಯ ಮತ್ತು ಮಗಳನ್ನು ಕಳೆದುಕೊಂಡು ಆಘಾತಕ್ಕಗೊಳಗಾಗಿರುವ ತಾಯಿ ಚಂದ್ರಮಾಲಾ ದೇಸಾಯಿ ಅವರನ್ನು ಸಂತೈಸಿದರು. ಅಲ್ಲದೇ ಲಕ್ಷ್ಮೀತಾಯಿ ಫೌಂಡೇಷನ್ ವತಿಯಿಂದ ಆರ್ಥಿಕ ಸಹಾಯ ನೀಡಿ, ಸರಕಾರದಿಂದಲೂ ಪರಿಹಾರ ಬಿಡುಗಡೆ ಮಾಡಿಸಿಕೊಡುವುದಾಗಿ ಭರವಸೆಯನ್ನು ನೀಡಿದರು.

ಚಿಕ್ಕ ವಯಸ್ಸಿನಲ್ಲೇ ಪ್ರಾಣ ಕಳೆದುಕೊಂಡ ದಂಪತಿಗಳಿಗೆ ಅನನ್ಯ ಎಂಬ 2 ವರ್ಷದ ಹೆಣ್ಣು ಮಗುವಿದ್ದು, ಆ ಮಗುವಿನ ಮುಖ ನೋಡಿ ನನ್ನ ಕರುಳು ಕಿತ್ತು ಬಂದಂತಿದೆ, ವಿಧಿ ನಿಜಕ್ಕೂ ಕ್ರೂರಿ. ಚಿಕ್ಕ ಮಗು ಅನನ್ಯ ತಂದೆ ತಾಯಿಯನ್ನು ಕಳೆದುಕೊಂಡ ನೋವು ಯಾವ ಮಗುವಿಗೂ ಬಾರದಿರಲಿ ಎಂದು ಹೇಳಿದ್ದಾರೆ. ಇನ್ನೂ ಈ ಸಮಯದಲ್ಲಿ ಗ್ರಾಮದ ಹಿರಿಯರು, ತಹಶಿಲ್ದಾರ, ಉಪ ವಿಭಾಗಾಧಿಕಾರಿ, ಕೆಇಬಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿ, ಆರ್ ಆಯ್ ಅಧಿಕಾರಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಪದ್ಮಶ್ರೀ ಸಾಲು ಮರದ ತಿಮ್ಮಕ್ಕ ಆರೋಗ್ಯ ವಿಚಾರಿಸಿದ ಈಶ್ವರ ಖಂಡ್ರೆ
ಮನೆಯಲ್ಲಿ ಜಾರಿ ಬಿದ್ದು ಬೆನ್ನುಮೂಳೆಗೆ ಪೆಟ್ಟುಬಿದ್ದು ಬೆಂಗಳೂರು ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶತಾಯುಷಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸಾಲು ಮರದ ತಿಮ್ಮಕ್ಕ ಅವರನ್ನಿಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಸಾಕಿರುವ ಮಹಾತಾಯಿಯಾದ ನಿಮಗೆ ಇಡೀ ಕರುನಾಡಿನ ಜನರ ಅಷ್ಟೇ ಅಲ್ಲದೆ ವಿಶ್ವ ಪರಿಸರ ಪ್ರೇಮಿಗಳ ದಿವ್ಯ ಶುಭ ಹಾರೈಕೆ ಇದೆ. ನೀವು ಶೀಘ್ರ ಗುಣಮುಖರಾಗುತ್ತೀರಿ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀವು ಬೇಗ ಗುಣಮುಖರಾಗಿ ವೃಕ್ಷಪ್ರೇಮಿಗಳಿಗೆ ಮಾರ್ಗದರ್ಶನ ಮಾಡಬೇಕು, ಪ್ರೇರಣೆ ನೀಡಬೇಕು ಎಂದು ತಿಳಿಸಿದ್ದಾರೆ ಎಂದು ಈಶ್ವರ ಖಂಡ್ರೆ ಈ ಸಂದರ್ಭದಲ್ಲಿ ತಿಮ್ಮಕ್ಕ ಅವರಿಗೆ ತಿಳಿಸಿದರು. ಆಸ್ಪತ್ರೆಯ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ, ತಿಮ್ಮಕ್ಕ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಈಶ್ವರ ಖಂಡ್ರೆ ಹೆಚ್ಚಿನ ಕಾಳಜಿ ವಹಿಸುವಂತೆ ವೈದ್ಯರಿಗೆ ತಿಳಿಸಿದರು.












Click it and Unblock the Notifications