ರಾಜ್ಯದ ಈ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ: ಜಿಲ್ಲಾಡಳಿತಕ್ಕೆ ಸಚಿವರು ಕೊಟ್ಟ ಸೂಚನೆ ಏನು?

ಬೆಂಗಳೂರು, ಮೇ 26: ಕರ್ನಾಟಕದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆಯು ಸಮುದ್ರ ಮೈಲ್ಮೈನಲ್ಲಿ ವಾಯುಭಾರ ಕುಸಿತವಾಗಿದೆ ಎಂದು ದೃಢಪಡಿಸಿದ್ದು, ಇದರ ಪರಿಣಾಮ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ.

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ‌ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜೊತೆಗೆ, ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಲ್ಲೂ ಮನವಿ ಮಾಡಿದ್ದಾರೆ.

Lakshmi Hebbalkar instructs District Administration To Take Precautionary Measures In Udupi

ಜಿಲ್ಲೆಯಾದ್ಯಂತ ಬಿಟ್ಟುಬಿಡದೆ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ಕೂಡ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳಲ್ಲಿ, ನದಿ - ಸಮುದ್ರ ಪಾತ್ರಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಬೇಕು ಎಂದು ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ. ‌

ಸಮುದ್ರ ಹಾಗೂ ನದಿ ತಟದಲ್ಲಿ ವಾಸಿಸುತ್ತಿರುವ ಜನರನ್ನು ಅಗತ್ಯಬಿದ್ದರೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸಬೇಕು. ಜನರ ಅನುಕೂಲಕ್ಕಾಗಿ ಕಾಳಜಿ ಕೇಂದ್ರಗಳನ್ನು ತೆಗೆಯಬೇಕು, ಏಳು ತಾಲೂಕು ಜನರ ಅನುಕೂಲಕ್ಕಾಗಿ ದಿನ 24 ಗಂಟೆ ಸಹಾಯವಾಣಿ ಕಾರ್ಯನಿರ್ವಹಿಸಬೇಕು ಎಂದು ಸಚಿವೆ ಹೆಬ್ಬಾಳಕರ್ ತಿಳಿಸಿದ್ದಾರೆ. ಸಾರ್ವಜನಿಕರು ಸಹ ಎಚ್ಚರಿಕೆ ವಹಿಸಬೇಕು, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ಚುನಾವಣೆ ಪೂರ್ವ ರಾಜ್ಯದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಮಹಿಳೆಯರು ಹಾಗೂ‌ ಬಡವರ ಮೇಲೆ ಕಾಳಜಿ ಹೊಂದಿರುವ ಪಕ್ಷ ಕಾಂಗ್ರೆಸ್. ಕೊರೋನಾ ಬಂದು ಹೋದ ಮೇಲೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿತು, ರೈತರು ಉಪಯೋಗಿಸುವ ರಸಗೊಬ್ಬರ, ಸಿಲಿಂಡರ್, ದಿನ ಬಳಕೆ ವಸ್ತುಗಳನ್ನು ಕೊಂಡುಕೊಳ್ಳುವುದೇ ದುಸ್ತರವಾಗಿತ್ತು.‌ ಗೃಹಲಕ್ಷ್ಮಿ ಯೋಜನೆಯ ಮೂಲಕ ನೀಡುವ ಎರಡು ಸಾವಿರ ರೂಪಾಯಿ ಎಷ್ಟೋ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+