ನುಡಿದಂತೆ ನಡೆದಿದ್ದೇವೆ, 3 ತಿಂಗಳಲ್ಲಿ ಮೂರನೇ ಗ್ಯಾರಂಟಿ ಜಾರಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ, ಆಗಸ್ಟ್‌ 05: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ 'ಗೃಹಜ್ಯೋತಿ' ಯೋಜನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು.

ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಮೂರು ತಿಂಗಳಲ್ಲಿ ಮೂರನೇ ಗ್ಯಾರಂಟಿ ಜಾರಿಗೆ ತಂದಿದ್ದೇವೆ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುತ್ತಿದೆ ಎಂದರು. ಎಲ್ಲಾ ಭಾಷೆ, ಜಾತಿ ಧರ್ಮದವರಿಗೆ ಈ ಯೋಜನೆ ದಕ್ಕಬೇಕು. ಅಂಬೇಡ್ಕರ್, ಗಾಂಧಿ, ಶಿವಾಜಿ, ಅಕ್ಕಮಹಾದೇವಿ ಅವರಂಥ ಮಹಾಪುರುಷರ ಹಾದಿಯಲ್ಲಿ ಸಾಗಬೇಕು ಎಂದರು.

gruha-jyoti-yojana-in-udupi

ಸರಕಾರ ಬಂದು ಕೇವಲ 3 ತಿಂಗಳೋಳಗೆ ಈ ಗ್ಯಾರಂಟಿ ಗಳು ಜಾರಿಯಾಗುತ್ತಿವೆ. ಕಾಂಗ್ರೆಸ್ ಪಕ್ಷ ಮೊದಲಿಂದಲೂ ನುಡಿದಂತೆ ನಡೆಯುವ ಪಕ್ಷ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತೋ ಆಗೆಲ್ಲ ಕೊಟ್ಟ ಆಶ್ವಾಸನೆಗಳನ್ನು ಈಡೇರಿಸುತ್ತ ಬಂದಿದೆ. ಈಗಾಗಲೇ ಶಕ್ತಿ, ಅನ್ನಭಾಗ್ಯ ಜಾರಿಯಾಗಿದೆ ಎಂದು ಹೇಳಿದರು.

ಈಗ ಗೃಹ ಜ್ಯೋತಿ ಆರಂಭವಾಗಿದೆ. ಆಗಸ್ಟ್ 18 ಅಥವಾ 20 ರಂದು ಗೃಹ ಲಕ್ಷ್ಮೀ ಜಾರಿಯಾಗಲಿದೆ. ಬೆಲೆ ಏರಿಕೆಯಿಂದಾಗಿ ತತ್ತರಿಸಿ ಹೋಗಿದ್ದ ಜನರಿಗೆ ಭರವಸೆ ತುಂಬುವುದಕ್ಕಾಗಿ ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಣೆ ಮಾಡಿತು.ಎಷ್ಟೇ ಕಷ್ಟವಾದರೂ, ವಿರೋಧಿಗಳು ಏನೇ ಹೇಳಿದರೂ ನಾವು ಕೊಟ್ಟ ಮಾತನ್ನು ಈಡೇರಿಸುತ್ತೇವೆ, ನುಡಿದಂತೆ ನಡೆದೇ ನಡೆಯುತ್ತೇವೆ. ಉಡುಪಿ ಜಿಲ್ಲೆಯಲ್ಲಿ 3,15, 692 ಗ್ರಾಹಕರಿದ್ದು, ಈ ಪೈಕಿ 2,69,949 ಗ್ರಾಹಕರು ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದರು.

ಬೊಕ್ಕಸದ ಹಣ ಬಡವರಿಗೆ: ಸಚಿವ ಶರಣ್ ಪ್ರಕಾಶ್ ಪಾಟೀಲ

ಸರ್ಕಾರದ ಬೊಕ್ಕಸದ ಬಹುಪಾಲನ್ನು ಬಡಜನರಿಗೆ ತಲುಪಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಮಾತಿನಂತೆ ನಡೆಯುವ ಕೆಲಸ ಮಾಡುತ್ತಿದ್ದೇವೆ. ಐದು ಗ್ಯಾರಂಟಿಗಳ ಜತೆ ಪಾರದರ್ಶಕ ಆಡಳಿತ ನಾವು ಕೊಡುತ್ತೇವೆ. ಕರ್ನಾಟಕದ ಅಭಿವೃದ್ಧಿಯೇ ನಮ್ಮ ವಾಗ್ದಾನ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ ಹೇಳಿದರು.

ಕಾಂಗ್ರೆ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಬಡ ಜನರಿಗಾಗಿ ಕಾರ್ಯಕ್ರಮಗಳನ್ನು ಜಾರಿ ತರುತ್ತದೆ. ನಾವು ಈಗ ಕೊಟ್ಟಿರುವ 5 ಗ್ಯಾರಂಟಿಗಳನ್ನು ಇಡೀ ದೇಶವೇ ಮೆಚ್ಚಿದೆ. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಇತ್ತೀಚೆಗೆ ನನ್ನ ಭೇಟಿಯಾಗಿ ಕೇಳಿದ ಮೊದಲ ಪ್ರಶ್ನೆ, 5 ಗ್ಯಾರಂಟಿಗಳನ್ನು ಹೇಗೆ ಅನುಷ್ಠಾನಗೊಳಿಸುವಿರಿ ಎಂದು? ಮನಸ್ಸಿದ್ದಲ್ಲಿ ಮಾರ್ಗ ಇರುತ್ತದೆ, ದುಡ್ಡು ಹುಡುಕಿ ಅನುಷ್ಠಾನ ಮಾಡುತ್ತಾರೆ ಎಂದು ಉತ್ತರಿಸಿದೆ. ಅದನ್ನು ಸಿದ್ದರಾಮಯ್ಯ, ಶಿವಕುಮಾರ್, ಜಾರ್ಜ್ ಅವರು ಮಾಡಿ ತೋರಿಸಿದ್ದಾರೆ ಎಂದು ಮಲ್ಲಿಕಾರ್ಜುನ್ ಖರ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜ.11ರಂದು ಪ್ರಜಾಧ್ವನಿ ಯಾತ್ರೆ ನಡೆಸಿ, ಬಡ ಜನರ ಕಣ್ಣೀರು ಒರೆಸಲು ನಾವು ಗ್ಯಾರಂಟಿಗಳನ್ನು ಕೊಟ್ಟೆವು. ನಿಮ್ಮ ಮನೆಯ ದೀಪ ಬೆಳೆಗಿಸುವ ಮೂಲಕ ಜನರ ಜೀವನ ಬೆಳಗಲು ಮುಂದಾಗಿದ್ದೇವೆ. ಪ್ರಿಯಾಂಕಾ ಗಾಂಧಿಯವರು ಪ್ರತಿ ಮನೆಯೊಡತಿಗೆ 2000ರೂ. ನೀಡುವ ಗೃಹ ಲಕ್ಷ್ಮಿ ಗ್ಯಾರಂಟಿ ನೀಡಿದರು. ಈ ಎರಡು ಯೋಜನೆಗಳ ಚೆಕ್‌ ಮೇಲೆ ನಾನು ಮತ್ತು ಮುಖ್ಯಮಂತ್ರಿ ಸಹಿ ಮಾಡಿದ್ದೆವು. ಅದರಂತೆ ಈಗ ನಡೆದುಕೊಳ್ಳುತ್ತಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+