Lakshmi Hebbalkar Profile: ಮೊದಲ ಬಾರಿಗೆ ಸಚಿವೆ, ಬೆಳಗಾವಿ ಭಾಗದ ಪ್ರಭಾವೀ ಮಹಿಳಾ ರಾಜಕಾರಣಿ
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾಂಗ್ರೆಸ್ ಮಹಿಳಾ ಶಾಸಕಿಯರಲ್ಲಿ ಪ್ರಮುಖರು. ಅವರಿಗೆ 2023ರ ಸಿದ್ದರಾಮಯ್ಯನವರ ಸಚಿವ ಸಂಪುಟದಲ್ಲಿ ಮೊದಲ ಬಾರಿಗೆ ಈ ಇಲಾಖೆಯ ಸಚಿವರಾಗಿ ಆಯ್ಕೆ ಆಗಿದ್ದಾರೆ.
ಕೇವಲ ಕಾಂಗ್ರೆಸ್‌ನಲ್ಲಿ ಮಾತ್ರವಲ್ಲದೇ ಬೆಳಗಾವಿ ಭಾಗದಲ್ಲೂ ಸಹ ಮಹಿಳಾ ನಾಯಕಿಯರ ಪೈಕಿ ಹೆಚ್ಚು ವರ್ಚಸ್ಸು ಹೊಂದಿದ್ದಾರೆ. ಕಾಲೇಜು ದಿನಗಳಿಂದ ಅವರು ನಾಯಕತ್ವ ಗುಣ ಅಳವಡಿಸಿಕೊಂಡವರು. ಇವರ ರಾಜಕೀಯ ಜೀವನದ ಪರಿಚಯ, ಪಕ್ಷ ಸಂಘಟನೆಯಲ್ಲಿನ ಅವರ ಒಲವು ಇನ್ನಿತರ ಮಾಹಿತಿ ಇಲ್ಲಿವೆ.

ಲಕ್ಷ್ಮೀ ಹೆಬ್ಬಾಳ್ಕರ್ ಆರಂಭಿಕ ಜೀವನ
ಬೆಳಗಾವಿಯಲ್ಲಿ 1975ರಲ್ಲಿ ಲಿಂಗಾಯತ ಸಮುದಾಯದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ಸ್ವಂತ ಊರಲ್ಲಿ ಮುಗಿಸಿದ ಅವರು, ಮೈಸೂರು ವಿಶ್ವವಿದ್ಯಾಲಯದಿಂದ ರಾಜಕೀಯ ವಿಜ್ಞಾನ (Political Science) ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಕಾಲೇಜು ದಿನಗಳಲ್ಲಿ ಅತಿ ಧೈರ್ಯಶಾಲಿಯಾಗಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಉತ್ತಮ ವಾಗ್ಮಿಯೂ ಹೌದ. ರವೀಂದ್ರ ಹೆಬ್ಬಾಳ್ಕರ್‌ರನ್ನು ಲಕ್ಷ್ಮೀ ವಿವಾಹವಾದರು. ಇವರಿಗೆ ಒಬ್ಬರು ಮೃಣಾಲ್ ಹೆಬ್ಬಾಳ್ಕರ್ ಮಗನಿದ್ದು, ಅವರು ಬೆಳಗಾವಿಯಲ್ಲಿ ವಿದ್ಯಾಭ್ಯಾಸ ಮುಗಿಸಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಅವರ ರಾಜಕೀಯ ಬದುಕು
ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಸಾಮಾನ್ಯ ಕಾರ್ಯಕರ್ತೆಯಾಗಿದ್ದ ಅವರು ಅವಿರತ ಶ್ರಮಿದಿಂದಲೇ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ಅಲಂಕರಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ಅವರು ರಾಜಕೀಯದಲ್ಲಿ ಹೆಚ್ಚು ಸಕ್ರಿಯರಾದರು. ಪಕ್ಷ ಸಂಘಟನೆಯಲ್ಲಿ, ಕಾಂಗ್ರೆಸ್ ಸಮಾವೇಶಗಳನ್ನು ಬೆಳಗಾವಿ ಭಾಗದಲ್ಲಿ ಯಶಸ್ವಿಯಾಗಿಸಿಕೊಂಡು ಬಂದವರಲ್ಲಿ ಇವರು ಒಬ್ಬರು.
2013ರ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧಿಸಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು 35,811 ಮತಗಳನ್ನು ಪಡೆದು ಸೋಲು ಅನುಭವಿಸಿದರು. ಮಾರನೇ ವರ್ಷ 2014ರ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದರು. ಆಗ 4,78,557 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ವಿರುದ್ಧ ಪರಾಭವಗೊಂಡರು.
ಶಾಸಕಿಗೆ ಲಕ್ಷಕ್ಕೂ ಅಧಿಕ ಬಹುಮತ
ನಿರಂತರ ಪ್ರಯತ್ನ ಮುಂದುವರಿಸಿದ ಲಕ್ಷ್ಮಿ ಹೆಬ್ಬಾಳ್ಕರ್ ಕಳೆದ ಬಾರಿ 2018ರ ವಿಧಾನಸಭೆ ಚುನಾವಣೆಯಲ್ಲಿ 102,040 ಮತಗಳನ್ನು ಪಡೆದು ಜಯಗಳಿಸಿದರು. ಪ್ರಸಕ್ತ 2023ರ ವಿಧಾನಸಭಾ ಚುನಾವಣೆಯಲ್ಲಿ ಬರೊಬ್ಬರಿ 1,07,619 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ನಾಗೇಶ್ ಮನ್ನೋಲ್ಕರ್ ಅವರನ್ನು ಸೋಲಿಸಿದ್ದಾರೆ. ಈ ಮೂಲಕ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಅವರು ಎರಡು ಭಾರಿ ಆಯ್ಕೆಯಾಗಿದ್ದಾರೆ.
ಸದ್ಯ ಕಾಂಗ್ರೆಸ್ ಪಕ್ಷದಲ್ಲಿ ಬೆರಳೆಣಿಕೆಯಷ್ಟಿರುವ ಮಹಿಳಾ ಶಾಸಕಿಯರಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಗ್ರಸ್ಥಾನ ಇದೆ. ಈ ಭಾರಿ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಪೂರಕವಾದ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಅಲ್ಲದೇ ರಾಜ್ಯದಲ್ಲಿ ಮಹಿಳೆಯರ ಕುಂದು ಕೊರತೆ, ಸಮಸ್ಯೆಗಳ ಪರಿಹಾರಕ್ಕಾಗಿ ಸಂಪುಟದಲ್ಲಿ ಮಹಿಳೆಯರಿಗೂ ಹೆಚ್ಚಿನ ಸ್ಥಾನ ನೀಡಬೇಕು ಎಂಬ ಬೇಡಿಕೆ ಹಿಂದಿನಿಂದಲೂ ಇದೆ.
ಇದೆಲ್ಲ ಕಾರಣಗಳಿಂದ ಕಾಂಗ್ರೆಸ್‌ನಿಂದ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿರುವ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಮೊದಲ ಬಾರಿಗೆ ಸಚಿವೆಯಾಗಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications