ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ಸೇರ್ಪಡೆ : ಯಡಿಯೂರಪ್ಪ ಹೇಳಿದ್ದೇನು?

|
Google Oneindia Kannada News

Recommended Video

ಲಕ್ಷ್ಮಿ ಹೆಬ್ಬಾಳ್ಕರ್ ಬಿಜೆಪಿ ಸೇರುವುದರ ಬಗ್ಗೆ ಬಿ ಎಸ್ ಯಡಿಯೂರಪ್ಪ ಹೇಳಿದ್ದೇನು? | Oneindia Kannada

ಬೆಂಗಳೂರು, ಜುಲೈ 14 : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ಸೇರಲಿದ್ದಾರೆ? ಎಂಬ ಸುದ್ದಿಗಳು ಶನಿವಾರ ರಾತ್ರಿಯಿಂದ ಹಬ್ಬಿತ್ತು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಈ ಸುದ್ದಿ ಆತಂಕ ಉಂಟು ಮಾಡಿತ್ತು.

ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ' ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ಸೇರ್ಪಡೆ ವಿಚಾರ ಸುಳ್ಳು' ಎಂದು ಹೇಳಿದರು.

ಕುತೂಹಲ ಮೂಡಿಸಿದ ಬಿಜೆಪಿ ನಾಯಕರ ದೆಹಲಿ ಭೇಟಿ!ಕುತೂಹಲ ಮೂಡಿಸಿದ ಬಿಜೆಪಿ ನಾಯಕರ ದೆಹಲಿ ಭೇಟಿ!

Lakshmi Hebbalkar will not join BJP says Yeddyurappa

'ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬಿಜೆಪಿ ಸೇರುವುದಿಲ್ಲ. ನಾವು ಅವರನ್ನು ಪಕ್ಷಕ್ಕೂ ಆಹ್ವಾನಿಸಿಲ್ಲ. ಈ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳಲ್ಲಿ ಸತ್ಯವಿಲ್ಲ' ಎಂದು ಸ್ಪಷ್ಟನೆ ನೀಡಿದರು.

ಸಿಎಂ ರಾಜೀನಾಮೆಗೆ ಬಿಜೆಪಿ ಧರಣಿ : ಯಡಿಯೂರಪ್ಪ ಹೇಳಿದ್ದೇನು?ಸಿಎಂ ರಾಜೀನಾಮೆಗೆ ಬಿಜೆಪಿ ಧರಣಿ : ಯಡಿಯೂರಪ್ಪ ಹೇಳಿದ್ದೇನು?

ಯಡಿಯೂರಪ್ಪ ಅವರು ಈ ಸುದ್ದಿಗಳ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಇದರಿಂದಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬಿಜೆಪಿ ಸೇರುವ ವದಂತಿಗಳಿಗೆ ತೆರೆ ಬಿದ್ದಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದಾರೆ.

ಬೆಳಗಾವಿಯ ಮೂವರು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಶನಿವಾರದಿಂದ ಹರಿದಾಡುತ್ತಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಸೇರಿರುವ ರಮೇಶ್ ಜಾರಕಿಹೊಳಿ ಅವರ ಶಾಸಕರ ಜೊತೆ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿಗಳಿವೆ.

ಬಿಜೆಪಿಯ ಶಾಸಕರು ರಾಜನಕುಂಟೆ ಬಳಿ ಇರುವ ರಮಾಡ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಯಡಿಯೂರಪ್ಪ ಅವರು ಸಂಜೆ 4 ಗಂಟೆಗೆ ರೆಸಾರ್ಟ್‌ಗೆ ಭೇಟಿ ನೀಡಲಿದ್ದು, ಶಾಸಕರ ಜೊತೆ ಸಭೆ ನಡೆಸಲಿದ್ದಾರೆ.

English summary
Belagavi Rural Congress MLA Lakshmi Hebbalkar will not join BJP. Reports that saying Lakshmi Hebbalkar will join party baseless clarified Karnataka BJP president B.S.Yeddyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X