ಹಂಪಿ ಅಭಿವೃದ್ಧಿ ಭೂ ಸ್ವಾಧೀನ ರದ್ದು; ಸುಂದರೀಕರಣಕ್ಕೆ ಹಿನ್ನಡೆ
ಬೆಂಗಳೂರು, ನವೆಂಬರ್ 03; ವಿಶ್ವಪ್ರಸಿದ್ಧ ಹಂಪಿಯಲ್ಲಿರುವ ಉಗ್ರ ನರಸಿಂಹ ಮತ್ತು ಬಡವಿಲಿಂಗ ದೇವಾಲಯಗಳ ಸಂರಕ್ಷಿತ ಸ್ಮಾರಕಗಳ ಬಳಿ ಸುಂದರೀಕರಣ ಮತ್ತು ಮೂಲಸೌಕರ್ಯ ಸುಧಾರಣೆಗಾಗಿ ಮಾಡಿಕೊಂಡಿದ್ದ ಸುಮಾರು 7 ಎಕರೆ ಭೂ ಸ್ವಾಧೀನಪಡಿಸಿಕೊಳ್ಳುವುದನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಹಂಪಿಯ ಸುಂದರೀಕರಣ ಯೋಜನೆಗೆ ತೀವ್ರ ಹಿನ್ನಡೆಯಾಗಿದೆ.
ಸರ್ಕಾರ ಸ್ವಾಧೀನಪಡಿಸಿಕೊಂಡಿರುವ ಭೂಮಿ ಬಡ ರೈತರ ಜೀವನಾಡಿಯಾಗಿದೆ. ಈ ಪ್ರಕರಣದಲ್ಲಿ ಭೂಸ್ವಾಧೀನಕ್ಕೆ ಯಾವುದೇ ನೈತಿಕ ಕಾರಣಗಳು ಕಂಡು ಬರುತ್ತಿಲ್ಲ ಎಂದು ನ್ಯಾಯಾಲಯ ಸರ್ಕಾರದ ಕ್ರಮಕ್ಕೆ ಬೇಸರ ಹೊರಹಾಕಿದೆ. 2007ರಲ್ಲಿ ನಿಡಶೇಷಿ ವೀರಣ್ಣ ಮತ್ತಿತರರು ಹೊಸಪೇಟೆ ತಾಲೂಕಿನ ಕೃಷ್ಣಾಪುರ ಮತ್ತು ಕಮಲಾಪುರ ಗ್ರಾಮಗಳ ವಿವಿಧ ಸರ್ವೆ ನಂಬರ್‌ಗಳಲ್ಲಿ ಭೂಮಿ ಸ್ವಾಧೀನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಧಾರವಾಡ ಪೀಠದಲ್ಲಿನ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಏಕಸದಸ್ಯಪೀಠ ಮಾನ್ಯ ಮಾಡಿದೆ.

ಹೈಕೋರ್ಟ್ ಆದೇಶವೇನು?; ನ್ಯಾಯಾಲಯ ಭೂ ಸ್ವಾಧೀನ ಮಾಡಿಕೊಂಡು 2006ರ ಏಪ್ರಿಲ್ 5ರಂದು ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದೆ. ಅಲ್ಲದೆ, ಭೂ ಸ್ವಾಧೀನವನ್ನು ಕಾನೂನುಬಾಹಿರವೆಂದು ಸಾರಿದೆ. ರಾಷ್ಟ್ರೀಯ ಸ್ಮಾರಕಗಳ ಸುಂದರೀಕರಣಕ್ಕಾಗಿ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಾಗಿರುವುದರಿಂದ ಅರ್ಜಿದಾರರು ತಮ್ಮ ಆಕ್ಷೇಪಣೆಯನ್ನು ಸಲ್ಲಿಸುವ ಮೂಲಕ ವಿಚಾರಣೆಗೆ ಅರ್ಹರಾಗಿರುತ್ತಾರೆ, ಅದಕ್ಕಾಗಿ ತುರ್ತು ಷರತ್ತು ವಿಧಿಸಿ ಅವುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುವುದಿಲ್ಲಎಂದು ಹೇಳಿದೆ.
'ಭೂ ಸ್ವಾಧೀನ ಕಾಯಿದೆ 1894ರ ಸೆಕ್ಷನ್ 5ಎ ಅನ್ವಯ ಆಕ್ಷೇಪಣೆಗಳ ವಿಚಾರಣೆಯನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಅದನ್ನು ರದ್ದುಪಡಿಸಿ ಕಾಯಿದೆಯ ಸೆಕ್ಷನ್ 17ರ ಅಡಿಯಲ್ಲಿ ತುರ್ತು ನಿಬಂಧನೆಯನ್ನು ಅನ್ವಯಿಸುವ ಮೂಲಕ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವ ರಾಜ್ಯ ಸರಕಾರದ ಕ್ರಮವು ದುರುದ್ದೇಶದಿಂದ ಕೂಡಿದೆ' ಎಂದು ಅಭಿಪ್ರಾಯಿಸಿದೆ.
ತುರ್ತು ಷರತ್ತುಗಳಂತಹ ಕಾನೂನು ವ್ಯಾಪ್ತಿಯನ್ನು ವಿಧಿಸುವಾಗ ಅಧಿಕಾರಿಗಳು ಕಾನೂನಿನ ಇತರೆ ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಬದ್ಧವಾಗಿರಬೇಕು. ಪ್ರಸ್ತುತ ಪ್ರಕರಣದಲ್ಲಿ, ತುರ್ತು ಷರತ್ತನ್ನು ಅನ್ವಯ ಮಾಡಿರುವುದಕ್ಕೆ ರಾಜ್ಯ ಸರಕಾರದ ಬಳಿ ಸಾಬೀತು ಮಾಡುವ ಯಾವುದೇ ಅಂಶಗಳಿಲ್ಲಎಂದು ನ್ಯಾಯಾಲಯ ಹೇಳಿದೆ.
ಭೂ ಸ್ವಾಧೀನ ಸಂಬಂಧಿ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯವು, ಈ ಭೂಸ್ವಾಧೀನ ಕಾಯಿದೆ 1894ರ ಕಾಯಿದೆಯ ಸೆಕ್ಷನ್ 17ರ ಅಡಿಯಲ್ಲಿ ಸರಕಾರಕ್ಕೆ ನೀಡಲಾದ ಅಧಿಕಾರವನ್ನು ಸೂಕ್ತ ರೀತಿಯಲ್ಲಿ ಚಲಾಯಿಸಲಾಗಿಲ್ಲ ಎಂದು ಅತೃಪ್ತಿ ವ್ಯಕ್ತಪಡಿಸಿದೆ.
ಏನಿದು ಪ್ರಕರಣ?: ಕೃಷ್ಣಾಪುರ ಮತ್ತು ಕಮಲಾಪುರ ಗ್ರಾಮಗಳಲ್ಲಿನ ವಿವಿಧ ಸರ್ವೇ ನಂಬರ್‌ಗಳಲ್ಲಿ ರೈತರಿಗೆ ಸೇರಿದ ಭೂಮಿಯನ್ನು ರಾಜ್ಯ ಸರಕಾರ ಭೂ ಸ್ವಾಧೀನ ಕಾಯಿದೆ 1894ರಡಿ ಸ್ವಾಧೀನಪಡಿಸಿಕೊಂಡಿತ್ತು. ದೇವಾಲಯಗಳಿಗೆ ಪ್ರವೇಶವನ್ನು ದೊರಕಿಸಿಕೊಡಲು ಈ ಸ್ವಾಧೀನ ಅತ್ಯಗತ್ಯ ಎಂದು ಸರಕಾರ ಹೇಳಿತ್ತು.
ಅರ್ಜಿದಾರರು ತಾವು ಆ ಕೃಷಿ ಭೂಮಿಯನ್ನೇ ನಂಬಿ ಜೀವನ ನಡೆಸುತ್ತಿದ್ದೇವೆ. ಆದರೆ ಸರಕಾರ ಏಕಪಕ್ಷೀಯವಾಗಿ ಸ್ವಾಧೀನ ನಿರ್ಧಾರ ಕೈಗೊಂಡಿದೆ. ಕನಿಷ್ಠ ತಮ್ಮ ಆಕ್ಷೇಪಣೆಗಳನ್ನೂ ಸಹ ಕೇಳಿಲ್ಲ. ಯಾವುದೇ ತುರ್ತು ಇಲ್ಲದಿದ್ದರೂ ಸರ್ಕಾರ ತುರ್ತು ಸಂದರ್ಭ ಎಂದು ಹೇಳಿ ನಿಯಮದ ಪ್ರಕಾರ ಆಕ್ಷೇಪಣೆಗಳಿಗೂ ಅವಕಾಶ ನೀಡದೆ ಕಾನೂನು ಬಾಹಿರ ಕ್ರಮ ಕೈಗೊಂಡಿದೆ ಎಂದು ಆಕ್ಷೇಪಿಸಿ ಹೈಕೋರ್ಟ್ ಮೊರೆ ಹೋಗಿದ್ದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications