ಭೂ ಅಕ್ರಮದ ಸುಳಿಗೆ ಸಿಲುಕಿದ್ದ ಬೈರತಿ ಬಸವರಾಜ್‌ಗೆ ತಾತ್ಕಾಲಿಕ ರಿಲೀಫ್
ಬೆಂಗಳೂರು ಡಿ. 22: ಬೋಗಸ್ ಪ್ರಮಾಣ ಪತ್ರ ಸೃಷ್ಟಿಸಿ ಕೋಟ್ಯಂತರ ರೂ. ಬೆಲೆ ಬಾಳುವ 22 ಎಕರೆ ಭೂಮಿಯನ್ನು ಕಬಳಿಸಿದ ಅಕ್ರಮಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಮತ್ತು ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ವಿರುದ್ಧ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸುತ್ತಿದ್ದ ವಿಚಾರಣೆಗೆ ಹೈಕೋರ್ಟ್ ಧಾರವಾಡ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಭೂ ಹಗರಣದಿಂದ ತಲೆದಂಡಕ್ಕೆ ಸಿಲುಕಿದ್ದ ಬೈರತಿ ಬಸವರಾಜ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಭೂ ಹಗರಣಕ್ಕೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ಪ್ರಶ್ನಿಸಿ ಸಚಿವ ಭೈರತಿ ಬಸವರಾಜ್, ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇವರ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಪೀಠ ನಡೆಸಿ ಮಧ್ಯಂತರ ತಡೆಯಾಜ್ಞೆ ನೀಡಿದೆ. ಹಿಂದಿನ ಖಾಸಗಿ ದೂರಿನಲ್ಲಿರುವ ಅಂಶಗಳೇ ಪ್ರಸ್ತುತ ಖಾಸಗಿ ದೂರಿನಲ್ಲಿವೆ. ಪಕ್ಷಕಾರರ ನಡುವೆ ಕೆಲವು ಸಿವಿಲ್ ವಿವಾದಗಳು ಬಾಕಿ ಇವೆ. ಹೀಗಾಗಿ, ಮುಂದಿನ ವಿಚಾರಣೆವರೆಗೆ ಮಧ್ಯಂತರ ತಡೆ ನೀಡಲು ಇದು ಸೂಕ್ತ ಪ್ರಕರಣವಾಗಿದೆ ಎಂದು ಪೀಠ ಆದೇಶದಲ್ಲಿ ಹೇಳಿದೆ.
ಏನಿದು ಅಕ್ರಮ: ಸಚಿವ ಬೈರತಿ ಬಸವರಾಜ್, ವಿಧಾನ ಪರಿಷತ್ ಸದಸ್ಯ ಆರ್. ಶಂಕರ್, ನಿವೃತ್ತ ಸಬ್ ರಿಜಿಸ್ಟರ್ ಎಂ. ಮಾದಪ್ಪ ಅವರು ನಕಲಿ ದಾಖಲೆ ಸೃಷ್ಟಿಸಿ ದಿ. ಅಣ್ಣಯ್ಯಪ್ಪ ಅವರ ನಕಲಿ ಸಹಿ ಸೃಷ್ಟಿಸಿ 22. 43 ಎಕರೆ ಭೂಮಿಯನ್ನು ಕಬಳಿಸಿದ್ದಾರೆ ಎಂಬುದು ಆರೋಪ. ಮಾದಪ್ಪ ಅವರ ತಂದೆ ಅಣ್ಣಯ್ಯಪ್ಪ ಕೃಷಿಕ ಕುಟುಂಬವಾಗಿತ್ತು.
ಅಣ್ಣಯ್ಯಪ್ಪ ಬದುಕಿರುವವರೆಗೂ ಆಸ್ತಿ ವಿಭಜನೆ ನಡೆದಿರಲಿಲ್ಲ. ಅಣ್ಣಯ್ಯಪ್ಪ ಬದುಕಿರುವಾಗಲೇ ಸಂಬಂಧಿ ಮಾದಪ್ಪ ಮತ್ತು ಪಿಳ್ಳ ಮಾದಪ್ಪ ಅವರು ಶಾಸಕ ಬೈರತಿ ಬಸವರಾಜ್, ವಿಧಾನ ಪರಿಷತ್ ಸದಸ್ಯ ಆರ್ ಶಂಕರ್ ಮತ್ತು ಅರುಣ್ ಜತೆ ಗೂಡಿ ಅಣ್ಣಯ್ಯಪ್ಪನ ನಕಲಿ ಸಹಿ ಸೃಷ್ಟಿಸಿದ್ದಾರೆ. ಈ ಮೂಲಕ ಕಲ್ಕರೆ ಗ್ರಾಮದ ಸರ್ವೆ ನಂ. 375 /2 ರಲ್ಲಿರುವ 22. 43 ಎಕರೆ ಜಮೀನಿನ ಮಾರಾಟ ಪತ್ರವನ್ನು 2003, ಮೇ. 1 ರಂದು ಸೃಷ್ಟಿಸಿ ಅಂದೇ ಆರೋಪಿ ಬೈರತಿ ಬಸವರಾಜ್ ಹೆಸರಿಗೆ ನೋಂದಣಿ ಮಾಡಿಸಲಾಗಿತ್ತು ಎಂದು ಆರೋಪಿಸಲಾಗಿತ್ತು.

ಈ ಸಂಬಂಧ ಸಲ್ಲಿಸಿದ್ದ ಖಾಸಗಿ ದೂರನ್ನು ವಿಚಾರಣೆ ನಡೆಸಿದ್ದ ನ್ಯಾಯಾಲಯ ಪ್ರಕರಣ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೆ.ಆರ್. ಪುರಂ ಪೊಲೀಸರಿಗೆ ಸೂಚನೆ ನೀಡಲಾಗಿತ್ತು. ಪ್ರಕರಣ ಕುರಿತು ತನಿಖೆ ನಡೆಸಿದ್ದ ಕೆ.ಆರ್. ಪುರಂ ಪೊಲೀಸರು ಬಿ ವರದಿ ಸಲ್ಲಿಸಿದ್ದರು. ಬಿ ವರದಿಯನ್ನು 2021ರ ಸೆಪ್ಟೆಂಬರ್ 9ರಂದು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು. ಆ ಬಳಿಕ ಈ ಪ್ರಕರಣ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ವರ್ಗಾವಣೆಯಾಗಿತ್ತು.

ಈ ನ್ಯಾಯಾಲಯ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸಿ 2021ರ ನ. 25 ರಂದು ಬೈರತಿ ಬಸವರಾಜ್, ಆರ್.ಶಂಕರ್, ಮಾದಪ್ಪ ಮತ್ತು ಪಿಳ್ಳಮಾದಪ್ಪ, ನಿವೃತ್ತ ಹಿರಿಯ ಸಬ್ ರಿಜಿಸ್ಟ್ರಾರ್ ಅರುಣ್ ಕಲ್ಗುಚ್ಕಿ ಅವರಿಗೆ ಸಮನ್ಸ್ ನೀಡಿತ್ತು. ಈ ಎರಡು ಕೋರ್ಟ್‌ಗಳು ನೀಡಿದ್ದ ಆದೇಶ ರದ್ದುಕೋರಿ ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದು ಮಧ್ಯಂತರ ಆದೇಶದಿಂದ ರಿಲೀಫ್ ಸಿಕ್ಕಿದೆ.

ಬೆಳಗಾವಿ ಅಧಿವೇಶನದಲ್ಲಿ ಕೋಲಾಹಲ: ಸಚಿವ ಭೈರತಿ ಬಸವರಾಜ್ ಅವರ ಭೂ ಅಕ್ರಮ ಬೆಳಗಾವಿ ಅಧಿವೇಶನದಲ್ಲಿ ಕೂಡ ಗಮನ ಸೆಳೆದಿತ್ತು. ಆಡಳಿತ ಮತ್ತು ವಿರೋಧ ಪಕ್ಷದ ನಡುವಿನ ಆರೋಪ ಮತ್ತು ಪ್ರತ್ಯಾರೋಪಕ್ಕೆ ನಾಂದಿ ಹಾಡಿತ್ತು. ಬೈರತಿ ಬಸವರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿ ಪಕ್ಷ ಆಗ್ರಹಿಸಿತ್ತು.
Recommended Video
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications