ಅಕ್ರಮ ಆಸ್ತಿಗಳಿಕೆ ಪ್ರಕರಣ, ಯಡಿಯೂರಪ್ಪಗೆ ನೋಟಿಸ್

Posted By: Gururaj
Subscribe to Oneindia Kannada

ಬೆಂಗಳೂರು, ಆ.4 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಬಿ.ಎಸ್.ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಮೂರು ಪ್ರಕರಣಗಳಲ್ಲಿ ಯಡಿಯೂರಪ್ಪ ಮತ್ತು ಕುಟುಂಬ ಸದಸ್ಯರು ಆರೋಪಿಗಳಾಗಿದ್ದಾರೆ.

ಶಿವಮೊಗ್ಗ ಮೂಲದ ವಕೀಲ ಬಿ.ವಿನೋದ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ನೋಟಿಸ್ ಜಾರಿ ಮಾಡಿದ್ದಾರೆ. ಮೊದಲು ವಿನೋದ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು, ಆದರೆ, ಅದನ್ನು ವಜಾಗೊಳಸಲಾಗಿತ್ತು.

Land grab case, High Court notice to BS Yeddyurappa

ಲೋಕಾಯುಕ್ತ ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಬಿ.ಎಸ್.ಯಡಿಯೂರಪ್ಪ ಮತ್ತು ಮೂವರು ಕುಟುಂಬ ಸದಸ್ಯರಿಗೆ ನೋಟಿಸ್ ನೀಡಿದೆ. ಇದರಿಂದ ಕರ್ನಾಟಕ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಅವರಿಗೆ ಹೊಸ ಸಂಕಷ್ಟ ಎದುರಾಗಿದೆ.

ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ.ರಾಘವೇಂದ್ರ ಭದ್ರಾವತಿ ತಾಲೂಕಿನ ಹುಣಸೇಕಟ್ಟೆಯಲ್ಲಿ 66 ಎಕರೆ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬುದು ಒಂದು ದೂರು.

ಕೋಟೆಗಂಗೂರು ಮತ್ತು ಕೆಹೆಚ್‌ ಬಿ ಕಾಲೋನಿಗಳಲ್ಲಿ ಅಕ್ರಮ ಡಿನೋಟಿಫಿಕೇಷನ್ ಮಾಡಿ ನಿವೇಶನ ಪಡೆದಿದ್ದಾರೆ, ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬುದು ಇನ್ನೆರಡು ದೂರುಗಳಾಗಿವೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
High court of Karnataka ordered notice to Former CM B.S.Yeddyurappa in a criminal revision petition filed by advocate Vinod B, who had filed a private complaint before the Lokayukta against BSY and his son B Y Raghavendra.
Please Wait while comments are loading...