ಈ ಭಾಗದಲ್ಲಿ ಭೂಮಿಗೆ ಬಂಗಾರದ ಬೆಲೆ, ಸೇಲ್ ಮಾಡಬೇಡಿ: ಡಿ.ಕೆ ಶಿವಕುಮಾರ್‌

ಭೂಮಿ ಮಾರಾಟದ ಬಗ್ಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್‌ ಅವರು ಮತ್ತೊಮ್ಮೆ ಎಚ್ಚರಿಕೆಯನ್ನು ನೀಡಿದ್ದಾರೆ. ರಾಮನಗರ ಹಾಗೂ ಕನಕಪುರ ಭಾಗದಲ್ಲಿ ಯಾವುದೇ ಕಾರಣಕ್ಕೂ ಭೂಮಿ ಮಾರಾಟ ಮಾಡಬೇಡಿ. ಈ ಭಾಗದಲ್ಲಿ ಭೂಮಿಯ ಬೆಲೆ ಹೆಚ್ಚಾಗಿ ಭೂಮಿಗೆ ಬಂಗಾರದ ಬೆಲೆ ಬರಲಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ ಯಾವ ಕಾರಣಕ್ಕೆ ಇಲ್ಲಿ ಚಿನ್ನದ ಬೆಲೆ ಹೆಚ್ಚಳವಾಗಲಿದೆ ಎನ್ನುವ ಬಗ್ಗೆಯೂ ಡಿ.ಕೆ ಶಿವಕುಮಾರ್‌ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಹಾಗಾದರೆ ಯಾವೆಲ್ಲ ಭಾಗದಲ್ಲಿ ಭೂಮಿ ಬೆಲೆ ಹೆಚ್ಚಳವಾಗಲಿದೆ. ಎಲ್ಲೆಲ್ಲಿ ಭೂಮಿ ಮಾರಾಟ ಮಾಡಬೇಡಿ ಎಂದು ಡಿ.ಕೆ ಶಿವಕುಮಾರ್‌ ಅವರು ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಯಾರೂ ಸಹ ಕೆಲವು ದಿನಗಳ ವರೆಗೆ ಭೂಮಿಯನ್ನು ಮಾರಾಟ ಮಾಡುವುದಕ್ಕೆ ಹೋಗಬೇಡಿ. ಕೆಲವೇ ದಿನಗಳಲ್ಲಿ ನಿಮ್ಮ ಭೂಮಿಗೆ ಚಿನ್ನದ ಬೆಲೆ ಬರಲಿದೆ ಎಂದು ಕನಕಪುರದ ಜನರಿಗೆ ಡಿ.ಕೆ ಶಿವಕುಮಾರ್ ಅವರು ಹೇಳಿದ್ದು ಈ ಮೂಲಕ ಈ ಭಾಗದ ಜನರಿಗೆ ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಾರ್ಟ್‌ ಲಿಸ್ಟ್‌ ಮಾಡಲಾಗಿರುವ ಜಾಗದಲ್ಲಿ ಕನಕಪುರ ರಸ್ತೆಯೂ ಸೇರಿದೆ ಇದೀಗ ಡಿ.ಕೆ ಶಿವಕುಮಾರ್‌ ಅವರು ಮತ್ತೊಂದು ಕಾರಣಕ್ಕೆ ಇಲ್ಲಿ ಭೂಮಿ ಮಾರಾಟ ಮಾಡಬೇಡಿ ಅಂತ ಹೇಳಿದ್ದಾರೆ.

Land in This Area Is Worth Gold Don t Sell it D K Shivakumar

ಕನಕಪುರ ತಾಲ್ಲೂಕಿನ ಭೂಹಳ್ಳಿ ಹೊಸಕೆರೆ ಸಮೀಪದಲ್ಲಿ ಸೋಮವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಅವರು, ಭೂಮಿ ಮಾರಾಟ ಮಾಡಬೇಡಿ ಎಂದು ಜನರಿಗೆ ಸಲಹೆ ನೀಡಿದ್ದಾರೆ. ಈ ರೀತಿ ಭೂಮಿ ಮಾರಾಟ ಮಾಡಬೇಡಿ ಅಂತ ಡಿ.ಕೆ ಶಿವಕುಮಾರ್‌ ಅವರು ಹೇಳುತ್ತಿರುವುದು ಮೂರನೇ ಬಾರಿ. ಆದರೆ ಯಾವ ಕಾರಣಕ್ಕೆ ಭೂಮಿ ಮಾರಾಟ ಮಾಡಬಾರದು ಅಂತ ಇಲ್ಲಿಯ ವರೆಗೆ ಡಿ.ಕೆ ಶಿವಕುಮಾರ್‌ ಅವರು ಹೇಳಿರಲಿಲ್ಲ. ಇದೀಗ ಯಾಕೆ ಭೂಮಿ ಮಾರಾಟ ಮಾಡಬಾರದು ಎನ್ನುವುದಕ್ಕೆ ಕಾರಣ ನೀಡಿದ್ದಾರೆ.

ರಸ್ತೆ ಅಭಿವೃದ್ಧಿಯಿಂದ ಭೂಮಿಗೆ ಬಂಗಾರದ ಬೆಲೆ

ಇಲ್ಲಿನ ಪಾದ್ದರೆಯಿಂದ ಭೂಹಳ್ಳಿ ಅರಣ್ಯ ತಪಾಸಣೆ ಕೇಂದ್ರದ ವರೆಗೆ ಅಂದಾಜು ಬರೋಬ್ಬರಿ 13 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಆಗಲಿದೆ. ಅಲ್ಲದೆ ದೊಡ್ಡ ಆಲಹಳ್ಳಿಯಿಂದ ಕಬ್ಬಾಳಿನಯ ವರೆಗೆ ಬರೋಬ್ಬರಿ 40 ಕೋಟಿ ರೂಪಾಯಿ ವೆಚ್ಚದಲ್ಲಿ 14.5 ಕಿಮೀ ಉದ್ದದ ರಸ್ತೆ ಅಗಲೀಕರಣ ನಡೆಯಲಿದೆ. ಇದರಿಂದ ನಮ್ಮ ಜನರ ಆಸ್ತಿ ಮೌಲ್ಯ ದುಪ್ಪಟ್ಟಾಗಲಿದೆ. ಈ ಕಾರಣಕ್ಕಾಗಿ ಭೂಮಿ ಮಾರಾಟ ಮಾಡಬೇಡಿ ಅಂತ ಸಲಹೆ ನೀಡಿದ್ದಾರೆ.

ಈ ಹಿಂದೆಯೂ ಕನಕಪುರ, ಸಾತನೂರು ಹಾಗೂ ದೊಡ್ಡ ಆಲಹಳ್ಳಿ ರಸ್ತೆಗಳನ್ನು ಅಗಲೀಕರಣ ಮಾಡಲು ಆಗಲ್ಲ ಎನ್ನುತ್ತಿದ್ದರು. ಇದೀಗ ಆ ಕೆಲಸ ಆಗಿದೆ. ಮುಂದಿನ ದಿನಗಳಲ್ಲಿ ಈಗ ಹಾಕಿಕೊಂಡಿರುವ ಯೋಜನೆಯೂ ನೆರವೇರಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಭೂಮಿ ಮಾರಾಟ ಮಾಡಬೇಡಿ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+