Get Updates
Get notified of breaking news, exclusive insights, and must-see stories!

100 ಕೋಟಿ ಮೌಲ್ಯದ ಡಿನೋಟಿಫೈ ಪ್ರಕರಣ: ಯಡಿಯೂರಪ್ಪ, ಕುಮಾರಸ್ವಾಮಿ ವಿರುದ್ಧ ದಾಖಲೆ ಬಿಡುಗಡೆ

ಬೆಂಗಳೂರು, ಸೆಪ್ಟೆಂಬರ್‌ 20: ಕರ್ನಾಟಕದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಭ್ರಷ್ಟಾಚಾರ ಆರೋಪದ ನಡುವೆಯೇ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಅವರು 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಭೂಮಿಯನ್ನು ಡಿನೋಟಿಫೈ ಮಾಡಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಗುರುವಾರ ದಾಖಲೆಗಳನ್ನು ಬಿಡುಗಡೆ ಮಾಡಿದೆ.

ಈ ಕುರಿತು ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ಮಾತನಾಡಿ, ಬೆಂಗಳೂರು ನಗರ ವ್ಯಾಪ್ತಿಯಲ್ಲಿಯೇ ಅನೇಕ ಪ್ರಕರಣಗಳು ಬೆಳಕಿಗೆ ಬಂದಿವೆ. ಮಠದಹಳ್ಳಿ ವ್ಯಾಪ್ತಿಯ ಗಂಗೇನಹಳ್ಳಿಯ ಸರ್ವೇ 7 (1ಸಿ), 7 ಬಿ, 7 ಸಿ, ನಂಬರ್ ಗಳ ಭೂಮಿಯನ್ನು ಬಿಡಿಎ ಬಡಾವಣೆ ನಿರ್ಮಾಣಕ್ಕೆ ಎಂದು 1976 ರಲ್ಲಿ 1 ಎಕರೆ 11 ಗುಂಟೆ ಜಮೀನನ್ನು ಸ್ವಾಧೀನ ಮಾಡಿಕೊಂಡಿರುತ್ತಾರೆ. 1978 ಕ್ಕೆ ಸಂಪೂರ್ಣ ಭೂಸ್ವಾಧೀನ ಮುಗಿದು ಹೋಗಿರುತ್ತದೆ.

Land worth over Rs 100 crore denotified in Karnataka by HD Kumaraswamy BS Yediyurappa alleges Congress

ಈ ಭೂಮಿಗೆ ಸಂಬಂದವೇ ಇಲ್ಲದ ಜಮೀನು ಮೂಲ ಮಾಲೀಕರಿಗೂ ಸಂಬಂಧ ಪಡದ ದಾರಿಯಲ್ಲಿ ಹೋಗುವ ದಾಸಯ್ಯ ರಾಜಶೇಖರಯ್ಯ ಎನ್ನುವ ವ್ಯಕ್ತಿ ಡೀ ನೋಟಿಫಿಕೇಷನ್ ಮಾಡಿ ಎಂದು 2007 ರಲ್ಲಿ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿ ಅವರಿಗೆ ಅರ್ಜಿ ನೀಡುತ್ತಾನೆ. ಈ ರಾಜಶೇಖರಯ್ಯ ಎನ್ನುವ ವ್ಯಕ್ತಿ ಯಾರು ಎಂಬುದೇ ಇದುವರೆಗೂ ಯಾರಿಗೂ ಗೊತ್ತಿಲ್ಲ. ಡಿ ನೋಟಿಫಿಕೇಷನ್ ಮಾಡಿ ಎಂದು ಬಂದಿದ್ದ ಅರ್ಜಿಯನ್ನು ಮುಂದಿಟ್ಟುಕೊಂಡು ಕುಮಾರಸ್ವಾಮಿ ಕ್ರಮಕ್ಕೆ ಮುಂದಾಗುತ್ತಾರೆ. ಎಲ್ಲ ಅಭಿಮಾನಿಗಳು ಇದು ಮೂವತ್ತು ವರ್ಷದ ಹಿಂದೆ ನಡೆದ ಪ್ರಕರಣ ಎಂದರೂ ಮತ್ತೊಮ್ಮೆ ಕೂಡಲೇ ಕ್ರಮ ತೆಗೆದುಕೊಳ್ಳಿ ಎಂದು ಹೇಳುತ್ತಾರೆ.

ಈ ಭೂಸ್ವಾಧೀನ ಆಗಿರುವ ಭೂಮಿಯ ನಿಜವಾದ ಮಾಲೀಕರಾದ 21 ಜನರ ಜೊತೆಗೆ ಕುಮಾರಸ್ವಾಮಿ ಅವರ ಅತ್ತೆ ಜಿಪಿಎ ಮಾಡಿಕೊಂಡಿದ್ದಾರೆ. ಆನಂತರ ಸಮ್ಮಿಶ್ರ ಸರ್ಕಾರ ಬಿದ್ದು ಹೋದ ಮೇಲೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದ ನಂತರ ಈ ಫೈಲ್ ಅನ್ನು ಪುಟ್ ಅಪ್ ಮಾಡುತ್ತಾರೆ. ಅಂದಿನ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಜ್ಯೋತಿ ರಾಮಲಿಂಗಂ ಅವರು ಈ ಪ್ರಕರಣ ಡಿ ನೋಟಿಫಿಕೇಶನ್ ಗೆ ಅರ್ಹವಲ್ಲ ಎಂದು ಷರಾ ಬರೆಯುತ್ತಾರೆ. ಅಧಿಕಾರಿಗಳ ಎಲ್ಲಾ ಸೂಚನೆಗಳನ್ನು ಗಾಳಿಗೆ ತೂರಿದ ಯಡಿಯೂರಪ್ಪ ಅವರು ಈ ಭೂಮಿಯನ್ನು ಭೂಸ್ವಾಧೀನದಿಂದ ಕೈ ಬಿಡಲಾಗಿದೆ ಎಂದು 2009 ರಲ್ಲಿ ತಮ್ಮ ಕೈಯಾರೇ ಬರೆಯುತ್ತಾರೆ.

ಡಿನೋಟಿಫಿಕೇಷನ್ ಆದ ಜಮೀನು ಕೆಲವೇ ದಿನಗಳಲ್ಲಿ ಕುಮಾರಸ್ವಾಮಿ ಅವರ ಭಾಮೈದನ ಹೆಸರಿಗೆ ರಿಜಿಸ್ಟರ್ ಆಗುತ್ತದೆ. ಇದೊಂದು ವ್ಯವಸ್ಥಿತವಾದ ದರೋಡೆ. ಸತ್ತವರಿಂದ ಕುಮಾರಸ್ವಾಮಿ ಅವರ ಅತ್ತೆಯ ಹೆಸರಿಗೆ ಜಿಪಿಎ ಆಗುತ್ತದೆ, ಆನಂತರ ಭಾಮೈದನ ಹೆಸರಿಗೆ ರಿಜಿಸ್ಟರ್ ಆಗುತ್ತದೆ. ನೂರಾರು ಕೋಟಿ ಬೆಲೆ ಬಾಳುವ 1.11 ಎಕರೆ ಜಮೀನನ್ನು ಡಿ ನೋಟಿಫಿಕೇಶನ್ ಮಾಡಿ, ಬಿಡಿಎ ಬಡವರಿಗೆ ಎಂದು ಮೀಸಲಿಟ್ಟಿದ್ದ ಭೂಮಿಯನ್ನು ನುಂಗಿ ಹಾಕಿರುವುದು ನ್ಯಾಯವೇ? ಎಂದು ಪ್ರಶ್ನಿಸಿದರು.

ಲೋಕಾಯುಕ್ತರು ಈ ಪ್ರಕರಣದ ತನಿಖೆ ನಡೆಸುತ್ತದೆ. ಈ ಪ್ರಕರಣವನ್ನು ವಜಾ ಮಾಡಬೇಕೆಂದು ಯಡಿಯೂರಪ್ಪನವರು ಹೈಕೋರ್ಟಿಗೆ ಸಲ್ಲಿಸುತ್ತಾರೆ. ಹೈಕೋರ್ಟ್ ಯಡಿಯೂರಪ್ಪನವರ ಅರ್ಜಿಯನ್ನು ವಜಾ ಮಾಡಿ ಅವರಿಗೆ 25,000 ದಂಡ ಹಾಕುತ್ತದೆ. ಕೂಡಲೇ ಲೋಕಾಯುಕ್ತದವರು ತಮ್ಮ ತನಿಖೆಯನ್ನು ಪೂರೈಸಿ ತಕ್ಷಣ ವರದಿಯನ್ನು ನೀಡಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹ ಮಾಡುತ್ತೇವೆ ಎಂದರು.

ಇನ್ನೂ ಈ ವೇಳೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಮಾತನಾಡಿ, ಮುಖ್ಯಮಂತ್ರಿಗಳು ದಲಿತರ ಭೂಮಿಯನ್ನು ನುಂಗಿದ್ದಾರೆ ಎಂದು ಯಾವುದೇ ದಾಖಲೆಗಳು ಇಲ್ಲದಿದ್ದರೂ ಅವರ ಮೇಲೆ ವಿರೋಧ ಪಕ್ಷಗಳು ಆರೋಪ ಮಾಡುತ್ತಿವೆ. ಅನಾಮಿಕರು ಬಂದು ಗಂಗೇನಹಳ್ಳಿಯ ಭೂಮಿಯ ಮೇಲೆ ಅರ್ಜಿ ಕೊಡುತ್ತಾರೆ. ಅದಕ್ಕೆ ಕೂಡಲೇ ಮುಖ್ಯಮಂತ್ರಿಗಳು ಸ್ಪಂದನೆ ಮಾಡುತ್ತಾರೆ. ಆನಂತರ ಎಲ್ಲಾ ಕೆಲಸವೂ ಕುಮಾರಸ್ವಾಮಿ ಅವರ ಕುಟುಂಬದ ಪರವಾಗಿ ನಡೆದು ಅವರ ಕುಟುಂಬದವರಿಗೆ ಆಸ್ತಿ ತಲುಪುತ್ತದೆ.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನ ಹೋಗುವ ತನಕ ಇದನ್ನು ಫಾಲೋ ಅಪ್ ಮಾಡುತ್ತಲೆ ಇರುತ್ತಾರೆ. ಕುಮಾರಸ್ವಾಮಿ ಅವರ ಹೆಂಡತಿ ಅನಿತಾ ಕುಮಾರಸ್ವಾಮಿ ಅವರ ತಾಯಿಗೂ ಈ ಜಮೀನಿಗೂ ಸಂಬಂಧವೇ ಇಲ್ಲ. ಆದರೂ ಅವರ ಹೆಸರಿಗೆ 20 ದಿನಗಳಲ್ಲಿ ಜಿಪಿಎ ಆಗುತ್ತದೆ. ಇದು ನಿಜವೊ ಸುಳ್ಳೋ ಎಂದು ಮಾನ್ಯ ಕುಮಾರಸ್ವಾಮಿಯವರೇ ಹೇಳಬೇಕು. ಕುಮಾರಸ್ವಾಮಿ ಅವರ ಅತ್ತೆ ವಿಮಲಾ ಅವರು ತಮ್ಮ ಮಗನಾದ ಚಂದ್ರಪ್ಪ ಅವರಿಗೆ ಮಾರಾಟ ಮಾಡಿರುವುದು ನಿಜವೋ ಸುಳ್ಳೋ ಎಂದು ಕುಮಾರಸ್ವಾಮಿ ಅವರೇ ಹೇಳಬೇಕು.

ಈ ಹಗರಣದಲ್ಲಿ ಯಡಿಯೂರಪ್ಪ ಅವರು ಹಾಗೂ ಕುಮಾರಸ್ವಾಮಿ ಅವರು ಎಷ್ಟು ಪಾಲು ಮಾಡಿಕೊಂಡಿದ್ದಾರೆ ಎಂದು ಹೇಳಬೇಕು. ಇದರ ಬಗ್ಗೆ ಇಬ್ಬರೂ ಸ್ಪಷ್ಟವಾದ ಉತ್ತರಗಳನ್ನು ನೀಡಬೇಕು. ಯಡಿಯೂರಪ್ಪ ಅವರಿಗೆ 25 ಸಾವಿರ ದಂಡ ಹಾಕಿದ ಹೈಕೋರ್ಟ್ ತನಿಖೆ ಮುಂದುವರೆಸಿ ಎಂದು 2021 ರಲ್ಲಿ ಲೋಕಾಯುಕ್ತಕ್ಕೆ ಹೇಳಿದರೂ ಸಹ ಏಕೆ ತನಿಖೆ ಮುಂದುವರೆಯುತ್ತಿಲ್ಲ ಎಂದು ಹೇಳಿದರು.

ಸಂತೋಷ್ ಲಾಡ್ ಅವರು ಮಾತನಾಡಿ, ನಾವು ಮಾಡುವ ಆರೋಪಗಳು ದಾಖಲೆ ಸಮೇತ ಇವೆ. ಬಿಜೆಪಿಯಾವರು ಮಾಡಿರುವ ಆರೋಪಗಳಿಗೆ ಇದುವರೆಗೂ ಯಾವುದೇ ದಾಖಲೆಗಲಿಲ್ಲ. ಈ ಹಗರಣದ ಮುಖ್ಯ ರೂವಾರಿ ಕುಮಾರಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಯಡಿಯೂರಪ್ಪನವರು ಉತ್ತರ ಕೊಡಬೇಕು. ಮುಖ್ಯವಾಗಿ ಬಿಜೆಪಿಯವರು ನಾವು ಬಿಡುಗಡೆ ಮಾಡುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಹೋಗಿ ರಾಜ್ಯಪಾಲರಿಗೆ ನೀಡಿ ಮತ್ತೊಮ್ಮೆ ತನಿಖೆಗೆ ಆದೇಶಿಸಿ ಎಂದು ಅವರಲ್ಲಿ ಮನವಿ ಮಾಡಬೇಕು. ರಾಷ್ಟ್ರಪತಿಗಳು ಮಧ್ಯ ಪ್ರವೇಶ ಮಾಡಿ ತನಿಖೆ ನಡೆಸಿ ಎಂದು ರಾಜ್ಯಪಾಲರಿಗೆ ಪತ್ರ ಬರೆಯಬೇಕು. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡುವಾಗ ಕೇವಲ 14 ಸೈಟ್ ಗಳ ಮೇಲೆ ಮಾತ್ರ ಏಕೆ ಅನುಮತಿ ನೀಡಿದ್ದಾರೆ. ಅಧಿಕಾರಿಗಳ ಮೇಲೆ ಏಕೆ ಕ್ರಮವಿಲ್ಲ. 125 ಸೈಟ್ ಗಳನ್ನು ಪಡೆದವರ ಮೇಲೆ ಏಕೆ ಕ್ರಮವಿಲ್ಲ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+