Krishna Byre Gowda: ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಿಹಿ ಸುದ್ದಿ ಕೊಟ್ಟ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು ಮಾರ್ಚ್ 5: ಗ್ರಾಮ ಆಡಳಿತ ಅಧಿಕಾರಿಗಳಿಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಸಿಹಿ ಸುದ್ದಿಯನ್ನು ಕೊಟ್ಟಿದ್ದಾರೆ. ವಿಧಾನಪರಿಷತ್‌ನಲ್ಲಿ ಪ್ರಶ್ನೋತ್ತರದ ವೇಳೆ ಮಾತನಾಡಿದ ಅವರು ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ಸರ್ಕಾರ ಮುಂದಾಗಿ ಎಂದು ತಿಳಿಸಿದ್ದಾರೆ. ಇದಕ್ಕಾಗಿ ಲ್ಯಾಪ್‌ಟಾಪ್ ಖರೀದಿ ಮಾಡುವ ಪ್ರಕ್ರಿಯೆ ಕೂಡ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

ಹೌದು.. ಪ್ರಶೋತ್ತರ ವೇಳೆ ಬಿಜೆಪಿಯ ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಕೃಷ್ಣ ಬೈರೇಗೌಡ ಅವರು, ಗ್ರಾಮ ಆಡಳಿತ ಅಧಿಕಾರಿಗಳಿಗೆ ನೀಡಲು 4 ಸಾವಿರ ಲ್ಯಾಪ್ಟಾಪ್ ಖರೀದಿಸುವ ಪ್ರಕ್ರಿಯೆ ಜಾರಿಯಲ್ಲಿದೆ. 2024-25 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಲ್ಯಾಪ್‌ಟಾಪ್ ಖರೀದಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು.

laptops to be distributed to village administration officers soon krishna byre gowda

ಜೊತೆಗೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ಒದಗಿಸುವ ಛಾವಡಿಗಳು ಕಂದಾಯ ಇಲಾಖೆಯ ಸುಪರ್ಧಿಗೆ ಸೇರಿರುತ್ತವೆ. ಈ ಛಾವಡಿಗಳು ಶಿಥಿಲಗೊಂಡಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅವುಗಳ ಪುನರ್ ನಿರ್ಮಾಣ ಮಾಡಲು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ವಿಜಯಪುರ ಜಿಲ್ಲೆಯಲ್ಲಿ 82 ಗ್ರಾಮ ಛಾವಡಿಗಳು ಇರುತ್ತವೆ. 126 ಗ್ರಾಮಗಳಲ್ಲಿ ಗ್ರಾಮ ಛಾವಡಿಗಳು ಇರುವುದಿಲ್ಲ. ಗ್ರಾಮ ಛಾವಡಿಗಳನ್ನು ನಿರ್ಮಿಸುವ ಬಗ್ಗೆ ನಿಯಮಾನುಸಾರ ಪರಿಶೀಲಿಸಲಾಗುವುದು ಎಂದರು. ಗ್ರಾಮಪಂಚಾಯ್ತಿಯ ಆಡಳಿತ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ದಾಖಲೆಗಳನ್ನು ಸಂರಕ್ಷಿಸಿಕೊಳ್ಳಲು ಅವರಿಗೆ ಕಪಾಟುಗಳನ್ನು ಒದಗಿಸಲಾಗಿದೆ ಹಾಗೂ ಲೇಖನ ಸಾಮಗ್ರಿಗಳನ್ನು ನೀಡಲಾಗುತ್ತಿದೆ ಮತ್ತು ಪ್ರಯಾಣ ಭತ್ಯೆಗಳನ್ನು ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಮಾರ್ಚ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು 2025-26ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಕೆಲವು ಹೊಸ ಜಿಲ್ಲೆಗಳು ಸೃಷ್ಟಿಯಾಗಲಿವೆ ಎಂಬ ಮಾತುಗಳು ಕೇಳಿಬಂದಿವೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟನೆಯನ್ನು ನೀಡಿದ್ದಾರೆ. ಹೊಸ ಜಿಲ್ಲೆ ಅಥವಾ ತಾಲೂಕುಗಳನ್ನು ರಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಹೊಸ ಜಿಲ್ಲೆಗಳನ್ನು ಸೃಷ್ಟಿಸುವ ಬಗ್ಗೆ ಹಲವಾರು ದಶಕಗಳಿಂದಲೂ ಧ್ವನಿ ಎತ್ತಲಾಗಿದೆ. ಬೆಳಗಾವಿ ಜಿಲ್ಲೆಯನ್ನು ನಾಲ್ಕು ಜಿಲ್ಲೆಗಳಾಗಿ ವಿಭಜಿಸುವುದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿಗೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪುತ್ತೂರು, ತುಮಕೂರು ಜಿಲ್ಲೆಯ ಮಧುಗಿರಿಗೆ, ಮೈಸೂರು ಜಿಲ್ಲೆಯಲ್ಲಿ ಹುಣಸೂರು ಸೇರಿ ಹಲವಾರು ಕಡೆ ಹೊಸ ಜಿಲ್ಲೆಗಳನ್ನು ರಚಿಸುವ ಬಗ್ಗೆ ಒತ್ತಾಯ ಹೆಚ್ಚಾಗಿದೆ. ಈ ವಿಚಾರವನ್ನು ಸಿದ್ದರಾಮಯ್ಯ ಅವರು ಬಜೆಟ್ ವೇಳೆ ಮಮಡಿಸುವ ನಿರೀಕ್ಷೆ ಇತ್ತು. ಆದರೆ ರಾಜ್ಯ ಸರ್ಕಾರದ ಮುಂದೆ ಈ ರೀತಿಯಾಗಿ ಯಾವುದೇ ಪ್ರಸ್ತಾಪವಿಲ್ಲ ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

"ಜನಗಣತಿ ಸಂದರ್ಭದಲ್ಲಿ ಯಾವ ರಾಜ್ಯಗಳೂ ಹೊಸ ಕಂದಾಯ ಜಿಲ್ಲೆ ಘೋಷಿಸಬಾರದು ಎಂದು ಕೇಂದ್ರ ಸರ್ಕಾರದ ನಿಯಮವಿದೆ. ಅಲ್ಲದೆ ರಾಜ್ಯ ಸರ್ಕಾರದ ಮುಂದೆಯೂ ಯಾವುದೇ ಹೊಸ ಜಿಲ್ಲೆ ಅಥವಾ ತಾಲೂಕು ರಚನೆಯ ಪ್ರಸ್ತಾವನೆ ಇಲ್ಲ" ಎಂದು ಕೃಷ್ಣ ಬೈರೇಗೌಡ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+