ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ: ಹೆಚ್ ಡಿ ಕುಮಾರಸ್ವಾಮಿ ಕಿಡಿ
ಬೆಂಗಳೂರು,ಡಿಸೆಂಬರ್ 26: ರೈತರ ಬಗ್ಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ನೀಡಿರುವ ಹೇಳಿಕೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಚಿವ ಶ್ರೀ ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ತಮ್ಮ ಹೇಳಿಕೆಯನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಸಚಿವ ಶ್ರೀ ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು ಎಂದು ಹೇಳಿದ್ದಾರೆ.

ನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಶಿವಾನಂದ ಪಾಟೀಲ್ ಹೇಳಿಕೆಗೆ ಬಿಜೆಪಿ ಕಿಡಿ
ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತೆ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ರಾಜ್ಯ ಬಿಜೆಪಿ (BJP) ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸರ್ಕಾರ ರೈತರನ್ನು ಪದೇ ಪದೆ ಅವಮಾನ ಮಾಡುತ್ತಿದೆ. ಸಚಿವ ಶಿವಾನಂದ ಪಾಟೀಲ್ಹೇ ಳಿಕೆಯನ್ನು ಬಿಜೆಪಿ ಖಂಡಿಸುತ್ತೆ. ಶಿವಾನಂದ ಪಾಟೀಲ್ ರೈತರ ಬಳಿ ಕ್ಷಮೆಯಾಚಿಸಬೇಕು. ಶಿವಾನಂದ ಪಾಟೀಲ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದರು.
ಶಿವಾನಂದ ಪಾಟೀಲ್ ಅವರು ನೀಡಿರುವ ಹೇಳಿಕೆ ಅತ್ಯಂತ ಬೇಜವಾಬ್ದಾರಿತನದ್ದು, ಇಂತಹ ಹೇಳಿಕೆಯನ್ನು ಸಚಿವರು ಎಂದಿಗೂ ನೀಡಬಾರದು. ಶಿವಾನಂದ ಪಾಟೀಲ್ ಅವರ ಹೇಳಿಕೆ ಸಹನೀಯವಲ್ಲ ಇದು ರೈತರನ್ನು ಅವಮಾನಿಸುವ ಹೇಳಿಕೆಯಾಗಿದೆ. ರೈತ ಪರವಾದ ಯಾವುದೇ ಯೋಜನೆ ನೀಡದ ಸರ್ಕಾರವೀಗ ರೈತರನ್ನು ಅವಮಾನಿಸುತ್ತದೆ ಎಂದು ರಾಜ್ಯ ಬಿಜೆಪಿ ಹೇಳಿದೆ.
ಸಚಿವರ ಹೇಳಿಕೆಯನ್ನು ಒಂದೆಡೆ, ರೈತರು ಬರಗಾಲ ಬರುವುದನ್ನೇ ಕಾಯುತ್ತಿರುತ್ತಾರೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ರೈತರಿಗೆ ಅಪಮಾನ ಮಾಡುತ್ತಿದ್ದಾರೆ. ಮತ್ತೊಂದೆಡೆ ನೀರಿನ ಬೆಲೆ ಹೆಚ್ಚು ಮಾಡುತ್ತಿದ್ದೇವೆ, ಸ್ವಲ್ಪ ಅಡ್ಜೆಸ್ಟ್ ಮಾಡ್ಕೊಳ್ಳಿ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ನಗರವಾಸಿಗಳಿಗೆ ಹೇಳುತ್ತಿದ್ದಾರೆ!ಜನರ ಮೇಲೆ ಹೊರಿಸುತ್ತಿರುವ ಹೊರೆಗಳನ್ನು ತೀರಾ ಸಹಜ ಎಂಬಂತೆ ಹೇಳುತ್ತಿರುವ ನಗರಾಭಿವೃದ್ಧಿ ಸಚಿವರಿಗೆ ನಗರವಾಸಿಗಳ ಕಷ್ಟಗಳೇ ಗೊತ್ತಿಲ್ಲದಿರುವುದು ಕೋಟ್ಯಂತರ ಮಂದಿಯ ಪಾಲಿನ ದುರಾದೃಷ್ಟ.
ಕಳೆದ ಏಳು ತಿಂಗಳಿಂದಲೂ ಬಸ್ಸಿನಿಂದ ಹಿಡಿದು, ವಿದ್ಯುತ್ ದರ ಏರಿಕೆಯೂ ಸೇರಿದಂತೆ ಸಿಗದಿರುವ ರಾಜ್ಯ ಸರ್ಕಾರದ ಅಕ್ಕಿಯವರೆಗೆ ಎಲ್ಲದರಲ್ಲೂ ಕರ್ನಾಟಕದ ಜನ ಅಡ್ಜಸ್ಟ್ಮೆಂಟ್ ಮಾಡಿಕೊಂಡೇ ಬರುತ್ತಿದ್ದಾರೆ. ಇನ್ನೂ ಎಷ್ಟು ಅಡ್ಜೆಸ್ಟ್ ಮಾಡಿಕೊಳ್ಳಬೇಕು ಸಿದ್ದರಾಮಯ್ಯ ಅವರೇ? ಮುಖ್ಯಮಂತ್ರಿಗಳು ಖಂಡಿಸಬೇಕಾಗಿತ್ತು, ರೈತರ ಕ್ಷಮೆ ಕೇಳಬೇಕಿತ್ತು, ಆದರೆ ಲಜ್ಜೆಗೆಟ್ಟ ಸರ್ಕಾರ ಯಾವುದನ್ನೂ ಮಾಡುತ್ತಿಲ್ಲ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.
ಸಚಿವ ಶ್ರೀ ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 25, 2023
ನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು…












Click it and Unblock the Notifications