ಉತ್ತರಪ್ರದೇಶದಲ್ಲಿ ಕನ್ನಡಿಗರಿದ್ದ ಬಸ್ ಅಪಘಾತ, ಓರ್ವ ಸಾವು
ಬೆಂಗಳೂರು, ಮಾರ್ಚ್ 06 : ಕರ್ನಾಟಕದ ಪ್ರಯಾಣಿಕರಿದ್ದ ಬಸ್ಸೊಂದು ಉತ್ತರಪ್ರದೇಶದ ಚಂಡೌಲಿಯಲ್ಲಿ ಸೋಮವಾರ ಅಪಘಾತಕ್ಕೀಡಾಗಿದ್ದು, ಓರ್ವರು ಸಾವಿಗೀಡಾಗಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಈ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ ರಾಜ್ ಕುಮಾರ್ ಸಿವಿಲ್ ಸರ್ವೀಸ್ ಅಕಾಡೆಮಿಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಡಾ ರಾಜ್ ಕುಮಾರ್ ಪುತ್ರರಾದ ರಾಘವೇಂದ್ರ ರಾಜಕುಮಾರ್, ಶಿವರಾಜಕುಮಾರ್, ಪುನೀತ್ ರಾಜಕುಮಾರ್ ಮತ್ತು ಗಣ್ಯರು ಮುಖ್ಯಮಂತ್ರಿಗಳ ಜೊತೆ ಉಪಸ್ಥಿತರಿದ್ದರು.

ವಿಶು ಕುಮಾರ್ ಅವರಿಗೆ ಪ್ರಶಸ್ತಿ
ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ನೀಡುವ ಅತ್ಯುತ್ತಮ ಸಂವಹನಕಾರ (ಸರ್ಕಾರ) ಪ್ರಶಸ್ತಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್.ಆರ್. ವಿಶುಕುಮಾರ್ ಅವರು ಪಡೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ 11 ನೇ ಜಾಗತಿಕ ಸಂವಹನ ಸಮ್ಮೇಳನದಲ್ಲಿ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ ಖರ್ಗೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.












Click it and Unblock the Notifications