ಚಿತ್ರಗಳು : ಕುಡಿಯುವ ನೀರಿಗಾಗಿ ಕೋಲಾರ, ಚಿಕ್ಕಬಳ್ಳಾಪುರ ಬಂದ್

ಕೋಲಾರ, ಡಿಸೆಂಬರ್ 21 : ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಸೋಮವಾರ ಕರೆ ನೀಡಿರುವ ಕೋಲಾರ ಮತ್ತು ಚಿಕ್ಕಬಳ್ಳಾಪುರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಶಾಶ್ವತ ನೀರಾವರಿ ಹೋರಾಟ ಸಮಿತಿ ಹಾಗೂ ಯುವಶಕ್ತಿ ಸಂಘಟನೆಗಳು ಡಿಸೆಂಬರ್ 21ರ ಕೋಲಾರ-ಚಿಕ್ಕಬಳ್ಳಾಪುರ ಬಂದ್‌ಗೆ ಕರೆ ನೀಡಿವೆ. ಬೆಳಗ್ಗೆ 6ರಿಂದ ಸಂಜೆ 6ರ ತನಕ ಬಂದ್ ಕರೆ ನೀಡಲಾಗಿದೆ. [ಕೋಲಾರ ಬಂದ್ ಏಕೆ?]

kolar

ಸೋಮವಾರ ಮುಂಜಾನೆ 5 ಗಂಟೆಗೆ ಪ್ರತಿಭಟನಾಕಾರರು ಪಂಜಿನ ಮೆರವಣಿ ಮಾಡುವುದರ ಮೂಲಕ ಪ್ರತಿಭಟನೆಯ ಕಾವು ಹೆಚ್ಚಿಸಿದರು. ಚಿಕ್ಕಬಳ್ಳಾಪುರದಲ್ಲಿ ಶಿಡ್ಲಘಟ್ಟ ವೃತದಿಂದ ಹೊರಟ ಪ್ರತಿಭಟನಾಕಾರರು ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. [ಕೋಲಾರದಲ್ಲಿ ಹಸಿರು ಕ್ರಾಂತಿಗೆ ಕೈ ಜೋಡಿಸಿದ ಯುವಕರು]

chikkaballapur

ಮುಂಜಾನೆಯಿಂದಲೇ ಪ್ರತಿಭಟನೆ ಆರಂಭವಾಗಿದ್ದರಿಂದ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಶಾಲಾ ಕಾಲೇಜುಗಳು ಮುಚ್ಚಿವೆ, ದೂರದ ಊರುಗಳಿಗೆ ತೆರಳಬೇಕಿದ್ದ ಜನರು ಬಸ್ಸುಗಳಿಲ್ಲದೇ ಪರದಾಡುವಂತಾಗಿದೆ. [ಎತ್ತಿನಹೊಳೆ ಯೋಜನೆ : ಸರ್ಕಾರದ ಸ್ಪಷ್ಟನೆಗಳು]

water

ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ : ಶಾಶ್ವತ ನೀರಾವರಿ ಹೋರಾಟ ಸಮಿತಿ ಚಿಕ್ಕಬಳ್ಳಾಪುರದ ಹೊರವಲಯದ ಚದುಲಪುರ ಕ್ರಾಸ್‌ಬಳಿ ಕಳೆದ ಮೂರು ತಿಂಗಳಿನಿಂದ ಶಾಶ್ವತ ನೀರಾವರಿ ಯೋಜನೆಗಳ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಸ್ಪಂದಿಸಿಲ್ಲ.

protest

ಪ್ರತಿಭಟನೆ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ಕೊಟ್ಟಿದ್ದ ಮುಖ್ಯಮಂತ್ರಿಗಳು ಎರಡೂ ಜಿಲ್ಲೆಗಳ ಸಂಸದರು, ಶಾಸಕರು, ಹೋರಾಟಗಾರರ ಜೊತೆ ಸಭೆ ನಡೆಸಿ ಶಾಶ್ವತ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದರು. ಆದರೆ, ಆ ಭರವಸೆಯೂ ಈಡೇರಿಲ್ಲ ಎಂದು ಪ್ರತಿಭಟನಾನಿರತರು ಆರೋಪಿಸಿದರು.

60 ವರ್ಷಗಳಿಂದ ಅನ್ಯಾಯವಾಗುತ್ತಿದೆ : 'ಬಯಲು ಸೀಮೆಯ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆಯನ್ನು ರೂಪಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಕಳೆದ 60 ವರ್ಷಗಳಿಂದ ಅನ್ಯಾಯ ಮಾಡುತ್ತಿದೆ. ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಂದ್ ಕೈಗೊಳ್ಳಲಾಗಿದೆ' ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್. ಆಂಜನೇಯ ರೆಡ್ಡಿ ಹೇಳಿದ್ದಾರೆ.

protest in kolar
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+