Land Documents: 100 ಕೋಟಿ ಭೂ ದಾಖಲೆ ಪುಟಗಳು ಡಿಜಿಟಲೀಕರಣ: ಕಂದಾಯ ಸಚಿವ
ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚೆಗೆ ಆಸ್ತಿ ದಾಖಲೆಗಳು ಡಿಜಿಟಲೀಕರಣಗೊಂಡಿದ್ದವು. ಇದೀಗ ಕಂದಾಯ ಇಲಾಖೆ ವ್ಯಾಪ್ತಿಯ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ಚಾಲನೆ ನೀಡಲಾಗಿದೆ. ಇದರಿಂದ ನಕಲಿ ಮಾಹಿತಿ ಸೇರಿಸುವುದು ಹಾಗೂ ಸುಳ್ಳು ದಾಖಲೆಗಳನ್ನು ತಡೆಯಲಾಗುತ್ತದೆ. ಇದು ಭವಿಷ್ಯದಲ್ಲಿ ಕೂತಲ್ಲೇ ಗ್ರಾಮೀಣ ಭಾಗದ ಭೂಮಿ ಮಾಲೀಕರು ದಾಖಲೆಗಳ ಖಚಿತ ಮಾಹಿತಿ ಪಡೆಯಬಹುದು. ಭೂಮಿ ಮಾರಾಟ ವೇಳೆ ಉಂಟಾಗುವ ಸಂಭವನೀಯ ತೊಂದರೆ ತಪ್ಪಲಿದೆ.
ರಾಜ್ಯದಲ್ಲಿ ಭೂ ದಾಖಲೆಗಳ ಸಂಪೂರ್ಣ ಡಿಜಿಟಲೀಕರಣ ಮಾಡುವ 'ಭೂ ಸುರಕ್ಷಾ ಯೋಜನೆ' ಭಾಗವಾಗಿ ಬೆಂಗಳೂರು ನಗರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ದಾಖಲೆಗಳ ಸ್ಕ್ಯಾನಿಂಗ್ ಕಾರ್ಯಕ್ಕೆ ಕಂದಾಯ ಸಚಿವರು ಚಾಲನೆ ನೀಡಿದರು. ಇದೇ ಯೋಜನೆಯಡಿ ಕಳೆದ ವರ್ಷ ಜನವರಿಯಲ್ಲಿ ತಾಲೂಕು ವ್ಯಾಪ್ತಿಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣ ಕಾರ್ಯ ಆರಂಭಿಸಲಾಗಿತ್ತು. ಇದೀಗ ಕಂದಾಯ ಇಲಾಖೆ ವ್ಯಾಪ್ತಿಯ ಭೂ ಎಲ್ಲ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ. ಮುಂದಿನ ಮೂರು ತಿಂಗಳಲ್ಲಿ ಸುಮಾರು 100 ಕೋಟಿ ದಾಖಲೆಯ ಪುಟಗಳು ಡಿಜಿಟಲ್ ಸ್ವರೂಪ ಪಡೆಯಲಿವೆ.

100 ಕೋಟಿ ಪುಟಗಳು ಸ್ಕ್ಯಾನಿಂಗ್, ಡಿಜಿಟಲ್
ಒಟ್ಟು ಸುಮಾರು 150 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೇ 100 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಬೆಂಗಳೂರು ಉತ್ತರ ಮತ್ತು ದಕ್ಷಿಣ ಉಪವಿಭಾಗಾಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ 70 ತಾಲೂಕುಗಳಲ್ಲಿ ಗಣಕೀಕರಣ ರ್ಪೂಗೊಂಡಿದೆ. ಇನ್ನೂ 100 ಕೋಟಿ ದಾಖಲೆಗಳ ಪುಟದಲ್ಲಿ 62 ಲಕ್ಷದಷ್ಟು ದಾಖಲೆಗಳು ಸ್ಕ್ಯಾನಿಂಗ್ ಮಾಡಿ ಡಿಜಿಟಲೀಕರಣಗೊಂಡಿವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದ್ದಾರೆ.
ಬಾಕಿ ಉಳಿದ ಭೂ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡಿ ಆನ್‌ಲೈನ್‌ಗೆ ತರಲು ಮುಂದಿನ 3-4 ತಿಂಗಳು ಕಾಲಾವಕಾಶ ಬೇಕಾಗುತ್ತದೆ. ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಸಚಿವರು ಗಣಕೀಕರಣಕ್ಕೆ ಚಾಲನೆ ನೀಡಿದ್ದಾರೆ. ಈ ಮೂಲಕ ರಾಜ್ಯಾದ್ಯಂತ ಎಲ್ಲ ಎಸಿ, ಡಿಸಿ ಕಚೇರಿಗಳ ಕಂದಾಯ ದಾಖಲೆಗಳ ಗಣಕೀಕರಣ ಆರಂಭಿಸಲಾಗಿದೆ.
ನಕಲಿ ದಾಖಲೆ ಸೇರಿಸಲು ಯತ್ನ, ಎಫ್‌ಐಆರ್
ಈ ವೇಳೆ ಲಭ್ಯವಾದ ನಕಲಿ ದಾಖಲೆಗಳನ್ನು ಅಗತ್ಯವೆನಿಸಿದರೆ ವಿಧಿ ವಿಜ್ಞಾನ ಪ್ರಯೋಗಾಗಲಕ್ಕೆ ಕಳುಹಿಸಿ ಪರಿಶೀಲಿಸಲಾಗುತ್ತದೆ. ನೈಜತೆ ಪರಿಶೀಲಿಸಿ, ಸುಳ್ಳು ದಾಖಲೆಗಳ ವಿರುದ್ಧ ಕ್ರಮಕ್ಕೆ ಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಗಣಕೀಕರಣ ವೇಳೆ ನಕಲಿ ದಾಖಲೆಗಳನ್ನು ಸ್ಕ್ಯಾನ್ ಮಾಡಿದ್ದ ಆನೇಕಲ್, ದೇವನಹಳ್ಳಿ ಸೇರಿ ವಿವಿಧ ಭಾಗದ 16 ಮಂದಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಮೂಲಕ ಕಂದಾಯ ಸಚಿವ ಕೃಷ್ಣ ಬೈರೇಗೌಡರು ಅಕ್ರಮ ತಡೆಯಲು ಮುಂದಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications