ಯಡಿಯೂರಪ್ಪ ತಮಗೆ ತಾನೇ ವಯಸ್ಸಾಗಿದೆ ಅಂದುಕೊಂಡಿರಬಹುದು: ಮಾಧುಸ್ವಾಮಿ!
ಬೆಂಗಳೂರು, ಜು. 22: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ನಿವೃತ್ತಿಯ ಬಗ್ಗೆ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ.
ಶುಕ್ರವಾರವಷ್ಟೇ ಶಿವಮೊಗ್ಗದಲ್ಲಿ ಬಿ.ಎಸ್. ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿದರು. ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ಪ್ರೀತಿಯ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಬಿಟ್ಟುಕೊಡುತ್ತಿರುವುದಾಗಿ ಘೋಷಣೆ ಮಾಡಿದರು. ಯಡಿಯೂರಪ್ಪ ಅವರ ಈ ಘೋಷಣೆ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇದರ ಬೆನ್ನಲ್ಲೇ ಬಿ.ಎಸ್. ಯಡಿಯೂರಪ್ಪ ಅವರ ತೀರ್ಮಾನದ ಬಗ್ಗೆ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ತೀಕ್ಷ್ಣವಾಗಿ ಹೇಳಿಕೆ ಕೊಟ್ಟಿದ್ದಾರೆ.

ಯಡಿಯೂರಪ್ಪ ಚುನಾವಣೆಗೆ ನಿಲ್ಲುವುದು, ನಿಲ್ಲದೇ ಇರುವುದು ಯಡಿಯೂರಪ್ಪ ಅವರ ಸ್ವಂತ ವಿಷಯ. ಅವರೇ ಹೇಳಿದ್ದಾರೆ ಎಂದರೆ ಇರಬಹುದು. ಯಡಿಯೂರಪ್ಪ ಘೋಷಣೆ ಮಾಡಿದ ಮೇಲೆ ನಾವು ಯಾರು ಹೇಳುವುದಕ್ಕೆ? ಪಕ್ಷ ಏನೂ ಹೇಳಿಲ್ಲ. ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಯಡಿಯೂರಪ್ಪ ಅವರಿಗೆ ಯಾರೂ ಹೇಳಿಲ್ಲ. ಯಡಿಯೂರಪ್ಪ ಅವರೇ ತಾವೇ ವಯಸ್ಸು ಅಗಿದೆ ಅಂತ ಅಂದುಕೊಂಡಿರಬಹುದು ಎಂದಯ ಮಾರ್ಮಿಕವಾಗಿ ನುಡಿದರು.

ಸಿದ್ದರಾಮಯ್ಯ ಪದೇ ಪದೇ ಕೊನೆ ಚುನಾವಣೆ ಅಂತಿದ್ದಾರೆ. ಅದಕ್ಕೆ ಕಮೆಂಟ್ ಮಾಡಿ ಅಂದ್ರೆ ಏನು ಹೇಳೋದು ಎನ್ನುವ ಮೂಲಕ ಯಡಿಯೂರಪ್ಪ ಮುಂದೆ ಚುನಾವಣೆಯಲ್ಲಿ ನಿಂತರೂ ನಿಲ್ಲಬಹುದು. ನಿಲ್ಲದೆಯೂ ಇರಬಹುದು ಎಂಬ ದಾಟಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications