ಅ.19 ರಂದು ಬಿಜೆಪಿಯಿಂದ ರಾಜ್ಯಾದ್ಯಂತ ಧರಣಿ

Written By: Ramesh
Subscribe to Oneindia Kannada

ಬೆಂಗಳೂರು, ಅಕ್ಟೋಬರ್. 18 : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ಅಕ್ಟೋಬರ್.19 ಬುಧವಾರ ರಾಜ್ಯಾದ್ಯಂತ ಒಂದು ದಿನದ ಧರಣಿ ನಡೆಸಲಿದೆ.

ಬೆಂಗಳೂರಿನಲ್ಲಿ ಸೋಮವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಅವರು ಈ ಕುರಿತು ಮಾಹಿತಿ ನೀಡಿದರು. ಬುಧವಾರ ಬೆಳಗ್ಗೆ 11ರಿಂದ ಸಂಜೆ 5 ಗಂಟೆಯ ವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರದ ವಿರುದ್ಧ ಧರಣಿ ನಡೆಯಲಿದೆ. ಆನಂದರಾವ್ ವೃತ್ತದ ಬಳಿ ಇರುವ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಯಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಈ ಧರಣಿಯ ನೇತೃತ್ವ ವಹಿಸಲಿದ್ದಾರೆಎಂದರು.

BJP

ಅಕ್ಟೋಬರ್ 21ರಂದು ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಬಿಜೆಪಿ ನಾಯಕರು ದೂರು ನೀಡಲಿದ್ದಾರೆ.

BJP Press Note

'ಮೂಡಬಿದಿರೆಯ ಪ್ರಶಾಂತ್ ಪೂಜಾರಿ, ಮಡಿಕೇರಿಯ ಕುಟ್ಟಪ್ಪ, ಮೈಸೂರಿನ ರಾಜು, ಬೆಂಗಳೂರಿನ ರುದ್ರೇಶ್ ಹತ್ಯೆಗೆ ರಾಜ್ಯ ಸರ್ಕಾರವೇ ಕಾರಣ' ಎಂದು ದೂರಿದ ಅರವಿಂದ ಲಿಂಬಾವಳಿ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು.

ಈ ವೇಳೆ ಮಾತನಾಡಿದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು, 'ಆರ್ ಎಸ್ಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಹತ್ಯೆಯ ಹಿಂದೆ ಪಾಪ್ಯುಲರ್ ಫ್ರಂಟ್ ಮತ್ತು ಕರ್ನಾಟಕ ಪೋರಂ ಫಾರ್ ಡಿಗ್ನಿಟಿ ಸಂಘಟನೆಗಳ ಕೈವಾಡವಿದೆ.

ಆದ್ದರಿಂದ, ಎರಡೂ ಸಂಘಟನೆಗಳನ್ನು ನಿಷೇಧಿಸಬೇಕು' ಎಂದು ಒತ್ತಾಯಿಸಿದರು. ಹಾಗೂ ರದ್ರೇಶ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರುಗಳನ್ನು ನೀಡಬೇಕೆಂದು ಆಗ್ರಹಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
In protest the collapse of law and order in the state, the BJP decided to stage demonsrtation throughtout the state from 11Am to 5 PM on October 9. state bjp general secretary Arvinda Limbavali said in a press conference on Monday.
Please Wait while comments are loading...