ಶಾಸಕ ವಿರೂಪಾಕ್ಷಪ್ಪ ಪ್ರಕರಣದಲ್ಲಿ ಕಾನೂನು ತನ್ನದೆ ಕ್ರಮ ಕೈಗೊಳ್ಳುತ್ತೆ: ಬಿಎಸ್‌ವೈ
ನಾನಾಗಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲವೇ ಕಾಂಗ್ರೆಸ್ ತನಿಖೆಯ ವಿಧಾನವನ್ನು ನಿರ್ಧರಿಸಲು ಸಾಧ್ಯವಿಲ್ಲ. ವಿರೂಪಾಕ್ಷಪ್ಪ ಪ್ರಕರಣದ ತನಿಖೆಯನ್ನು ಲೋಕಾಯುಕ್ತರು ನಡೆಸುತ್ತಿದೆ ಎಂದು ಬಿಎಸ್‌ವೈ ಹೇಳಿದ್ದಾರೆ,
ಬೆಳಗಾವಿ, ಮಾರ್ಚ್ 4: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣವನ್ನು ಲೋಕಾಯುಕ್ತ ತನಿಖೆ ನಡೆಸುತ್ತಿದ್ದು, ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಶನಿವಾರ ಬೈಲಹೊಂಗಲ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನಾಗಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲವೇ ಕಾಂಗ್ರೆಸ್ ತನಿಖೆಯ ವಿಧಾನವನ್ನು ನಿರ್ಧರಿಸಲು ಸಾಧ್ಯವಿಲ್ಲ. ವಿರೂಪಾಕ್ಷಪ್ಪ ಪ್ರಕರಣದ ತನಿಖೆಯನ್ನು ಲೋಕಾಯುಕ್ತರು ನಡೆಸುತ್ತಿದ್ದು, ಮುಂದಿನ ಕ್ರಮ ಮತ್ತು ತನಿಖೆಯ ಬಗ್ಗೆ ಅವರು ನಿರ್ಧರಿಸುತ್ತಾರೆ. ಪ್ರಕರಣದ ಫಲಿತಾಂಶಕ್ಕಾಗಿ ನಾವು ಕಾಯಬೇಕಾಗಿದೆ ಮತ್ತು ಕಾನೂನು ತನ್ನದೇ ಆದ ಹಾದಿಯನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.

ವಿರೂಪಾಕ್ಷಪ್ಪ ಬಿಎಸ್ ಯಡಿಯೂರಪ್ಪ ಅವರ ಆಪ್ತರು ಎಂಬ ಸಿದ್ದರಾಮಯ್ಯ ಆರೋಪಕ್ಕೆ ಸಂಬಂಧಿಸಿದಂತೆ ವಿರೂಪಾಕ್ಷಪ್ಪ ಒಬ್ಬರೇ ಅಲ್ಲ, ಮಾಜಿ ಮುಖ್ಯಮಂತ್ರಿಯೂ ಅವರಿಗೆ ಆಪ್ತರಾಗಿದ್ದರು. ರಾಜ್ಯಾದ್ಯಂತ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಲಿದೆ ಎಂದರು.
ಲಂಚ ಪ್ರಕರಣದಲ್ಲಿ ತಮ್ಮ ಪುತ್ರನ ಬಂಧನದ ನಂತರ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದ ಆಡಳಿತಾರೂಢ ಬಿಜೆಪಿ ಸರ್ಕಾರವು ಹೆಚ್ಚುತ್ತಿರುವ ಭ್ರಷ್ಟಾಚಾರದ ಆರೋಪಗಳ ವಿರುದ್ಧ ತನ್ನನ್ನು ತಾನು ರಕ್ಷಿಸಿಕೊಳ್ಳುವ ಸವಾಲಿನ ಕೆಲಸವನ್ನು ಎದುರಿಸುತ್ತಿದೆ. ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ 'ಶೇ.40 ಕಮಿಷನ್' ರಣಕಹಳೆ ಮೊಳಗಿಸಿದೆ. ಈಗ ಈ ಆರೋಪದ ಮೇಲೆ ಬಿಜೆಪಿ ಪಕ್ಷವು ಈಗಾಗಲೇ ರಕ್ಷಣಾತ್ಮಕ ಹಂತದಲ್ಲಿದೆ.












Click it and Unblock the Notifications